ದಾವಣಗೆರೆ | ಜ್ವರದಿಂದ ವಿದ್ಯಾರ್ಥಿನಿ ಸಾವು: ಡೆಂಘೀ ಶಂಕೆ; ಆರೋಗ್ಯಾಧಿಕಾರಿಗಳ ವಿರುದ್ಧ ಜನರ ಆಕ್ರೋಶ

Date:

Advertisements

ರಾಜ್ಯಾದ್ಯಂತ  ಡೆಂಘೀ ಜ್ವರ ಸಂಕ್ರಾಮಿಕವಾಗಿ ಹರಡುತ್ತಿದ್ದು, ಮರಣ ಮೃದಂಗ ಬಾರಿಸುತ್ತಿದೆ. ಈ ಬಗ್ಗೆ ತುರ್ತು ಕ್ರಮಗಳನ್ನು ಕೈಗೊಂಡು ಆರೋಗ್ಯ ತುರ್ತು ಪರಿಸ್ಥಿತಿಯನ್ನು ಎದುರಿಸುವ ನಿಟ್ಟಿನಲ್ಲಿ ದಾವಣಗೆರೆ ಜಿಲ್ಲಾ ಆರೋಗ್ಯ ಇಲಾಖೆ ಕ್ರಮ ಕೈಗೊಳ್ಳಬೇಕಾಗಿತ್ತು. ಆದರೆ ಪದೇ ಪದೇ ಮರುಕಳಿಸುತ್ತಿರುವ ಡೆಂಘೀ ಪ್ರಕರಣಗಳು ಮತ್ತು ಶಂಕಿತ ಡೆಂಘೀ ಜ್ವರದ ಸಾವಿನ ಪ್ರಕರಣಗಳು ಜಿಲ್ಲಾ ಆರೋಗ್ಯ ಇಲಾಖೆ ಕಣ್ಮುಚ್ಚಿ ಕುಳಿತು ನಿರ್ಲಕ್ಷ ವಹಿಸುತ್ತಿದೆಯೇ ಎನ್ನುವ ಅನುಮಾನವನ್ನು ಮೂಡಿಸುತ್ತಿದೆ.

ಕಳೆದ ತಿಂಗಳು ಹೊನ್ನಾಳಿಯ ಓರ್ವ ಮತ್ತು ದಾವಣಗೆರೆಯ ಓರ್ವ ಯುವಕ ಸೇರಿದಂತೆ ಡೆಂಘೀನಿಂದ ಮೃತಪಟ್ಟ ಪ್ರಕರಣಗಳು ವರದಿಯಾಗಿದ್ದವು. ಇದರ ಬೆನ್ನಲ್ಲೇ ಜಿಲ್ಲಾ ಆರೋಗ್ಯ ಇಲಾಖೆ ತುರ್ತು ಕ್ರಮ ಕೈಗೊಳ್ಳುವುದಾಗಿ ಪ್ರತಿಕ್ರಿಯಿಸಿತ್ತು. ಆದರೀಗ ಜಗಳೂರಿನಲ್ಲಿ ಶಂಕಿತ ಡೆಂಘೀ ಜ್ವರದಿಂದ ಓರ್ವ ಯುವತಿ ಸಾವನ್ನಪ್ಪಿರುವುದು ಆರೋಗ್ಯ ಇಲಾಖೆಯ ಕ್ರಮವನ್ನು ಪ್ರಶ್ನಿಸುವಂತೆ ಮಾಡಿದೆ.

ಇತ್ತೀಚೆಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಜಗಳೂರಿಗೆ ಭೇಟಿ ನೀಡಿ ಅಲ್ಲಿನ ಸರ್ಕಾರಿ ಆಸ್ಪತ್ರೆಯ ಅವ್ಯವಸ್ಥೆ ಮತ್ತು ಶಿಥಿಲ ಕಟ್ಟಡವನ್ನು ಪರಿಶೀಲಿಸಿ ಶೀಘ್ರ ನೂತನ ಕಟ್ಟಡವನ್ನು ಒದಗಿಸುವುದಾಗಿ ಭರವಸೆ ನೀಡಿ, ಡೆಂಘೀ ಹಿನ್ನೆಲೆಯಲ್ಲಿ ಕ್ರಮ ಕೈಗೊಳ್ಳಲು ಜಿಲ್ಲಾಡಳಿತ, ಜಿಲ್ಲಾ ಆರೋಗ್ಯ ಇಲಾಖೆ ಮತ್ತು ತಾಲೂಕು ಆರೋಗ್ಯ ಇಲಾಖೆ, ವೈದ್ಯಾಧಿಕಾರಿಗಳಿಗೆ ಅಗತ್ಯ ಸೂಚನೆ ನೀಡಿದ್ದರು.

Advertisements

ಡೆಂಘೀ ಪ್ರಕರಣಗಳ ಬಗ್ಗೆ ಮುಂಜಾಗ್ರತೆ ವಹಿಸಲು ಶಾಸಕ.ಬಿ.ದೇವೇಂದ್ರಪ್ಪ ಅವರು ಪ್ರತ್ಯೇಕ ಸಭೆ ನಡೆಸಿ ಎಚ್ಚರಿಕೆ ನೀಡಿದ್ದರೂ ಸಹ, ತಾಲೂಕು ಆರೋಗ್ಯಾಧಿಕಾರಿ ಮಾತ್ರ ಪಟ್ಟಣದಲ್ಲಿನ ಜ್ವರದ ಪ್ರಕರಣಗಳ ಬಗ್ಗೆ ಕಣ್ಮುಚ್ಚಿ ಕುಳಿತಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.

ಇದರ ಬೆನ್ನಲ್ಲೇ ಮತ್ತೊಮ್ಮೆ ಡೆಂಘೀನಿಂದ ಜಗಳೂರು ನಗರದ ಭುವನೇಶ್ವರಿ ವೃತ್ತದ ಬಳಿಯಿರುವ ನಾಗರಾಜ್ ಎಂಬುವವರ ಪುತ್ರಿ ಕಾಲೇಜು ವಿದ್ಯಾರ್ಥಿನಿ ರೇಖಾ (19) ಮೃತಪಟ್ಟಿರುವುದು ತಾಲೂಕಿನ ಜನರಲ್ಲಿ ಆತಂಕ ಮೂಡಿಸಿದೆ.

ಈ ಬಗ್ಗೆ ಡೆಂಘೀ ತಡೆಗಟ್ಟಲು ಸೂಕ್ತ ಕ್ರಮ ವಹಿಸದ ತಾಲೂಕು ಆರೋಗ್ಯ ಇಲಾಖೆಯ ಬಗ್ಗೆ ಕಿಡಿಕಾರುತ್ತಿರುವ ಸಾರ್ವಜನಿಕರು, ಪೋಷಕರು ಮತ್ತು ನಗರದ ಜನತೆ ಸೂಕ್ತ ಕ್ರಮ ಕೈಗೊಂಡಿದ್ದರೆ, ಈ ಸಾವನ್ನು ತಪ್ಪಿಸಬಹುದು ಮತ್ತು ಡೆಂಘೀ ಭೀತಿ ಪ್ರಕರಣಗಳು ವರದಿಯಾಗದಂತೆ ತಡೆಯಬಹುದಿತ್ತು ಎಂದು ಆಕ್ರೋಶ ಹೊರಹಾಕುತ್ತಿದ್ದಾರೆ.

ಆರೋಗ್ಯ ಇಲಾಖೆಯ ನಿರ್ದೇಶನದಂತೆ ಮನೆ ಮನೆಗೆ ತೆರಳಿ ಆಶಾಕಾರ್ಯಕರ್ತೆಯರು ಹಾಗೂ ಆರೋಗ್ಯ ಇಲಾಖೆ ಸಿಬ್ಬಂದಿಗಳು ಮನೆಮನೆಗೆ ತೆರಳಿ ಸಮೀಕ್ಷೆ, ಲಾರ್ವಾ ಸರ್ವೆ, ಮಾಹಿತಿ ಪಡೆದಿದ್ದರೆ ಈ ಘಟನೆ ನಡೆಯುತ್ತಿರಲಿಲ್ಲ ಎಂದು ನೆರೆಹೊರೆಯ ಕುಟುಂಬದವರು ಹಾಗೂ ಸಾರ್ವಜನಿಕರು ತಿಳಿಸಿದ್ದಾರೆ. ಆರೋಗ್ಯ ಇಲಾಖೆಯ ನಿರ್ಲಕ್ಷವೇ ಈ ಸಾವಿಗೆ ಕಾರಣ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕಳೆದ ವಾರದಿಂದ ಜ್ವರದಿಂದ ಬಳಲುತ್ತಿದ್ದ ರೇಖಾ ವಿವಾಹ ಕಾರ್ಯಕ್ರಮಕ್ಕೆ ಬಳ್ಳಾರಿಗೆ ತೆರಳಿದಾಗ ಇದ್ದಕ್ಕಿದ್ದಂತೆ ತೀವ್ರ ಜ್ವರ ಕಾಣಿಸಿಕೊಂಡ ಹಿನ್ನೆಲೆ ಖಾಸಗಿ ಆಸತ್ರೆಯಲ್ಲಿ ಚಿಕಿತ್ಸೆಗೆಂದು ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದು, ಕುಟುಂಬದ ಆಕ್ರಂದನ ಮುಗಿಲುಮುಟ್ಟಿದೆ.

ಆರೋಗ್ಯ ಇಲಾಖೆ ಮಾಡಿದ ನಿರ್ಲಕ್ಷ್ಯದ ತಪ್ಪಿಗೆ ಕಾಲೇಜು ವಿದ್ಯಾರ್ಥಿನಿ ಯುವತಿ ಡೆಂಘೀ ಶಂಕಿತ ಮಹಾಮಾರಿಗೆ ಬಲಿಯಾಗಿರುವುದು ನಿಜಕ್ಕೂ ಪಟ್ಟಣದಲ್ಲಿ ಆತಂಕ ಹೆಚ್ಚಿಸಿದ್ದು, ಸೂಕ್ತ ಕ್ರಮ ಕೈಗೊಳ್ಳುವಂತೆ ಸಾರ್ವಜನಿಕರು ಒತ್ತಾಯಿಸಿದ್ದಾರೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ತೆಂಗಿನಕಾಯಿ ಕಳ್ಳತನ ಆರೋಪ: ವ್ಯಕ್ತಿಯ ಹತ್ಯೆ; ಆರೋಪಿಗಳ ಬಂಧನ

ತೆಂಗಿನಕಾಯಿ ಕಳ್ಳತನ ಮಾಡಿದ್ದಾನೆ ಎಂಬ ಕಾರಣಕ್ಕೆ ವ್ಯಕ್ತಿಯನ್ನು ಹತ್ಯೆ ಮಾಡಿರುವ ಘಟನೆ...

ಗದಗ | ಒಳಮೀಸಲಾತಿ ಅಂಗೀಕಾರ ಸ್ವಾಗತಾರ್ಹ: ಬಸವರಾಜ ಕಡೇಮನಿ

"ಒಳಮೀಸಲಾತಿ ಜಾರಿಗಾಗಿ ಒತ್ತಾಯಿಸಿ ಮೂವತ್ತೈದು ವರ್ಷಗಳ ನಿರಂತರ ಹೋರಾಟದ ಫಲದಿಂದ ರಾಜ್ಯ...

ಸಕಲೇಶಪುರ | ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣ ಬೆಂಬಲ ನೀಡಬೇಕು: ಬಿ ಆರ್‌ ಪಾಟೀಲ್

ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣವಾಗಿ ಬೆಂಬಲ ನೀಡಿದಾಗ ಮಾತ್ರ ವ್ಯಸನವನ್ನು...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

Download Eedina App Android / iOS

X