ದಾವಣಗೆರೆ | ಏಷ್ಯಾದ 2ನೇ ದೊಡ್ಡ ‘ಸೂಳೆಕೆರೆ’ ನೀರು ಕುಡಿಯಲು ಯೋಗ್ಯವಲ್ಲ

Date:

Advertisements

ಏಷ್ಯಾದ ಎರಡನೇ ಅತಿ ದೊಡ್ಡ ಕೆರೆ ಎಂದು ಖ್ಯಾತಿ ಪಡೆದಿರುವ ಸೂಳೆಕೆರೆ ನೀರು ಕುಡಿಯಲು ಯೋಗ್ಯವಲ್ಲ ಎಂದು ಚನ್ನಗಿರಿ ಮುಖ್ಯಾಧಿಕಾರಿ ಕೃಷ್ಣ ಕಟ್ಟಿಮನಿ ಹೇಳಿದ್ದಾರೆ. ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿ ಕೆರೆಬಿಳಚಿ ಬಳಿ ಸೂಳೆಕೆರೆ ಇದೆ. ಈ ಕೆರೆಯಿಂದ ಚಿತ್ರದುರ್ಗ, ಚನ್ನಗಿರಿ, ಜಗಳೂರು ಪಟ್ಟಣಗಳಿಗೆ ಕುಡಿಯುವ ನೀರು ಸರಬರಾಜು ಮಾಡಲಾಗುತ್ತಿತ್ತು. ಆದರೆ, ಈ ಕೆರೆಯ ನೀರು ಕುಡಿಯಲು ಯೋಗ್ಯವಲ್ಲ ಎಂದು ಹೇಳಲಾಗಿದ್ದು, ಆ ನೀರನ್ನು ಕುಡಿಯಲು ಬಳಸದಂತೆ ಕೃಷ್ಣ ಕಟ್ಟಿಮನಿ ಅವರು ಮನವಿ ಮಾಡಿದ್ದಾರೆ.

ಚಿತ್ರದುರ್ಗದ ಕವಾಡಿಗರಹಟ್ಟಿ ಬಡಾವಣೆಯಲ್ಲಿ ಕಲುಷಿತ ನೀರು ಸೇವಿಸಿ ಆರು ಮಂದಿ ಮೃತಪಟ್ಟಿದ್ದರು. ಹಲವರು ಅಸ್ವಸ್ಥರಾಗಿದ್ದರು. ಇದಕ್ಕೆ ಸೂಳೆಕೆರೆ ನೀರೇ ಕಾರಣವೆಂಬ ಅನುಮಾನ ವ್ಯಕ್ತವಾಗಿತ್ತು. ಹೀಗಾಗಿ, ಕೆರೆಯ ನೀರನ್ನು ಪ್ರಯೋಗಾಲಕ್ಕೆ ಕಳುಹಿಸಲಾಗಿತ್ತು. ಕೆರೆ ನೀರಲು ಕುಡಿಯಲು ಯೋಗ್ಯವಲ್ಲ ಎಂದು ವರದಿ ಬಂದಿತ್ತು. ಇದರಿಂದಾಗಿ,  ಮೂರು ತಿಂಗಳಿಂದ ಕುಡಿಯುವ ಉದ್ದೇಶಕ್ಕೆ ಕೆರೆಯ ನೀರನ್ನು ಸರಬರಾಜು ಮಾಡುವುದನ್ನು ಸ್ಥಗಿತಗೊಳಿಸಲಾಗಿತ್ತು.

ಇದೀಗ, ಕುಡಿಯಲು ಹೊರತು ಪಡಿಸಿ ಗೃಹ ಬಳಕೆ ಇತರ ಉದ್ದೇಶಗಳಿಗೆ ನೀರನ್ನು ಪೂರೈಕೆ ಮಾಡಲು ಚನ್ನಗಿರಿ ಪುರಸಭೆ ಆರಂಭಿಸಿದೆ. ನೀರನ್ನು ಯಾವುದೇ ಕಾರಣಕ್ಕೂ ಕುಡಿಯಲು ಬಳಸದಂತೆ ಜನರಲ್ಲಿ ಮನವಿ ಮಾಡಿದೆ.

Advertisements

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

ಚಿಕ್ಕಮಗಳೂರು l ತೆಂಗಿನಕಾಯಿ ಕಳ್ಳತನ ಆರೋಪ: ವ್ಯಕ್ತಿಯ ಹತ್ಯೆ; ಆರೋಪಿಗಳ ಬಂಧನ

ತೆಂಗಿನಕಾಯಿ ಕಳ್ಳತನ ಮಾಡಿದ್ದಾನೆ ಎಂಬ ಕಾರಣಕ್ಕೆ ವ್ಯಕ್ತಿಯನ್ನು ಹತ್ಯೆ ಮಾಡಿರುವ ಘಟನೆ...

ಗದಗ | ಒಳಮೀಸಲಾತಿ ಅಂಗೀಕಾರ ಸ್ವಾಗತಾರ್ಹ: ಬಸವರಾಜ ಕಡೇಮನಿ

"ಒಳಮೀಸಲಾತಿ ಜಾರಿಗಾಗಿ ಒತ್ತಾಯಿಸಿ ಮೂವತ್ತೈದು ವರ್ಷಗಳ ನಿರಂತರ ಹೋರಾಟದ ಫಲದಿಂದ ರಾಜ್ಯ...

Download Eedina App Android / iOS

X