ಬ್ಯಾಂಕ್‌ಗಳಲ್ಲಿಯೇ ದರೋಡೆ ಮಾಡುವ ಪ್ರಕರಣಗಳು ಆಗ್ಗಾಗ್ಗೆ ಬೆಳಕಿಗೆ ಬರುತ್ತಲೇ ಇವೆ. ಇದೀಗ, ದಾವಣಗೆರೆಯಲ್ಲಿಯೂ ಅಂಥದ್ದೇ ಪ್ರಕರಣ ನಡೆದಿದ್ದು, ಬ್ಯಾಂಕ್ ಲಾಕರ್‌ನಲ್ಲಿ ಇರಿಸಲಾಗಿದ್ದ ಸುಮಾರು 4 ಕೋಟಿ ರೂ. ಮೌಲ್ಯದ ಚಿನ್ನಾಭರಣಗಳನ್ನು ಕಳ್ಳರು ದೋಚಿಸಿದ್ದಾರೆ.
ದಾವಣಗೆರೆ ಜಿಲ್ಲೆಯ ನ್ಯಾಮತಿಯಲ್ಲಿ ದರೋಡೆ ಪ್ರಕರಣ ನಡೆದಿದೆ. ಎಸ್‌ಬಿಐ ಬ್ಯಾಂಕ್‌ನಲ್ಲಿ ದರೋಡೆಕೋರರು ಚಿನ್ನಾಭರಣೆವನ್ನು ದೋಚಿಸಿದ್ದಾರೆ. ಕಳ್ಳರ ಬಂಧನಕ್ಕಾಗಿ ಪೊಲೀಸರ ಐದು ತಂಡವನ್ನು ರಚಿಸಲಾಗಿದೆ. ಜೊತೆಗೆ ಶ್ವಾನ ದಳವನ್ನೂ ನಿಯೋಜಿಸಲಾಗಿದೆ.
ದಾವಣಗೆರೆ ಎಸ್‌ಪಿ ಉಮಾ ಪ್ರಶಾಂತ್ ಅವರು ಸ್ಥಳಕ್ಕೆ ಭೇಟಿ ನೀಡಿದ್ದು, ಪರಿಶಿಲನೆ ನಡೆಸಿದ್ದಾರೆ. ಬೆರಳಚ್ಚು ತಂಡವು ಬ್ಯಾಂಕ್‌ನಲ್ಲಿ ಸಾಕ್ಷ್ಯ ಸಂಗ್ರಹಿಸಿ, ಪ್ರಯೋಗಕ್ಕೆ ಒಳಪಿಸಿದೆ. ಪೊಲೀಸರ ತಂಡಗಳು ಎಲ್ಲ ಸಿಸಿಟಿವಿಗಳನ್ನು ಪರಿಶೀಲಿಸುತ್ತಿದ್ದು, ಸ್ಥಳೀಯರಿಂದ ಮಾಹಿತಿ ಪಡೆದುಕೊಳ್ಳುವುದರಲ್ಲಿ ನಿರತವಾಗಿವೆ.