ದಾವಣಗೆರೆ | ಚಳುವಳಿಯಲ್ಲಿ ಪ್ರಯೋಗಶೀಲ ಗುಣಧರ್ಮವಿರಬೇಕು: ಪ್ರೊ.ಎ.ಬಿ.ರಾಮಚಂದ್ರಪ್ಪ

Date:

ಚಳುವಳಿಯಲ್ಲಿ ಪ್ರಯೋಗಶೀಲ ಗುಣಧರ್ಮವಿರಬೇಕು. ಇಲ್ಲವಾದರೆ ಚಳುವಳಿಕಾರರಲ್ಲಿ ಸನಾತನಿ ಗುಣಧರ್ಮ ಮೊಳಕೆಯೊಡೆದು ಚಳುವಳಿ ದುರ್ಬಲವಾಗುವ ಅಪಾಯವಿದೆ. ಪ್ರತಿಯೊಬ್ಬ ಕಾರ್ಮಿಕನಲ್ಲಿ ಪ್ರಯೋಗಶೀಲತೆಯನ್ನು ಬಿತ್ತಲು ಇಂತಹ ಅಧ್ಯಯನ ಶಿಬಿರಗಳು ಬಹುಮುಖ್ಯವಾಗುತ್ತದೆ ಎಂದು ಮಾನವ ಬಂಧುತ್ವ ವೇದಿಕೆ ರಾಜ್ಯ ಸಂಚಾಲಕ ಪ್ರೊ.ಎ.ಬಿ.ರಾಮಚಂದ್ರಪ್ಪ ಅಭಿಪ್ರಾಯಪಟ್ಟರು.

- Advertisement -

ಅವರು ದಾವಣಗೆರೆ ಜಿಲ್ಲೆ ಹರಿಹರದ ಪ್ರೊ.ಬಿ.ಕೃಷ್ಣಪ್ಪ ಭವನದಲ್ಲಿ ಆಲ್ ಇಂಡಿಯಾ ಟ್ರೇಡ್ ಯೂನಿಯನ್ ಕಾಂಗ್ರೆಸ್‌ನ ಕರ್ನಾಟಕ ರಾಜ್ಯ ಸಮಿತಿಯು ಆಯೋಜಿಸಿದ್ದ ಮೂರು ದಿನಗಳ ರಾಜ್ಯ ಮಟ್ಟದ ನಾಯಕತ್ವ ವಿಕಸನ ಅಧ್ಯಯನ ಶಿಬಿರ ಉದ್ಘಾಟಿಸಿ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸಮಾಜದಲ್ಲಿ ಅಪಾಯಕಾರಿಯಾಗಿ ಬೆಳೆಯುತ್ತಿರುವ ಧರ್ಮಾಂಧ, ಕೋಮುವಾದಿ ಶಕ್ತಿಗಳನ್ನು ಸಮರ್ಥವಾಗಿ ಎದುರಿಸಲು ಹಾಗೂ ನಮ್ಮ ಜ್ಞಾನವನ್ನು ವೃದ್ಧಿಸಿಕೊಳ್ಳಲು ಈ ರೀತಿಯ ಅಧ್ಯಯನ ಶಿಬಿರಗಳು ಹೆಚ್ಚು ಹೆಚ್ಚಾಗಿ ನಡೆಯಬೇಕು ಹಾಗೂ ಕಾರ್ಮಿಕರು ಇದರಲ್ಲಿ ಪಾಲ್ಗೊಳ್ಳಬೇಕು. ಕಾರ್ಮಿಕರ ಸಂಕೇತ ಕೆಂಪು ಬಣ್ಣವೇ ಹೊರತು ಕೇಸರಿ ಅಲ್ಲ‌. ಕೆಂಪು ಬಣ್ಣ ಕ್ರಾಂತಿ, ಶಾಂತಿ, ಉತ್ಕೃಷ್ಟತೆಯ ಸಂಕೇತವಾದರೆ ಕೇಸರಿ ಬಣ್ಣ ಗುಲಾಮಗಿರಿಯ ಸಂಕೇತವಾಗಿದೆ. ಇದನ್ನು ಕಾರ್ಮಿಕರು ಅರ್ಥೈಸಿಕೊಂಡು ಉತ್ಕೃಷ್ಟ ಚಿಂತನೆಗಳ ಮೂಲಕ ಚಳುವಳಿಯನ್ನು ವೈಚಾರಿಕ ನೆಲೆಗಟ್ಟಿನಲ್ಲಿ ಮುನ್ನಡೆಸುವಂತೆ ಕರೆ ನೀಡಿದರು.

WhatsApp Image 2024 08 18 at 6.48.08 PM

ಎಐಟಿಯುಸಿಯ ರಾಜ್ಯ ಪ್ರಧಾನ ಕಾರ್ಯದರ್ಶಿ ಡಿ.ಎ.ವಿಜಯಭಾಸ್ಕರ್ ಮಾತನಾಡಿ, ಮಾನವ ಬಂಧುತ್ವ ವೇದಿಕೆಯ ಸಹಕಾರದೊಂದಿಗೆ ಮೂರು ದಿನಗಳ ನಾಯಕತ್ವ ವಿಕಸನ ಅಧ್ಯಯನ ಶಿಬಿರವನ್ನು ಹಮ್ಮಿಕೊಂಡಿದ್ದೇವೆ. ಕಾರ್ಮಿಕರು ಸಂಘಟನೆ ಮತ್ತು ಚಳುವಳಿಯಲ್ಲಿ ಪರಿಣಾಮಕಾರಿಯಾಗಿ ತೊಡಗಿಸಿಕೊಳ್ಳಲು ಅನುಕೂಲವಾಗುವಂತೆ ವಿವಿಧ ವಿಷಯಗಳ ಮೇಲೆ ಪ್ರೊ.ಎ.ಬಿ.ರಾಮಚಂದ್ರಪ್ಪ, ಡಾ.ಸಿದ್ದನಗೌಡ ಪಾಟೀಲ್, ಸತ್ಯಾನಂದ, ಅಮ್ಜದ್ ಮುಂತಾದ ವಿಷಯ ಪರಿಣಿತರು ಶಿಬಿರಾರ್ಥಿಗಳಿಗೆ ಉಪನ್ಯಾಸ ನೀಡಲಿದ್ದಾರೆ. ಶಿಬಿರದ ಉಪಯೋಗವನ್ನು ಕಾರ್ಮಿಕರು ಪಡೆದುಕೊಳ್ಳಬೇಕು ಎಂದರು.

ಸಮಾರಂಭದಲ್ಲಿ ಅಧ್ಯಕ್ಷತೆಯನ್ನು ಎಐಟಿಯುಸಿ ದಾವಣಗೆರೆ ಜಿಲ್ಲಾಧ್ಯಕ್ಷ ಕೆ.ರಾಘವೇಂದ್ರ ನಾಯರಿ ವಹಿಸಿದ್ದರು. ವೇದಿಕೆಯಲ್ಲಿ ಎಐಟಿಯುಸಿ ರಾಜ್ಯ ಪ್ರಧಾನ ಕಾರ್ಯದರ್ಶಿ ಡಿ.ಎ.ವಿಜಯಭಾಸ್ಕರ್, ಎಐಟಿಯುಸಿ ರಾಜ್ಯ ಉಪಾಧ್ಯಕ್ಷ ಹೆಚ್.ಜಿ.ಉಮೇಶ್ ಅವರಗೆರೆ, ಕಾರ್ಯದರ್ಶಿ ಅವರಗೆರೆ ಚಂದ್ರು, ಅಂಗನವಾಡಿ ಫೆಡರೇಶನ್ ರಾಜ್ಯ ಪ್ರಧಾನ ಕಾರ್ಯದರ್ಶಿ ಜಯಮ್ಮ, ಬಿಸಿಯೂಟ ಫೆಡರೇಶನ್ ರಾಜ್ಯಾಧ್ಯಕ್ಷ ಹೊನ್ನಪ್ಪ ಮರೆಮ್ಮನವರ್, ಭಾರತೀಯ ಮಹಿಳೆಯರ ರಾಷ್ಟ್ರೀಯ ಒಕ್ಕೂಟದ ದಿವ್ಯಾ ಬಿರಾದಾರ, ಎಐಟಿಯುಸಿ ಗದಗ ಜಿಲ್ಲಾಧ್ಯಕ್ಷ ಎಂ.ಐ.ನವಲೂರು, ಸಿಪಿಐ ಜಿಲ್ಲಾ ಸಹ ಕಾರ್ಯದರ್ಶಿ ಅವರಗೆರೆ ವಾಸು, ಅಂಗನವಾಡಿ ಫೆಡರೇಶನ್‌ನ ಎಂ.ಬಿ.ಶಾರದಮ್ಮ, ಸಿಪಿಐ ಚನ್ನಗಿರಿ ತಾಲೂಕು ಅಧ್ಯಕ್ಷ ಮೊಹಮ್ಮದ್ ರಫೀಕ್, ದಾದಾಪೀರ್ ಮತ್ತು ಇತರ ಮುಖಂಡರು ಕಾರ್ಯಕರ್ತರು ಭಾಗವಹಿಸಿದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಂಗಭೂಮಿ ಅಭಿನಯ ಕಲಿಸುವುದಷ್ಟೇ ಅಲ್ಲ, ಬದುಕನ್ನೂ ಕಲಿಸುವ ಶಾಲೆ: ಶ್ರೀನಿವಾಸ ಪಾಲಹಳ್ಳಿ

ರಂಗಭೂಮಿ ಕೇವಲ ಅಭಿನಯ ಕಲಿಸುವ ವೇದಿಕೆಯಲ್ಲ. ಅದು ಬದುಕನ್ನು ಅರ್ಥಮಾಡಿಕೊಳ್ಳುವ, ಮಾನವೀಯ...

SIR ಅಕ್ರಮ ಆರೋಪ: ಎಸ್‌ಐಟಿ ತನಿಖೆಗೆ ಎಸ್‌ಡಿಪಿಐ ಆಗ್ರಹ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಅಕ್ರಮಗಳು ನಡೆದಿವೆ...

ಕಲಬುರಗಿ | ಬೈಕ್‌ಗೆ ಸಿಮೆಂಟ್ ಮಿಕ್ಸರ್ ಟ್ಯಾಂಕರ್ ಡಿಕ್ಕಿ: ತಂದೆ, ಮಗಳು ಸ್ಥಳದಲ್ಲೇ ಸಾವು!

ಬೈಕ್‌ಗೆ ಸಿಮೆಂಟ್ ಮಿಕ್ಸರ್ ವಾಹನ ಡಿಕ್ಕಿ ಹೊಡೆದ ಪರಿಣಾಮ ತಂದೆ, ಮಗಳು...

ಕಲಬುರಗಿ | ಎರಡು ಮನೆಗಳಿಗೆ ಕನ್ನ: ₹3.65 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು

ನಗರದ ಹೀರಾಪುರ ಹೊಸ ಬಡಾವಣೆ ಹಾಗೂ ಚಿಂಚೋಳಿ ಲೇಔಟ್‌ನಲ್ಲಿ ಎರಡು ಪ್ರತ್ಯೇಕ...