ದಾವಣಗೆರೆ | ಕೇಂದ್ರ ಸರ್ಕಾರದ ವಿರುದ್ಧ ಜ.26ರಂದು ಟ್ರಾಕ್ಟರ್ ಪೆರೇಡ್

Date:

Advertisements

ಕೇಂದ್ರ ಸರ್ಕಾರದ ರೈತ, ಕಾರ್ಮಿಕ, ಜನ ವಿರೋಧಿ ನೀತಿಯನ್ನು ವಿರೋಧಿಸಿ ಜನವರಿ 26 ರಂದು ದಾವಣಗೆರೆಯಲ್ಲಿ ಟ್ರಾಕ್ಟರ್ ಪೆರೇಡ್ ನಡಸಿ, ಪ್ರತಿಭಟಿಸಲಾಗುತ್ತದೆ ಎಂದು ರೈತ ಸಂಘ ತಿಳಿಸಿದೆ. ಬುಧವಾರ ದಾವಣಗೆರೆಯ ಗಾಂಧಿ ಸರ್ಕಲ್‌ನಲ್ಲಿ ಪೋಸ್ಟರ್ ಬಿಡುಗಡೆ ಮಾಡಿದೆ.

ಕೇಂದ್ರ ಸರ್ಕಾರ ರೈತ, ಕಾರ್ಮಿಕ ವಿರೋಧಿ ನೀತಿಗಳನ್ನು ಅನುಸರಿಸುತ್ತಿದೆ. ಹೊಸ ಕಾಯಿದೆ ಜಾರಿಗೆ ತಂದು, ರೈತ, ಕಾರ್ಮಿಕರನ್ನು ಬಂಡವಾಳಶಾಹಿ ವ್ಯವಸ್ಥೆಯ ಕೈಗೊಂಬೆಯಾಗಿ ಮಾಡಲು ಮುಂದಾಗಿದೆ. ಜನವಿರೋಧಿ ನೀತಿಗಳನ್ನು ಜಾರಿಗೆ ತಂದು ಸಾರ್ವಜನಿಕರನ್ನು ಹಾಳುಗೆಡವುತ್ತಿದೆ. ಇಂತಹ, ಕಾಯಿದೆಗಳನ್ನು ರದ್ದು ಮಾಡಿ ಜನಪರ ನೀತಿಗಳನ್ನು ಜಾರಿಗೆ ತರಬೇಕು ಎಂದು ರೈತಸಂಘದ ಮುಖಂಡರು ಒತ್ತಾಯಿಸಿದ್ದಾರೆ.

ಎಲ್ಲ ರೈತ, ಕಾರ್ಮಿಕ, ಜನವಿರೋಧಿ ನೀತಿಗಳನ್ನು ವಿರೋಧಿಸಿ ಗಣರಾಜ್ಯೋತ್ಸವದ ದಿನ ರೈತ, ಕಾರ್ಮಿಕ, ಜನಪರ ಸಂಘಟನೆಗಳ ಮುಂದಾಳತ್ವದಲ್ಲಿ ದಾವಣಗೆರೆಯ ಜಯದೇವ ವೃತ್ತದಿಂದ ಟ್ರ್ಯಾಕ್ಟರ್ ಪೆರೇಡ್ ನಡೆಯಲಿದೆ ಎಂದು ಸಂಘಟಕರು ತಿಳಿಸಿದ್ದಾರೆ.

Advertisements

ಪೋಸ್ಟರ್ ಬಿಡುಗಡೆಯಲ್ಲಿ ಎಐಟಿಯುಸಿಯ ಚಂದ್ರು,ವಾಸು, ರೈತಸಂಘದ ಬುಳ್ಳಾಪುರ ಹನುಮಂತಪ್ಪ, ರೇವಣಪ್ಪ, ಜನಶಕ್ತಿಯ ಸತೀಶ್, ಪವಿತ್ರ, ರಾಮಾಂಜನೇಯ, ಆದಿಲ್ ಖಾನ್, ಇತರ ಸಂಘಟನೆಗಳ ಕಾರ್ಯಕರ್ತರು ಹಾಜರಿದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

ಮಂಗಳೂರು | ನ್ಯಾಯಬೆಲೆ ಅಂಗಡಿಯಲ್ಲಿ ‘ಗೋಣಿಚೀಲ’ಕ್ಕಾಗಿ ಜಗಳ: ಮಹಿಳೆಯ ವಿಡಿಯೋ ಮಾಡಿ ತೇಜೋವಧೆಗೆ ಯತ್ನ!

ನ್ಯಾಯಬೆಲೆ ಅಂಗಡಿಯಲ್ಲಿ 'ಗೋಣಿಚೀಲ' ನೀಡುವಂತೆ ಪಟ್ಟು ಹಿಡಿದದ್ದಲ್ಲದೇ, ಗ್ರಾಹಕನೋರ್ವ ನ್ಯಾಯಬೆಲೆ ಅಂಗಡಿಯವರ...

ಮೈಸೂರು | ಜಿ ಟಿ ದೇವೇಗೌಡರ ದಲಿತ ವಿರೋಧಿ ಹೇಳಿಕೆ ಖಂಡಿಸಿ ವಿದ್ಯಾರ್ಥಿಗಳಿಂದ ಪ್ರತಿಭಟನೆ

ಮೈಸೂರು ವಿಶ್ವವಿದ್ಯಾನಿಲಯದ ಸಂಶೋಧಕರ ಸಂಘ ಹಾಗೂ ದಲಿತ ವಿದ್ಯಾರ್ಥಿ ಒಕ್ಕೂಟದ ವಿದ್ಯಾರ್ಥಿಗಳು...

Download Eedina App Android / iOS

X