ದಾವಣಗೆರೆ | ಅರವಿಂದ ಕೇಜ್ರಿವಾಲ್ ಬಂಧನ ಖಂಡಿಸಿ ‘ಇಂಡಿಯಾ’ ಒಕ್ಕೂಟದ ಪ್ರತಿಭಟನೆ

Date:

ದೆಹಲಿಯ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ರವರನ್ನು ಜಾರಿ ನಿರ್ದೇಶನಾಲಯ ಅಧಿಕಾರಿಗಳು ಅಕ್ರಮವಾಗಿ ಬಂದಿಸಿರುವುದನ್ನ  ಖಂಡಿಸಿ  ಆಮ್ ಆದ್ಮಿ ಪಕ್ಷ ಹಾಗೂ ಕಾಂಗ್ರೆಸ್‌ ಜಂಟಿಯಾಗಿ, ಇಂಡಿಯಾ ಓಕ್ಕೂಟದ ಭಾಗವಾಗಿ ದಾವಣಗೆರೆಯ ಜಯದೇವ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಮುಖಂಡರು ದೇಶಾದ್ಯಂತ ವಿರೋಧ ಪಕ್ಷದ ನಾಯಕರನ್ನು ಬಂಧಿಸಿರುವುದನ್ನು ಖಂಡಿಸಿದರು ಹಾಗೂ ಕೂಡಲೇ  ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಹಾಗೂ ವಿರೋಧ ಪಕ್ಷದ ನಾಯಕರನ್ನು ಬಿಡುಗಡೆ ಗೊಳಿಸಬೇಕೆಂದು ಆಗ್ರಹಿಸಿದರು.

ಇ.ಡಿಯವರು ವಿರೋಧಪಕ್ಷದ ನಾಯಕರನ್ನು ಅಕ್ರಮವಾಗಿ ಬಂಧಿಸಿದ್ದಾರೆ, ಕೇಂದ್ರ ಸರ್ಕಾರ ವಿರೋಧಿ ಗಳನ್ನು ತಮ್ಮ ವಿರುದ್ಧ ಟೀಕೆ ಮಾಡುವವರನ್ನು, ಹೆದರಿಸಲು ಹತ್ತಿಕ್ಕಲು ಸರ್ಕಾರಿ ಸಂಸ್ಥೆಗಳನ್ನು ಹಿಂಬಾಗಿಲಿನಿಂದ ಬಳಸಿಕೊಳ್ಳುತ್ತಿದೆ ಎಂದು ಆರೋಪಿಸಿದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಈ ಸಂದರ್ಭದಲ್ಲಿ ಆಮ್ ಆದ್ಮಿ ಪಕ್ಷದ ಜಿಲ್ಲಾಧ್ಯಕ್ಷ ಕೆ.ಎಸ್. ಶಿವಕುಮಾರ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅರುಣ್ ಕುಮಾರ್ ಸಿ.ಆರ್, ಜಿಲ್ಲಾ ಸಂಘಟನಾ ಕಾರ್ಯದರ್ಶಿ ಆದಿಲ್ ಖಾನ್ ಎಸ್.ಕೆ, ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ದಿನೇಶ್ ಕೆ. ಶೆಟ್ಟಿ, ಜಿಲ್ಲಾ ಮುಖಂಡರಾದ ಆಯುಬ್ ಪೈಲ್ವಾನ್, ನಗರಪಾಲಿಕೆ ಸದಸ್ಯರಾದ ಎ.ನಾಗರಾಜ್, ಮಂಜುನಾಥ್ ಹಿತ್ತಿಗುಡಿ , ಚಮನ್ ಸಾಬ್, ಲತಿಪ್ , ಚಂದ್ರು, ಜಿಲ್ಲಾ ಕಾರ್ಯದರ್ಶಿ ರವೀಂದ್ರ.ಕೆ, ಸುರೇಶ್ ಸಿಡ್ಲಪ್ಪ, ಶಬ್ಬೀರ್ ಅಹಮದ್ ಮೊಹಮದ್ ಗೌಸ್‌, ಎಸ್‌ಸಿ/ಎಸ್‌ಟಿ ಘಟಕದ ಅಧ್ಯಕ್ಷರಾದ ಧರ್ಮ ನಾಯ್ಕ್, ವಕ್ತಾರರಾದ ಚಂದ್ರು ಬಸವಂತಪ್ಪ, ಹರಿಹರ ತಾಲೂಕ ಪ್ರಧಾನ ಕಾರ್ಯದರ್ಶಿ ಮೊಹಮದ್ ಯುಸಫ್ ಹಾಗೂ ಮಹಿಳಾ ಮುಖಂಡರು ಕಾರ್ಯಕರ್ತರು ಭಾಗವಹಿಸಿದ್ದರು.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚೊಂಬು, ಗ್ಯಾಸ್ ಹೊರತುಪಡಿಸಿ ಶಾಂತಿಯುತ ಮತದಾನಕ್ಕೆ ಸಾಕ್ಷಿಯಾದ ಬೆಂಗಳೂರು

ಲೋಕಸಭಾ ಚುನಾವಣೆ ಹಿನ್ನೆಲೆ, ರಾಜ್ಯದ 14 ಕ್ಷೇತ್ರಗಳಿಗೆ ಏಪ್ರಿಲ್ 26ರಂದು ಮೊದಲ...

ಕಸ ಸುರಿಯುವ ಜಾಗವಾಗಿ ಮಾರ್ಪಟ್ಟ ಬೆಂಗಳೂರಿನ ಮೇಲ್ಸೇತುವೆಗಳು!

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿರುವ ವಾಹನ ಸವಾರರಿಗೆ ಸಂಚಾರ ದಟ್ಟಣೆ ತಲೆನೋವಾಗಿ ಪರಿಣಮಿಸಿದೆ....

ರಾಯಚೂರು | ಅಬಕಾರಿ ಇಲಾಖೆ ದಾಳಿ; ₹500 ಮುಖಬೆಲೆಯ ನೋಟಿನ 62 ಬಂಡಲ್ ಪತ್ತೆ

ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲೂಕಿನ ಗೌಳಿಗಲ್ಲಿಯ ಗೌಳಿಯೊಬ್ಬರ ಮನೆಯಲ್ಲಿ ಗೋಣಿ ಚೀಲದ...