ದಾವಣಗೆರೆ | ಫೆ. 16ರಂದು ವಿಚಾರ ಸಂಕ್ರಾಂತಿ ಕಾರ್ಯಕ್ರಮ

Date:

Advertisements

ಫೆಬ್ರವರಿ 16ರಂದು ದಾವಣಗೆರೆಯಲ್ಲಿ ಸ್ವಾಭಿಮಾನಿ ಬಳಗದ ವತಿಯಿಂದ ವಿಚಾರ ಸಂಕ್ರಾಂತಿ ಕಾರ್ಯಕ್ರಮ ಹಾಗೂ ‘ಕುಟುಂಬ ರಾಜಕಾರಣ ಪ್ರಜಾಪ್ರಭುತ್ವ ಹಾಗೂ ಅಭಿವೃದ್ಧಿಗೆ ಮಾರಕವೇ?’ ಎನ್ನುವ ವಿಶೇಷ ಪ್ರಬಂಧ ಸ್ಪರ್ಧೆಯಲ್ಲಿ ಭಾಗವಹಿಸಿದವರಿಗೆ ಬಹುಮಾನ ವಿತರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಬಳಗದ ರಾಜ್ಯಾಧ್ಯಕ್ಷ ಜಿ ಬಿ ವಿನಯ್ ಕುಮಾರ್ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ಕಾರ್ಯಕ್ರಮದಂದು ಬೆಳಗ್ಗೆ 10 ಗಂಟೆಗೆ ಅಂಬೇಡ್ಕರ್ ವೃತ್ತದಿಂದ ಜಯದೇವ ವೃತ್ತದವರೆಗೆ ಮೆರವಣಿಗೆ ನಡೆಸಲಾಗುವುದು. ನಂತರ ಜಯದೇವ ವೃತ್ತದಲ್ಲಿನ ಶ್ರೀ ಶಿವಯೋಗ ಮಂದಿರ ಸಭಾಭವನದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿದ್ದು, ವಿರಕ್ತಮಠದ ಶ್ರೀ ಬಸವಪ್ರಭು ಮಹಾಸ್ವಾಮೀಜಿ, ಹೊನ್ನಾಳಿಯ ಹಿರೇಕಲ್ಮಠದ ಶ್ರೀ ಚೆನ್ನಪ್ಪಸ್ವಾಮಿ ಒಡೆಯರ್ ಮಲ್ಲಿಕಾರ್ಜುನ ಶಿವಾಚಾರ್ಯ ಸ್ವಾಮೀಜಿ ಸಾನಿಧ್ಯ ವಹಿಸಲಿದ್ದಾರೆ. ಸಾಮಾಜಿಕ ಕಳಕಳಿಯುಳ್ಳ, ಪ್ರಜ್ಞಾವಂತ ಹೋರಾಟಗಾರರು ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ” ಎಂದು ಮಾಹಿತಿ ಹಂಚಿಕೊಂಡರು.

“ಒಟ್ಟು 282 ಪ್ರಬಂಧಗಳು ಸ್ವೀಕೃತಗೊಂಡಿದ್ದು, ಬಹುತೇಕ ಪ್ರಬಂಧಗಳು ಕುಟುಂಬ ರಾಜಕಾರಣದ ವಿರುದ್ಧವೇ ಬಂದಿವೆ. ಮೂರು ಬೇರೆ ಬೇರೆ ವಿಭಾಗಗಳಲ್ಲಿ ಪ್ರಶಸ್ತಿಗಳನ್ನು ನೀಡಲಾಗುತ್ತಿದ್ದು, ಮೂವರಿಗೆ ಮೊದಲ ಬಹುಮಾನವಾಗಿ ₹20 ಸಾವಿರ, ದ್ವಿತೀಯ ಬಹುಮಾನ ಮೂವರಿಗೆ ₹15 ಸಾವಿರದಂತೆ ಬಹುಮಾನ ನೀಡಲಾಗುವುದು. ಎಂದು ತಿಳಿಸಿದರು.

Advertisements

ಈ ಸುದ್ದಿ ಓದಿದ್ದೀರಾ?: ‌ದಾವಣಗೆರೆ | ಅಕ್ರಮ ಮಣ್ಣು ಮಾಫಿಯಾಕ್ಕೆ ಬಲಿಯಾದ ಸ್ಮಶಾನ

ಸುದ್ದಿಗೋಷ್ಠಿಯಲ್ಲಿ ಬಳಗದ ಶಿವಕುಮಾರ್ ಶೆಟ್ಟರ್, ವಿರೂಪಾಕ್ಷಪ್ಪ ಪಂಡಿತ್, ಎಸ್ ಎಂ ಸಿದ್ದಲಿಂಗಪ್ಪ, ಮೊಹಮದ್ ಸಾಧಿಕ್, ಚಂದ್ರಶೇಖರ್ ಹಾಗೂ ಇನ್ನಿತರರು ಹಾಜರಿದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X