ದಾವಣಗೆರೆ | ಭದ್ರಾ ಜಲಾಶಯದಿಂದ ನದಿಗೆ ಏಪ್ರಿಲ್‌ 3ರಿಂದ ನೀರು: ಶಾಸಕ ಬಿ.ಪಿ ಹರೀಶ್

Date:

ದಾವಣಗೆರೆ ಜಿಲ್ಲೆಯ ಹರಿಹರ ನಗರದ ವಿವಿಧ ವಾರ್ಡುಗಳಿಗೆ ಭೇಟಿ ನೀಡಿರುವ ಶಾಸಕ ಬಿ.ಪಿ. ಹರೀಶ್, ಸ್ಥಳೀಯರ ಸಮಸ್ಯೆಗಳನ್ನು ಆಲಿಸಿದ್ದಾರೆ. ನೀರಿನ ಸಮಸ್ಯೆಯನ್ನು ನೀಗಿಸಲು ಭದ್ರಾ ಜಲಾಶಯದಿಂದ ನದಿಗೆ ಏಪ್ರಿಲ್‌ 3ರಿಂದ ನೀರು ಹರಿಸುವ ಕುರಿತು ಸರ್ಕಾರದ ಮಟ್ಟದಲ್ಲಿ ಚರ್ಚೆ ನಡೆಯುತ್ತಿದೆ ಎಂದು ಹೇಳಿದ್ದಾರೆ.

ವಾರ್ಡ್‌ಗಳಿಗೆ ಭೇಟಿ ನೀಡಿದ್ದ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “10 ದಿನಗಳ ಹಿಂದೆ ನದಿಯಲ್ಲಿ ನೀರಿನ ಹರಿವು ಸ್ಥಗಿತಗೊಂಡಿದೆ. ಅಂದಿನಿಂದಲೇ ನಗರಕ್ಕೆ ಕುಡಿಯುವ ನೀರಿನ ಸರಬರಾಜು ನಿಂತಿದೆ. ಏ.3ರ ಬದಲು ಮಾ.27ರಿಂದಲೇ ನದಿಗೆ ನೀರು ಹರಿಸಲು ಸಂಬಂಧಿತ ಅಧಿಕಾರಿಗಳಿಗೆ ಆಗ್ರಹಿಸಿದ್ದೇನೆ” ಎಂದರು.

ದೇವರಬೆಳೆಕೆರೆ ಪಿಕ್‌ಅಪ್‌ನಿಂದ ಹಳ್ಳಕ್ಕೆ ನೀರು ಹರಿಸಲು ಮನವಿ ಮಾಡಿದ್ದೇನೆ. ಹಿರಿಯ ಅಧಿಕಾರಿಗಳು ಮೌಖಿಕವಾಗಿ ಒಪ್ಪಿಗೆ ಸೂಚಿಸಿದ್ದಾರೆ. ಆದರೆ, ಅಧಿಕಾರಿಗಳು ಲಿಖಿತ ಆದೇಶ ಕೇಳುತ್ತಿದ್ದಾರೆ ಎಂದ ಅವರು, ದೇವರಬೆಳೆಕೆರೆ ಪಿಪ್‌ಅಪ್‌ನಿಂದ ಶೀಘ್ರ ನೀರು ಹರಿಸಬೇಕು ಎಂದು ಅಧಿಕಾರಿಗಳಿಗೆ ಕೇಳಿಕೊಂಡರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ನಗರದ ಎಲ್ಲಾ ವಾರ್ಡುಗಳಲ್ಲಿಯೂ ಕೊಳವೆಬಾವಿ, ಕಿರುನೀರು ಸರಬರಾಜು ಕೇಂದ್ರಗಳಿವೆ. ಆದರೆ, ಅವುಗಳಲ್ಲಿ ಗಣನೀಯ ಸಂಖ್ಯೆಯ ಕೊಳವೆಬಾವಿಗಳಿಗೆ ದುರಸ್ತಿಯ ಅಗತ್ಯವಿದೆ. ನಗರಸಭೆ ಹೆಚ್ಚುವರಿ ಸಿಬ್ಬಂದಿ ನೇಮಿಸಿ ಸಮರೋಪಾದಿಯಲ್ಲಿ ದುರಸ್ತಿ ಹಾಗೂ ಪೈಪ್‌ಲೈನ್ ಅಳವಡಿಕೆ ಕಾರ್ಯ ಕೈಗೊಂಡು ನೀರಿಗಾಗಿ ಜನರು ಪರದಾಡುತ್ತಿರುವುದನ್ನು ನಿವಾರಿಸಬೇಕು ಎಂದು ಸೂಚಿಸಿರುವುದಾಗಿ ತಿಳಿಸಿದರು.

ಅವರು ಗುತ್ತೂರು, ಹಳೆ ಹರ್ಲಾಪುರ, ದೇವಸ್ಥಾನ ರಸ್ತೆ , ಗಂಗಾನಗರ, ಹಳ್ಳದಕೇರಿ, ವಿದ್ಯಾನಗರ, ಜೈ ಭೀಮನಗರ ಸೇರಿದಂತೆ ವಿವಿಧ ವಾರ್ಡ್‌ಗಳಿಗೆ ಭೇಟಿ ನೀಡಿ ಜನರ ಅಹವಾಲು ಆಲಿಸಿದರು.

ಧೂಡಾ ಮಾಜಿ ಸದಸ್ಯ ರಾಜು ರೋಖಡೆ, ನಗರಸಭೆ ಪೌರಾಯುಕ್ತ ಬಸವರಾಜ್ ಐಗೂರು, ಎಇಇ ತಿಪ್ಪೇಶಪ್ಪ ಜಿ.ಟಿ., ಎಇಗಳಾದ ಮಂಜುನಾಥ್, ಮಂಜುಳಮ್ಮ ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ʼಜೈಶ್ರೀರಾಮ್‌ʼ ಹಾಡು ಹಾಕಿದಕ್ಕೆ ಹಿಂದೂ-ಮುಸ್ಲಿಂ ವಿದ್ಯಾರ್ಥಿಗಳ ನಡುವೆ ಗಲಾಟೆ

ಧರ್ಮವೊಂದಕ್ಕೆ ಸಂಬಂಧಿಸಿದ ಗೀತೆಗೆ ನೃತ್ಯ ಮಾಡುತ್ತಿರುವಾಗ ಎರಡು ಸಮುದಾಯದ ವಿದ್ಯಾರ್ಥಿಗಳು ಪರಸ್ಪರ...

ಪ್ರಜ್ವಲ್‌ ರೇವಣ್ಣ ಪ್ರಕರಣ ಯಾವುದೇ ಡಿಟರ್ಜೆಂಟ್‌ನಿಂದ ಹೋಗುವ ಕಲೆಯಲ್ಲ: ಮಾಜಿ ರಾಜ್ಯಸಭಾ ಸದಸ್ಯ ಜವರೇಗೌಡ

ದೇವೇಗೌಡ ಅವರ ಕುಟುಂಬದಿಂದ ಸಮಾಜದ ಮೇಲಾಗಿರುವ ಅತ್ಯಾಚಾರ, ದುರ್ನಡತೆಯನ್ನು ಯಾವುದೇ ನಾಗರಿಕರೂ...

ಎಂ.ಉಷಾ ಅವರ‌ ‘ಬಾಳ‌ ಬಟ್ಟೆ’ ಕಾದಂಬರಿಗೆ ಡಾ.ವಿಜಯಾ ದಬ್ಬೆ ಸಾಹಿತ್ಯ ಪ್ರಶಸ್ತಿ

ಮೈಸೂರಿನ ಸಮತಾ ಅಧ್ಯಯನ ಕೇಂದ್ರ(ರಿ)ವು 2024ನೇ ಸಾಲಿನ ಡಾ.ವಿಜಯಾ ದಬ್ಬೆ ಸಾಹಿತ್ಯ ಪ್ರಶಸ್ತಿಗೆ ಡಾ.ಎಂ.ಉಷಾ...

ತುಮಕೂರು | ಬಿಯರ್‌ ಬಾಟಲಿ ಹಿಡಿದು ಹೊಡೆದಾಡಿದ ಕೆಪಿಟಿಸಿಎಲ್‌ ಎಂಜಿನಿಯರ್‌ಗಳು

ತುಮಕೂರು ಜಿಲ್ಲೆಯ ಪಾವಗಡದ ಕೆಪಿಟಿಸಿಎಲ್‌ನ ಇಬ್ಬರು ಜೂನಿಯರ್‌ ಎಂಜಿನಿಯರ್‌ಗಳು ಹಾಗೂ ಇಬ್ಬರು...