ದಾವಣಗೆರೆ | ಹವಾಮಾನ ವೈಪರೀತ್ಯ; ಕಡಲೆ ಬೆಳೆ ಇಳುವರಿ ಕುಸಿತ

Date:

ಹವಾಮಾನ ವೈಪರೀತ್ಯದಿಂದ ಪ್ರಮುಖ ಹಿಂಗಾರು ಬೆಳೆ ಕಡಲೆ ಬೆಳೆಯ ಇಳುವರಿ ತೀವ್ರ ಕುಸಿತ ಕಂಡಿದೆ. ದಾವಣಗೆರೆ ಜಿಲ್ಲೆಯ ಸಂತೇಬೆನ್ನೂರು ವ್ಯಾಪ್ತಿಯಲ್ಲಿ ಕಡಲೆ ಕೊಯ್ಲು ನಡೆದಿದ್ದು, ಇಳುವರಿಯಲ್ಲಿ ಭಾರಿ ಕುಸಿತವಾಗಿದ್ದು ಬರದಿಂದ ಹೈರಾಣಾಗಿದ್ದ ರೈತರನ್ನು ಮತ್ತೇ ಸಂಕಷ್ಟಕ್ಕೆ ದೂಡಿದೆ.

- Advertisement -

ಅಕ್ಟೋಬರ್ ಅಂತ್ಯದಲ್ಲಿ ರೈತರು ಕಡಲೆ ಬೀಜ ಬಿತ್ತನೆ ಮಾಡಿದ್ದರು. ಡಿಸೆಂಬರ್‌ ನಲ್ಲಿ ಹೂವು ಬಿಡುವ ಕಾಲದಲ್ಲಿ ಮಂಜು ಬೀಳಲಿಲ್ಲ. ಚಳಿ ಪ್ರಮಾಣ ಕಡಿಮೆ ಇತ್ತು. ಕಾರಣ, ನಿರೀಕ್ಷಿಸಿತ ಪ್ರಮಾಣದಲ್ಲಿ ಕಾಯಿಕಟ್ಟಲಿಲ್ಲ. ಬಿತ್ತನೆ ಮೊದಲು ನೆಲ ಹಸಿಯಾಗುವಷ್ಟು ಒಂದು ಮಳೆಯಾಗಿತ್ತು. ಬಿತ್ತಿದ ನಂತರ ಒಂದು ಮಳೆಯಾಗಿ, ಇಬ್ಬನಿ ಬಿದ್ದಿದ್ದರೆ ಕಡಲೆ ಸಮೃದ್ಧವಾಗಿ ಬೆಳೆಯುತ್ತಿತ್ತು. ಆದರೆ, ಮಳೆಯೂ ಬರಲಿಲ್ಲ ಇಬ್ಬನಿಯೂ ಬೀಳದೆ ಗಿಡಗಳು ಚನ್ನಾಗಿ ಬೆಳೆಯಲಿಲ್ಲ ಎನ್ನುತ್ತಾರೆ ಈಭಾಗದ ರೈತರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಬಿತ್ತನೆಗೆ ಪ್ರತಿ ಎಕರೆಗೆ 4,000 ರೂ.ದಿಂದ 5,000 ರೂ. ಖರ್ಚು ತಗುಲಿದೆ. ಕೊಯ್ಲು, ಯಾಂತ್ರಿಕ ಒಕ್ಕಣೆಗೆ ಪ್ರತಿ ಎಕರೆಗೆ 4,000 ರೂ. ಖರ್ಚಾಗುತ್ತದೆ. ಕಳೆ, ಔಷಧ ಸಿಂಪಡಣೆಗೆ 4,000ರೂ. ಖರ್ಚು ಆಗಿದೆ. ಪ್ರತಿ ಎಕರೆಗೆ ಕಡಲೆ ಬೆಳೆಯಲು 12, 000 ರೂ. ಖರ್ಚಾಗುತ್ತದೆ. ಬಹುತೇಕ ಹೊಲಗಳಲ್ಲಿ 2 ಕ್ವಿಂಟಲ್‌ಗಿಂತ ಹೆಚ್ಚು ಇಳುವರಿ ಬಂದಿಲ್ಲ ಎನ್ನುತ್ತಿದ್ದಾರೆ ರೈತರು.

ಮಳೆಯಾಧಾರಿತ ಕೃಷಿ ಭೂಮಿಯಲ್ಲಿ ಈ ಬಾರಿ ಪ್ರತಿ ಎಕರೆಗೆ ಗರಿಷ್ಠ ಮೂರು ಕ್ವಿಂಟಲ್ ಕಡಲೆ ಇಳುವರಿ ಬಂದರೆ ಹೆಚ್ಚು. ಕಡಲೆ ಬೆಳೆಗೆ ನೀರು ಹಾಯಿಸಿರುವ ರೈತರ ಹೊಲಗಳಲ್ಲಿ 6ರಿಂದ 7 ಕ್ವಿಂಟಲ್ ಇಳುವರಿ ಬರಲಿದೆ ಎನ್ನುವುದು ರೈತರ ಅಭಿಪ್ರಾಯ. ಸದ್ಯ ಮಾರುಕಟ್ಟೆಯಲ್ಲಿ ಪ್ರತಿ ಕ್ವಿಂಟಲ್‌ಗೆ 5000ರೂ. ಇದೆ. ಇಳುವರಿ ಕುಸಿತದಿಂದ ರೈತರು ನಷ್ಟ ಅನುಭವಿಸುವಂತಾಗಿದೆ.

ಜಿಲ್ಲೆಯ ಈ ಭಾಗದಲ್ಲಿ ಕಡಲೆಯನ್ನು ವ್ಯಾಪಕವಾಗಿ ಬೆಳೆಯುತ್ತಾರೆ. ಈ ಬಾರಿ 650 ಹೆಕ್ಟೇರ್ ಪ್ರದೇಶದಲ್ಲಿ ಕಡಲೆ ಬೆಳೆಯಲಾಗಿದೆ. ಮಳೆ ಕೊರತೆ ಹವಾಮಾನ ವೈಪರೀತ್ಯದಿಂದ ಇಳುವರಿ ತೀವ್ರ ಕುಸಿದಿದೆ. ಕಳೆದ ಬಾರಿ ಪ್ರತಿ ಎಕರೆಗೆ 8 ಕ್ವಿಂಟಲ್‌ ವರೆಗೆ ಇಳುವರಿ ಬಂದಿತ್ತು ಎನ್ನುತ್ತಾರೆ ಕೃಷಿ ಇಲಾಖೆಯ ಅಧಿಕಾರಿಗಳು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿರಸಿ | ರಾಜೇಂದ್ರ ಸಿರ್ಸಿಕರ್‌ಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೌರವ

ಶಿರಸಿ: ಪ್ರಾಣಿ-ಪಕ್ಷಿಗಳ ರಕ್ಷಣೆ ಮತ್ತು ಪುನರ್ವಸತಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿರಸಿಯ ರಾಜೇಂದ್ರ...

ಧಾರವಾಡ | ಪೊಲೀಸ್ ಹೆಸರೇಳಿ ರೂ. 15,700 ವಂಚನೆ: ನಾಲ್ಕು ಬೈಕ್‍ಗಳು ನಗದು ವಶ

ಪೊಲೀಸ್ ಹೆಸರೇಳಿ ವ್ಯಕ್ತಿಯೊಬ್ಬರಿಂದ ₹15,700 ಹಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ...

ಗೋಕರ್ಣ | ಕುಡ್ಲೆ ಕಡಲತೀರದಲ್ಲಿ ಸಮುದ್ರ ಸುಳಿಗೆ ಸಿಲುಕಿದ್ದ ಬೆಂಗಳೂರಿನ ಇಬ್ಬರು ಪ್ರವಾಸಿಗರ ರಕ್ಷಣೆ

ಗೋಕರ್ಣ: ಸಮುದ್ರದಲ್ಲಿ ಈಜುತ್ತಿದ್ದ ವೇಳೆ ಅಪಾಯಕಾರಿ ಸುಳಿಗೆ ಸಿಲುಕಿದ ಬೆಂಗಳೂರಿನ ಇಬ್ಬರು...