ತುಮಕೂರು ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಯಶಸ್ವಿಗೆ ಡಿಸಿ ಕರೆ

Date:

ತುಮಕೂರು ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಯಶಸ್ವಿಗೊಳಿಸುವ ನಿಟ್ಟಿನಲ್ಲಿ, ತಮ್ಮಗೆ ನಿಯೋಜಿಸಲಾದ ಕಾರ್ಯಗಳನ್ನು ಅಚ್ಚುಕಟ್ಟಾಗಿ ಮತ್ತು ಸಮಯಕ್ಕೆ ಸರಿಯಾಗಿ ನಿರ್ವಹಿಸಬೇಕೆಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅವರು ಅಧಿಕಾರಿಗಳಿಗೆ ಸೂಚಿಸಿದರು.

- Advertisement -

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸೋಮವಾರ 17ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಪೂರ್ವಭಾವಿ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು ನಗರದ ಗಾಜಿನ ಮನೆಯಲ್ಲಿ ಡಿಸೆಂಬರ್ 29 ಹಾಗೂ 30ರಂದು ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಸಕಲ ಸಿದ್ಧತೆಗಳನ್ನು ಕೈಗೊಳ್ಳಲು 14 ಸಮಿತಿಗಳನ್ನು ರಚನೆ ಮಾಡಲಾಗಿದೆ ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ವಿರಾಟ್ ಕೊಹ್ಲಿ: ದಂತಕಥೆಯ ಪಯಣದ ಮತ್ತೊಂದು ಸುವರ್ಣ ಅಧ್ಯಾಯ

ಕ್ರಿಕೆಟ್ ಕೇವಲ ಒಂದು ಆಟವಲ್ಲ, ಅದೊಂದು ಜೀವಂತ ಭಾವನೆ ಎಂದು ನಂಬಿರುವ ಕೋಟ್ಯಂತರ ಭಾರತೀಯರಿಗೆ ವಿರಾಟ್ ಕೊಹ್ಲಿ ಕೇವಲ ಒಬ್ಬ ಆಟಗಾರನಲ್ಲ; ಬದಲಾಗಿ ಅದ್ಭುತ ಕಾವ್ಯದಂತಿರುವ ಒಂದು ಸುವರ್ಣ ಶಕೆ. ನವೆಂಬರ್ 5,...

‘ವಿಬಿ-ಜಿ ರಾಮ್‌ ಜಿ’ ಅನುಷ್ಠಾನದಲ್ಲಿ ಎಡವಟ್ಟು! ಕೂಲಿ ಸಿಗದೆ...

ಗ್ರಾಮೀಣ ಬಡ ಕುಟುಂಬಗಳಿಗೆ ಆಸರೆಯಾಗಬೇಕಿದ್ದ ‘ವಿಬಿ-ಜಿ ರಾಮ್ ಜಿ’ (VB-G RAM G) ಯೋಜನೆ, ಅನುಷ್ಠಾನದ ಎಡವಟ್ಟುಗಳಿಂದಾಗಿ ಗೊಂದಲದ ಗೂಡಾಗಿದೆ. ಕೆಲಸ ಮಾಡಿದರೂ ತಿಂಗಳುಗಟ್ಟಲೆ ಕೂಲಿ ಸಿಗದೆ ಬಡ ಕಾರ್ಮಿಕರು ಆರ್ಥಿಕ ಸಂಕಷ್ಟಕ್ಕೆ...

ಖಾಲಿಯಾಗುತ್ತಿವೆ ಉತ್ತರ ಕನ್ನಡದ ಹಳ್ಳಿಗಳು: 40ಕ್ಕೂ ಹೆಚ್ಚು ಗ್ರಾಮಗಳಲ್ಲಿ...

ಮಕ್ಕಳ ಗದ್ದಲ, ಕೃಷಿ ಚಟುವಟಿಕೆಯ ಹಿಗ್ಗು, ಹಬ್ಬ-ಹರಿದಿನಗಳ ಸಂಭ್ರಮದಿಂದ ಕಂಗೊಳಿಸುತ್ತಿದ್ದ ಹಳ್ಳಿಗಳು ಇವತ್ತು ನಿಶ್ಶಬ್ದವಾಗಿ ನಿಂತಿವೆ. ಪ್ರಕೃತಿಯ ಮಡಿಲಲ್ಲಿ ಕಟ್ಟಿಕೊಂಡಿದ್ದ ಬದುಕು ನಿಧಾನವಾಗಿ ಕರಗಿ ಹೋಗುತ್ತಿದೆ. ಊರು ತೊರೆದು ಪಟ್ಟಣ ಸೇರವುದು ಅನಿವಾರ್ಯವ...

ಜಿಲ್ಲೆಯ ಪ್ರತಿ ತಾಲೂಕಿನಿಂದ ಒಂದೊಂದು ಕಲಾ ತಂಡ ಹಾಗೂ ವಿವಿಧ ಸಾಂಸ್ಕೃತಿಕ ಕಲಾ ತಂಡಗಳೊಂದಿಗೆ ಸಮ್ಮೇಳನಾಧ್ಯಕ್ಷರ ಭವ್ಯ ಮೆರವಣಿಗೆಯನ್ನು ನಗರದ ಮಹಾನಗರ ಪಾಲಿಕೆ ಮುಂಭಾಗದಿಂದ ಎಂ.ಜಿ. ರಸ್ತೆ, ಗುಂಚಿ ಚೌಕ ಹಾಗೂ ಜಿಲ್ಲಾಧಿಕಾರಿಗಳ ಕಚೇರಿ ಮುಂಭಾಗದ ಮಾರ್ಗವಾಗಿ ಗಾಜಿನ ಮನೆಯವರೆಗೂ ಆಯೋಜಿಸಲಾಗುತ್ತದೆ ಎಂದು ಅವರು ಹೇಳಿದರು.

ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಕಾರ್ಯಕ್ರಮಕ್ಕೆ ವ್ಯಾಪಕವಾದ ಪ್ರಚಾರಗೊಳಿಸಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲು ಜಿಲ್ಲೆಯ 330 ಗ್ರಾಮ ಪಂಚಾಯತಿ ಹಾಗೂ ಮಹಾನಗರ ಪಾಲಿಕೆಯ 35 ವಾರ್ಡ್ಗಳ ಕಸ ವಿಲೇವಾರಿ ವಾಹನಗಳಲ್ಲಿ ಧ್ವನಿಮುದ್ರಿಕೆಗಳನ್ನು ಪ್ರಸಾರ ಮಾಡಲು ಸೂಚಿಸಿದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಈಶ್ವರ್ ಕು.ಮಿರ್ಜಿ ಮಾತನಾಡಿ, ಎರಡು ದಿನಗಳ ಕಾಲ ನಡೆಯುವ ಸಮ್ಮೇಳನದಲ್ಲಿ ಸುಗಮ ಸಂಗೀತ, ನೃತ್ಯ ಕಾರ್ಯಕ್ರಮ, ರಂಗಗೀತೆಗಳ ಗಾಯನ, ವಿವಿಧ ಶಾಲಾ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ, ಹರಿಕಥೆ ಸೇರಿದಂತೆ ಹಲವಾರು ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ ಎಂದು ಹೇಳಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ.ಪ್ರಭು, ಮಹಾನಗರ ಪಾಲಿಕೆ ಆಯುಕ್ತ ಯೋಗಾನಂದ, ಉಪ ವಿಭಾಗಧಿಕಾರಿ ನಾಹಿದಾ ಜ಼ಮ್ ಜ಼ಮ್ , ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾಧ್ಯಕ್ಷ ಕೆ.ಎಸ್. ಸಿದ್ದಲಿಂಗಪ್ಪ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳು, ಡಾ. ಚಂದ್ರಶೇಖರ್, ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿರಸಿ | 2013ರ ಮಹದಾಯಿ ಪ್ರಕರಣ: ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇರ್ ಬಂಧನ

ಕರ್ನಾಟಕ ರೈತ ಸಂಘ ಹಸಿರು ಸೇನೆ ರಾಜ್ಯಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ ಅವರನ್ನು...

ಖಾಲಿಯಾಗುತ್ತಿವೆ ಉತ್ತರ ಕನ್ನಡದ ಹಳ್ಳಿಗಳು: 40ಕ್ಕೂ ಹೆಚ್ಚು ಗ್ರಾಮಗಳಲ್ಲಿ ಶೂನ್ಯ ಜನವಸತಿ!

ಮಕ್ಕಳ ಗದ್ದಲ, ಕೃಷಿ ಚಟುವಟಿಕೆಯ ಹಿಗ್ಗು, ಹಬ್ಬ-ಹರಿದಿನಗಳ ಸಂಭ್ರಮದಿಂದ ಕಂಗೊಳಿಸುತ್ತಿದ್ದ ಹಳ್ಳಿಗಳು...

‘SIR’ ಪರಿಶೋಧ-ಪ್ರತಿರೋಧ: ಸೆ.29ರಂದು ಮೈಸೂರಿನಲ್ಲಿ ಪ್ರಕಾಶ್ ರಾಜ್ ಸಂವಾದ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (Special Intensive Revision-SIR) ಪ್ರಕ್ರಿಯೆ...

ಉಡುಪಿ | ಹೆತ್ತ ತಾಯಿಯನ್ನೇ ಕಾರಿನಲ್ಲಿ ಕರೆತಂದು ಅಪರಿಚಿತ ಸ್ಥಳದಲ್ಲಿ ಬಿಟ್ಟುಹೋದ ಮಗ

ಹೆತ್ತ ತಾಯಿಯನ್ನೇ ಮಗ ಅಪರಿಚಿತ ಸ್ಥಳದಲ್ಲಿ ಬಿಟ್ಟು ತೆರಳಿರುವ ಅಮಾನವೀಯ ಘಟನೆ...