ಮಂಗಳೂರು | ಶಾಲಾ ಕಾಲೇಜುಗಳಲ್ಲಿ ಮಾದಕ ವ್ಯಸನದ ಜಾಗೃತಿ ಮೂಡಿಸಲು ಡಿಸಿ ಸೂಚನೆ

Date:

Advertisements

ಶಾಲಾ-ಕಾಲೇಜುಗಳ ಮಕ್ಕಳು ಮಾದಕ ದ್ರವ್ಯಗಳಿಗೆ ಬಲಿಯಾಗುವ ಸಾಧ್ಯತೆ ಹೆಚ್ಚಾಗಿರುವುದರಿಂದ ಮಕ್ಕಳಿಗೆ ಮುಂದೆ ಸಂಭವಿಸುವ ಅನಾಹುತಗಳ ಅರಿವು ಮೂಡಿಸಲು ಅಧಿಕಾರಿಗಳು ಹೆಚ್ಚಿನ ಕ್ರಮವಹಿಸುವಂತೆ ಜಿಲ್ಲಾಧಿಕಾರಿ ದರ್ಶನ್ ಹೆಚ್ ವಿ ಸೂಚಿಸಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ನಾರ್ಕೋ ಕೋ ಆರ್ಡಿನೇಷನ್ ಸೆಂಟರ್‌ನ ಜಿಲ್ಲಾಮಟ್ಟದ ಸಮಿತಿ ಸಭೆಯಲ್ಲಿ ಅವರು ಮಾತನಾಡಿದರು.

“ಶಾಲಾ ಕಾಲೇಜುಗಳಲ್ಲಿ ಮಾದಕ ದ್ರವ್ಯಗಳ ಆಕರ್ಷಣೆಗೊಳಗಾಗುವ ಸಾಧ್ಯತೆ ಹೆಚ್ಚಾಗಿರುವುದರಿಂದ ಇದರ ಬಗ್ಗೆ ಮಕ್ಕಳಿಗೆ ಅರಿವು ಮೂಡಿಸಬೇಕು. ಅರಿವು ಕಾರ್ಯಕ್ರಮಗಳಲ್ಲಿ ಭಾಗವಹಿಸದೇ ಇರುವ ಮಕ್ಕಳ ಮಾಹಿತಿಯನ್ನು ಡಿಡಿಪಿಯು ಹಾಗೂ ಡಿಡಿಪಿಐ ಅಧಿಕಾರಿಗಳು ನೀಡಬೇಕು. ಅಪ್ರಾಪ್ತ ವಯಸ್ಸಿನಲ್ಲಿ ಮಾದಕ ವ್ಯಸನಕ್ಕೆ ತುತ್ತಾದಲ್ಲಿ ಆರೋಗ್ಯದ ಮೇಲೆ ಪರಿಣಾಮ ಬೀರಿ ಮಕ್ಕಳು ಖಿನ್ನತೆಗೆ ಒಳಗಾಗುತ್ತಾರೆ. ಇದರಿಂದ ಮಕ್ಕಳ ಬೆಳವಣಿಗೆ ಹಾಗೂ ತೂಕ ಕುಂಠಿತಗೊಳ್ಳುತ್ತದೆ. ಕೈಗಳಲ್ಲಿ ಚುಚ್ಚಿದ ಗಾಯಗಳು ಅಥವಾ ಕಣ್ಣು ಕೆಂಪಾಗುವಿಕೆ ಇದ್ದಲ್ಲಿ ತಕ್ಷಣ ಪೋಷಕರು ಮಕ್ಕಳ ಚಲನವಲನಗಳ ಬಗ್ಗೆ ನಿಗಾವಹಿಸಬೇಕು. ಇಲ್ಲವಾದಲ್ಲಿ ಕುಟುಂಬದ ಸ್ವಾಸ್ಥ್ಯ ಹಾಳಾಗಲು ಪ್ರಾರಂಭವಾಗುತ್ತದೆ. ಮಕ್ಕಳು ಸಾಮಾಜಿಕವಾಗಿ ಶೈಕ್ಷಣಿಕವಾಗಿ ಪ್ರಗತಿ ಹೊಂದಲು ಸಾಧ್ಯವಾಗುವುದಿಲ್ಲ. ಈ ಬಗ್ಗೆ ಪೋಷಕರು ಹಾಗೂ ಶಾಲಾ-ಕಾಲೇಜುಗಳು ಹಾಗೂ ಹಾಸ್ಟೆಲ್‍ಗಳಲ್ಲಿ ಮಕ್ಕಳನ್ನು ಸೂಕ್ಷ್ಮವಾಗಿ ಪರಿಶೀಲಿಸಬೇಕು” ಎಂದು ಜಿಲ್ಲಾಧಿಕಾರಿಗಳು ಸಲಹೆ ನೀಡಿದರು.

Advertisements

ಇದನ್ನೂ ಓದಿ: ಮಂಗಳೂರು | ತಾನು ಕೆಲಸ‌ ಮಾಡುತ್ತಿದ್ದ ಬ್ಯಾಂಕ್‌ನಲ್ಲೇ ನಿವೃತ್ತ ನೌಕರ ನೇಣಿಗೆ ಶರಣು

“ಚಾರಣ ಪ್ರದೇಶ, ದೇವಸ್ಥಾನ ಹಾಗೂ ಇತರ ಕಡೆ ಟ್ರಕ್ಕಿಂಗ್ ಹೋಗುವ ಶಾಲಾ-ಕಾಲೇಜು ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರ ಬಗ್ಗೆ ತೀವ್ರ ನಿಗಾವಹಿಸಬೇಕು. ಇವರಲ್ಲಿ ಮಾದಕ ವ್ಯಸನಿಗಳು ಕಂಡುಬಂದಲ್ಲಿ ಸಂಬಂಧಪಟ್ಟ ಇಲಾಖೆಗೆ ಮಾಹಿತಿ ನೀಡಬೇಕು ಇದರಿಂದ ಉತ್ತಮ ಆರೋಗ್ಯವಂತ ಸಮಾಜ ನಿರ್ಮಿಸಬಹುದು” ಎಂದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಅರುಣ್ ಕೆ. ಮಾತನಾಡಿ, “ಕೃಷಿ, ತೋಟಗಾರಿಕೆ ಹಾಗೂ ಅರಣ್ಯ ಇಲಾಖೆ ಅಧಿಕಾರಿಗಳು ತಮ್ಮ ವ್ಯಾಪ್ತಿ ಪ್ರದೇಶಗಳಲ್ಲಿ ಗಾಂಜಾ ಬೆಳೆಯುತ್ತಿರುವ ಬಗ್ಗೆ ಕಾಲಕಾಲಕ್ಕೆ ಪರಿಶೀಲನೆ ನಡೆಸಬೇಕು ಎಂದರು. ಮಾದಕ ವಸ್ತುಗಳನ್ನು ಸರಬರಾಜು ಮಾಡುವ ಸಂಶಯಿತ ಪಾರ್ಸೆಲ್‍ಗಳ ಬಗ್ಗೆ ಹಾಗೂ ಅಂಚೆಗೆ ನೀಡಲಾದ ವಿಳಾಸದಲ್ಲಿ ವಾಸ್ತವ್ಯವಿಲ್ಲದೆ ಅಂಚೆ ಮೂಲಕ ಬರುವ ಪಾರ್ಸೆಲ್‍ಗಳನ್ನು ತೆಗೆದುಕೊಳ್ಳುವವರನ್ನು ಪರಿಶೀಲಿಸಬೇಕು. ಅವರ ಮಾಹಿತಿಯನ್ನು ಪ್ರತ್ಯೇಕವಾಗಿ ದಾಖಲು ಮಾಡಬೇಕು. ಇದರೊಂದಿಗೆ ಕಾರ್ಮಿಕ ಇಲಾಖೆಯವರು ಹೊರ ರಾಜ್ಯಗಳಿಂದ ಬರುವ ಕಾರ್ಮಿಕರ ಬಗ್ಗೆ ಸೂಕ್ತ ಮಾಹಿತಿ ಸಂಗ್ರಹಿಸಬೇಕು. ಆರೋಗ್ಯ ಇಲಾಖೆಯಿಂದ ತಂಬಾಕು ನಿಯಂತ್ರಣದ ಕುರಿತು ಜಾಗೃತಿ ಮೂಡಿಸಲು ಹೆಚ್ಚಿನ ಆದ್ಯತೆ ನೀಡಬೇಕು. ತಪಾಸಣೆ ವೇಳೆ ತಪ್ಪಿತಸ್ಥರು ಇದ್ದಲ್ಲಿ ಸೂಕ್ತ ಕ್ರಮ ಕೈಗೊಂಡು ಅವರ ವ್ಯಾಪಾರ ಪರವಾನಿಗೆ ರದ್ದು ಮಾಡಬೇಕು” ಎಂದು ಸೂಚಿಸಿದರು.

ಇದನ್ನೂ ಓದಿ: ಬಂಟ್ವಾಳ | ಗ್ರಾಮ ಪಂಚಾಯತ್‌ ಸಭಾಂಗಣದಲ್ಲಿ ರಾಜಕೀಯ ಸಭೆ; ಪಿಡಿಒ ಅಮಾನತು

ಸಭೆಯಲ್ಲಿ ಕಾನೂನು ಸುವ್ಯವಸ್ಥೆ ಉಪ ಪೊಲೀಸ್‌ ಆಯುಕ್ತ ಸಿದ್ದಾರ್ಥ್ ಗೋಯಲ್, ಅಪರ ಜಿಲ್ಲಾಧಿಕಾರಿ ಡಾ. ಸಂತೋಷ್ ಕುಮಾರ್ ಜಿ, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಕ್ಲಿಫರ್ಡ್ ಲೋಬೋ ಹಾಗೂ ಇತರ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X