ಮಂಗಳೂರು | ಶಾಲಾ ಕಾಲೇಜುಗಳಲ್ಲಿ ಮಾದಕ ವ್ಯಸನದ ಜಾಗೃತಿ ಮೂಡಿಸಲು ಡಿಸಿ ಸೂಚನೆ

Date:

ಶಾಲಾ-ಕಾಲೇಜುಗಳ ಮಕ್ಕಳು ಮಾದಕ ದ್ರವ್ಯಗಳಿಗೆ ಬಲಿಯಾಗುವ ಸಾಧ್ಯತೆ ಹೆಚ್ಚಾಗಿರುವುದರಿಂದ ಮಕ್ಕಳಿಗೆ ಮುಂದೆ ಸಂಭವಿಸುವ ಅನಾಹುತಗಳ ಅರಿವು ಮೂಡಿಸಲು ಅಧಿಕಾರಿಗಳು ಹೆಚ್ಚಿನ ಕ್ರಮವಹಿಸುವಂತೆ ಜಿಲ್ಲಾಧಿಕಾರಿ ದರ್ಶನ್ ಹೆಚ್ ವಿ ಸೂಚಿಸಿದರು.

- Advertisement -

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ನಾರ್ಕೋ ಕೋ ಆರ್ಡಿನೇಷನ್ ಸೆಂಟರ್‌ನ ಜಿಲ್ಲಾಮಟ್ಟದ ಸಮಿತಿ ಸಭೆಯಲ್ಲಿ ಅವರು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಸಂವಿಧಾನದ ಒಂಬತ್ತನೇ ಅನುಸೂಚಿ: ಉದ್ದೇಶ, ಕಾಯ್ದೆಗಳ ಸೇರ್ಪಡೆ ಮತ್ತು...

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರ ಮೀಸಲಾತಿ ಕೋಟಾ ಹೆಚ್ಚಿಸಿ ರಾಜ್ಯ ರೂಪಿಸಿದ ಕಾಯ್ದೆಯನ್ನು ಉಚ್ಚ ನ್ಯಾಯಾಲಯ ರದ್ದುಗೊಳಿಸಿರುವುದನ್ನು, ಪರ್ಯಾಯ ಕಂಡುಕೊಳ್ಳದೆ, ರಕ್ಷಿಸಿಕೊಳ್ಳುವ ಉದ್ದೇಶದಿಂದ ಅನುಸೂಚಿ 9ಕ್ಕೆ ಸೇರಿಸಲು ಕೇಂದ್ರ ಸರ್ಕಾರಕ್ಕೆ ರವಾನಿಸಿದೆ....

ಭತ್ತಕ್ಕೆ ಬೆಲೆಯಿಲ್ಲ, ಅಕ್ಕಿ ದರ ಇಳಿಯುತ್ತಲೇ ಇಲ್ಲ!

ಮುಂಗಾರು ಹಂಗಾಮಿನಲ್ಲಿ ದೇಶಾದ್ಯಂತ ಭತ್ತ ಬಿತ್ತನೆ ಪ್ರದೇಶದಲ್ಲಿ ಗಣನೀಯ ಇಳಿಕೆಯಾಗಿದೆ. ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಸಚಿವಾಲಯದ ಅಂಕಿಅಂಶಗಳ ಪ್ರಕಾರ, 2025-26ನೇ ಸಾಲಿನಲ್ಲಿ 449.18 ಲಕ್ಷ ಹೆಕ್ಟೇರ್‌ಗಳಷ್ಟಿದ್ದ ಭತ್ತ ಬಿತ್ತನೆ ಪ್ರದೇಶ,...

ಸಾಮಾಜಿಕ ಜಾಲತಾಣದಲ್ಲಿ Belonging ಆತ್ಮಕಥನ ಬಿಡುಗಡೆ ಸಮಾರಂಭದ ಪಟಗಳದೇ...

ಒಬ್ಬ ತಾಯಿಯ ಬದುಕಿನ ಪುಟಗಳು ಪುಸ್ತಕವಾಗಿ ಹೊರಬಂದ ದಿನ, ಮಕ್ಕಳ ಕಣ್ಣಲ್ಲಿ ಹೆಮ್ಮೆ ಮತ್ತು ವಾತ್ಸಲ್ಯ ಒಟ್ಟಿಗೆ ತುಂಬಿಕೊಂಡಿತ್ತು. ತಾಯಿಯ ಮಾತುಗಳನ್ನು ತದೇಕಚಿತ್ತದಿಂದ ಆಲಿಸುತ್ತಿದ್ದ ರಾಹುಲ್ ಗಾಂಧಿ, ತನ್ನ ಬದುಕಿನ ಅಮೋಘ ಕ್ಷಣಗಳನ್ನು...

“ಶಾಲಾ ಕಾಲೇಜುಗಳಲ್ಲಿ ಮಾದಕ ದ್ರವ್ಯಗಳ ಆಕರ್ಷಣೆಗೊಳಗಾಗುವ ಸಾಧ್ಯತೆ ಹೆಚ್ಚಾಗಿರುವುದರಿಂದ ಇದರ ಬಗ್ಗೆ ಮಕ್ಕಳಿಗೆ ಅರಿವು ಮೂಡಿಸಬೇಕು. ಅರಿವು ಕಾರ್ಯಕ್ರಮಗಳಲ್ಲಿ ಭಾಗವಹಿಸದೇ ಇರುವ ಮಕ್ಕಳ ಮಾಹಿತಿಯನ್ನು ಡಿಡಿಪಿಯು ಹಾಗೂ ಡಿಡಿಪಿಐ ಅಧಿಕಾರಿಗಳು ನೀಡಬೇಕು. ಅಪ್ರಾಪ್ತ ವಯಸ್ಸಿನಲ್ಲಿ ಮಾದಕ ವ್ಯಸನಕ್ಕೆ ತುತ್ತಾದಲ್ಲಿ ಆರೋಗ್ಯದ ಮೇಲೆ ಪರಿಣಾಮ ಬೀರಿ ಮಕ್ಕಳು ಖಿನ್ನತೆಗೆ ಒಳಗಾಗುತ್ತಾರೆ. ಇದರಿಂದ ಮಕ್ಕಳ ಬೆಳವಣಿಗೆ ಹಾಗೂ ತೂಕ ಕುಂಠಿತಗೊಳ್ಳುತ್ತದೆ. ಕೈಗಳಲ್ಲಿ ಚುಚ್ಚಿದ ಗಾಯಗಳು ಅಥವಾ ಕಣ್ಣು ಕೆಂಪಾಗುವಿಕೆ ಇದ್ದಲ್ಲಿ ತಕ್ಷಣ ಪೋಷಕರು ಮಕ್ಕಳ ಚಲನವಲನಗಳ ಬಗ್ಗೆ ನಿಗಾವಹಿಸಬೇಕು. ಇಲ್ಲವಾದಲ್ಲಿ ಕುಟುಂಬದ ಸ್ವಾಸ್ಥ್ಯ ಹಾಳಾಗಲು ಪ್ರಾರಂಭವಾಗುತ್ತದೆ. ಮಕ್ಕಳು ಸಾಮಾಜಿಕವಾಗಿ ಶೈಕ್ಷಣಿಕವಾಗಿ ಪ್ರಗತಿ ಹೊಂದಲು ಸಾಧ್ಯವಾಗುವುದಿಲ್ಲ. ಈ ಬಗ್ಗೆ ಪೋಷಕರು ಹಾಗೂ ಶಾಲಾ-ಕಾಲೇಜುಗಳು ಹಾಗೂ ಹಾಸ್ಟೆಲ್‍ಗಳಲ್ಲಿ ಮಕ್ಕಳನ್ನು ಸೂಕ್ಷ್ಮವಾಗಿ ಪರಿಶೀಲಿಸಬೇಕು” ಎಂದು ಜಿಲ್ಲಾಧಿಕಾರಿಗಳು ಸಲಹೆ ನೀಡಿದರು.

ಇದನ್ನೂ ಓದಿ: ಮಂಗಳೂರು | ತಾನು ಕೆಲಸ‌ ಮಾಡುತ್ತಿದ್ದ ಬ್ಯಾಂಕ್‌ನಲ್ಲೇ ನಿವೃತ್ತ ನೌಕರ ನೇಣಿಗೆ ಶರಣು

“ಚಾರಣ ಪ್ರದೇಶ, ದೇವಸ್ಥಾನ ಹಾಗೂ ಇತರ ಕಡೆ ಟ್ರಕ್ಕಿಂಗ್ ಹೋಗುವ ಶಾಲಾ-ಕಾಲೇಜು ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರ ಬಗ್ಗೆ ತೀವ್ರ ನಿಗಾವಹಿಸಬೇಕು. ಇವರಲ್ಲಿ ಮಾದಕ ವ್ಯಸನಿಗಳು ಕಂಡುಬಂದಲ್ಲಿ ಸಂಬಂಧಪಟ್ಟ ಇಲಾಖೆಗೆ ಮಾಹಿತಿ ನೀಡಬೇಕು ಇದರಿಂದ ಉತ್ತಮ ಆರೋಗ್ಯವಂತ ಸಮಾಜ ನಿರ್ಮಿಸಬಹುದು” ಎಂದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಅರುಣ್ ಕೆ. ಮಾತನಾಡಿ, “ಕೃಷಿ, ತೋಟಗಾರಿಕೆ ಹಾಗೂ ಅರಣ್ಯ ಇಲಾಖೆ ಅಧಿಕಾರಿಗಳು ತಮ್ಮ ವ್ಯಾಪ್ತಿ ಪ್ರದೇಶಗಳಲ್ಲಿ ಗಾಂಜಾ ಬೆಳೆಯುತ್ತಿರುವ ಬಗ್ಗೆ ಕಾಲಕಾಲಕ್ಕೆ ಪರಿಶೀಲನೆ ನಡೆಸಬೇಕು ಎಂದರು. ಮಾದಕ ವಸ್ತುಗಳನ್ನು ಸರಬರಾಜು ಮಾಡುವ ಸಂಶಯಿತ ಪಾರ್ಸೆಲ್‍ಗಳ ಬಗ್ಗೆ ಹಾಗೂ ಅಂಚೆಗೆ ನೀಡಲಾದ ವಿಳಾಸದಲ್ಲಿ ವಾಸ್ತವ್ಯವಿಲ್ಲದೆ ಅಂಚೆ ಮೂಲಕ ಬರುವ ಪಾರ್ಸೆಲ್‍ಗಳನ್ನು ತೆಗೆದುಕೊಳ್ಳುವವರನ್ನು ಪರಿಶೀಲಿಸಬೇಕು. ಅವರ ಮಾಹಿತಿಯನ್ನು ಪ್ರತ್ಯೇಕವಾಗಿ ದಾಖಲು ಮಾಡಬೇಕು. ಇದರೊಂದಿಗೆ ಕಾರ್ಮಿಕ ಇಲಾಖೆಯವರು ಹೊರ ರಾಜ್ಯಗಳಿಂದ ಬರುವ ಕಾರ್ಮಿಕರ ಬಗ್ಗೆ ಸೂಕ್ತ ಮಾಹಿತಿ ಸಂಗ್ರಹಿಸಬೇಕು. ಆರೋಗ್ಯ ಇಲಾಖೆಯಿಂದ ತಂಬಾಕು ನಿಯಂತ್ರಣದ ಕುರಿತು ಜಾಗೃತಿ ಮೂಡಿಸಲು ಹೆಚ್ಚಿನ ಆದ್ಯತೆ ನೀಡಬೇಕು. ತಪಾಸಣೆ ವೇಳೆ ತಪ್ಪಿತಸ್ಥರು ಇದ್ದಲ್ಲಿ ಸೂಕ್ತ ಕ್ರಮ ಕೈಗೊಂಡು ಅವರ ವ್ಯಾಪಾರ ಪರವಾನಿಗೆ ರದ್ದು ಮಾಡಬೇಕು” ಎಂದು ಸೂಚಿಸಿದರು.

ಇದನ್ನೂ ಓದಿ: ಬಂಟ್ವಾಳ | ಗ್ರಾಮ ಪಂಚಾಯತ್‌ ಸಭಾಂಗಣದಲ್ಲಿ ರಾಜಕೀಯ ಸಭೆ; ಪಿಡಿಒ ಅಮಾನತು

ಸಭೆಯಲ್ಲಿ ಕಾನೂನು ಸುವ್ಯವಸ್ಥೆ ಉಪ ಪೊಲೀಸ್‌ ಆಯುಕ್ತ ಸಿದ್ದಾರ್ಥ್ ಗೋಯಲ್, ಅಪರ ಜಿಲ್ಲಾಧಿಕಾರಿ ಡಾ. ಸಂತೋಷ್ ಕುಮಾರ್ ಜಿ, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಕ್ಲಿಫರ್ಡ್ ಲೋಬೋ ಹಾಗೂ ಇತರ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಎಲ್‌ನಿನೋ ಪರಿಣಾಮ: ಜನವರಿಯಿಂದಲೇ ಕುಡಿಯುವ ನೀರಿನ ಅಭಾವದ ಆತಂಕ

ಎಲ್‌ನಿನೋ ಪರಿಣಾಮದಿಂದ ಈ ಬಾರಿ ಬೇಸಿಗೆಯಲ್ಲಿ ಎದುರಾಗುವ ಕುಡಿಯುವ ನೀರಿನ ಸಮಸ್ಯೆ...

ಉಡುಪಿ | ನ.19ರಿಂದ 22ರವರೆಗೆ ಮಣಿಪಾಲ ಕ್ಯಾಂಪಸ್‌ನಲ್ಲಿ ಘಟಿಕೋತ್ಸವ; 207 ಮಂದಿಗೆ ಪಿಎಚ್‌ಡಿ ಪದವಿ

ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜ್ಯುಕೇಶನ್ (ಮಾಹೆ) ವಿಶ್ವವಿದ್ಯಾಲಯದ 34ನೇ ಘಟಿಕೋತ್ಸವಕ್ಕೆ...

ಚಿಕ್ಕಮಗಳೂರು | ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ವಾರ್ಷಿಕ ಕ್ರೀಡಾಕೂಟ

ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ನವೆಂಬರ್ ೧೮ ರಂದು ಬೆಳಿಗ್ಗೆ 8.೦೦...