ದಲಿತರು ಶಿಕ್ಷಣ ಉದ್ಯೋಗಕ್ಕೆ ಸೀಮಿತಗೊಳ್ಳದೆ ಉದ್ಯಮಿಗಳಾಗುವಂತೆ ಡಿಸಿ ಎಂ.ಆರ್ ರವಿ ಕರೆ

Date:

ಕೋಲಾರ: ಸಮಾಜದಲ್ಲಿ ದಲಿತರು ಕೇವಲ ಶಿಕ್ಷಣ ಮತ್ತು ಉದ್ಯೋಗಕ್ಕೆ ಅಷ್ಟೇ ಸೀಮಿತಗೊಳ್ಳದೆ ಉದ್ಯಮಿಯಾಗಿ ನೂರಾರು ಜನಕ್ಕೆ ಉದ್ಯೋಗ ನೀಡುವಷ್ಟು ಮಟ್ಟಿಗೆ ಬೆಳೆಯಬೇಕು ಜೊತೆಗೆ ಬೇರೆ ಬೇರೆ ವರ್ಗಗಳಂತೆ ತಾವುಗಳು ಸಹ ಎಲ್ಲಾ ಕ್ಷೇತ್ರದಲ್ಲಿ ಬೆಳೆಯಲು ಪ್ರಯತ್ನಿಸಬೇಕು ಎಂದು ಜಿಲ್ಲಾಧಿಕಾರಿ ಡಾ.ಎಂ.ಆರ್ ರವಿ ತಿಳಿಸಿದರು

- Advertisement -

ನಗರದ ಲೋಕೋಪಯೋಗಿ ಇಲಾಖೆಯ ಆವರಣದಲ್ಲಿ ಮಂಗಳವಾರ ಜಿಲ್ಲಾ ಎಸ್ಸಿ,ಎಸ್ಟಿ ಗುತ್ತಿಗೆದಾರರ ಸಂಘ, ದಲಿತ್ ಇಂಡಿಯನ್ ಚೇಂಬರ್ ಆಫ್ ಕಾಮರ್ಸ್ ಇಂಡಸ್ಟ್ರಿ, ಮತ್ತು ಜಿಲ್ಲಾ ಹಿಂದುಳಿದ ವರ್ಗಗಳ ಗುತ್ತಿಗೆದಾರರ ಸಂಘದ ವತಿಯಿಂದ ನಡೆದ ಅಂಬೇಡ್ಕರ್ ಅವರ 135 ಜಯಂತೋತ್ಸವನ್ನು ಉದ್ಘಾಟಿಸಿ ಮಾತನಾಡಿದ ಅವರು ದಲಿತರು ಉದ್ಯೋಗ ಹುಡುಕುವ ಬದಲಿಗೆ ಉದ್ಯಮಪತಿಗಳಾಗಿ ಉದ್ಯೋಗ ಕೊಟ್ಟಾಗ ಮಾತ್ರವೇ ಅಂಬೇಡ್ಕರ್ ಅವರ ಆಶಯಗಳಿಗೆ ಬೆಲೆ ಕೊಟ್ಟಂತೆ ಆಗುತ್ತದೆ ಎಂದರು

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಜನತಂತ್ರದ ಬಿಕ್ಕಟ್ಟಿಗೆ ಮೌನ; ವ್ಯಾಪಾರಿಗಳ ನಷ್ಟಕ್ಕೆ ಪರಿಹಾರದ ಭರವಸೆ;...

ಚುನಾವಣಾ ಜನತಂತ್ರ ಬಿಕ್ಕಟ್ಟಿಗೆ ಸಿಲುಕಿದಾಗ, ನಾಗರಿಕರ ಪ್ರತಿಭಟನಾ ಹಕ್ಕು ಬೀದಿಗೆ ಬಿದ್ದಾಗ ಸುಪ್ರೀಂ ಕೋರ್ಟ್ ತಳೆದ ಮೌನ, ಸ್ಪಂದಿಸಿದ ರೀತಿ, ಕನಾಟ್ ಪ್ಲೇಸ್‌ನ ವ್ಯಾಪಾರಿಗಳು ಹಾಗೂ ಉದ್ಯೋಗಿಗಳ ಜೀವನೋಪಾಯಕ್ಕೆ ಧಕ್ಕೆಯಾದರೆ ಮಧ್ಯಪ್ರವೇಶಿಸಿ ಪರಿಹಾರ...

‘ಕೈಮುಗಿದು ಕಾಲಿಗೆ ಬೀಳುವೆ…’ ಪ್ರಜಾಪ್ರಭುತ್ವ ಕುಸಿತಕ್ಕೆ ಮುನ್ನುಡಿಯೇ?

ಜಾತಿ ಅಸಮಾನತೆ, ಸಾಮಾಜಿಕ ಶೋಷಣೆ ಮತ್ತು ರಾಜಕೀಯ ಪ್ರಭಾವದ ಮುಂದೆ ಜನಪ್ರತಿನಿಧಿಗಳೇ ಕೈಮುಗಿದು ನಿಲ್ಲುವ ದುಸ್ಥಿತಿ ಪ್ರಜಾಪ್ರಭುತ್ವದ ಅಡಿಪಾಯವನ್ನೇ ಅಲುಗಾಡಿಸುತ್ತಿದೆ. ಸಂವಿಧಾನ ಸಾರಿದ ಸಮಾನತೆ, ಸ್ವಾತಂತ್ರ್ಯ ಮತ್ತು ಭ್ರಾತೃತ್ವ ಕೇವಲ ಕಾಗದಕ್ಕೆ ಸೀಮಿತವಾಗುತ್ತಿದೆಯೇ...

JNU ವಿದ್ಯಾರ್ಥಿ ‘ನಜೀಬ್’ ನಾಪತ್ತೆಗೆ 10 ವರ್ಷಗಳು: ಉತ್ತರ...

ತನಿಖಾ ಸಂಸ್ಥೆಗಳು ಕಡತವನ್ನು ಮುಚ್ಚಿದ ಮಾತ್ರಕ್ಕೆ ಒಬ್ಬ ತಾಯಿಯ ಹುಡುಕಾಟವನ್ನಾಗಲಿ ಅಥವಾ ಅಮಾಯಕ ವಿದ್ಯಾರ್ಥಿಯೊಬ್ಬನ ನಾಪತ್ತೆ ಕುರಿತ ಪ್ರಶ್ನೆಗಳನ್ನಾಗಲಿ ಅಳಿಸಿಹಾಕಲು ಸಾಧ್ಯವಿಲ್ಲ. ನಜೀಬ್ ಅಹ್ಮದ್ ಅವರನ್ನು ಕೇವಲ ಒಂದು ಪ್ರತಿಭಟನೆಯ ಸಂಕೇತವಾಗಿ ನೆನೆಯುವ...

ಅಂಬೇಡ್ಕರ್ ಅವರು ಸಮಾಜದಲ್ಲಿ ಮಾನವನ ಘನತೆಯನ್ನು ಎತ್ತಿಹಿಡಿದಿದ್ದಾರೆ ಶೋಷಣೆಯನ್ನು ಎಚ್ಚರಗೊಳ್ಳಲು ಇಂತಹ ಕಾರ್ಯಕ್ರಮ ಮುಖ್ಯವಾಗಿದೆ ನಿರಂತರವಾಗಿ ಪರಿಶ್ರಮದಿಂದ ಮೇಲೆ ಬರಬೇಕು ಏಕತೆ ಒಗ್ಗಟ್ಟಿನಿಂದ ಅವಕಾಶವನ್ನು ಪಡೆಯಬೇಕು ಅಂಬೇಡ್ಕರ್ ಸಮಾಜದ ಹಿತಕ್ಕಾಗಿ ಕೆಲಸ ಮಾಡಿದ್ದಾರೆ ಕಳಂಕ ಮುಕ್ತ ಸಮಾಜ ನಿರ್ಮಾಣ ನಮ್ಮ ಜವಾಬ್ದಾರಿಯಾಗಬೇಕು ಎಂದರು

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ಎಸ್ಸಿ,ಎಸ್ಟಿ ಗುತ್ತಿಗೆದಾರರ ಸಂಘ ಅಧ್ಯಕ್ಷ ಮಾರ್ಜೇನಹಳ್ಳಿ ಬಾಬು ಮಾತನಾಡಿ ಅಂಬೇಡ್ಕರ್ ಅವರನ್ನು ಭಾರತದಲ್ಲಿ ಅಷ್ಟೇ ಅಲ್ಲದೇ ವಿಶ್ವಾದ್ಯಂತ ಜಯಂತಿಯನ್ನು ಆಚರಣೆ ಮಾಡಲಾಗುತ್ತಿದೆ ಅವರ ಅಶಯಗಳೇ ನಮಗೆ ಮಾರ್ಗದರ್ಶನ ಅವರು ಕೊಟ್ಟ ಭಿಕ್ಷೆಯಲ್ಲಿ ಬದುಕುತ್ತಿದ್ದೇವೆ, ಸರ್ಕಾರವು ದಲಿತ ಗುತ್ತಿಗೆದಾರಿಗೆ ಇವತೆ ಅನ್ಯಾಯ ಮಾಡಿದೆ ಬರುವ ಅನುದಾನವು ನಿರ್ಮಿತಿ ಕೇಂದ್ರ ಮತ್ತು ಕ್ರೆಡಿಲ್ ಇಲಾಖೆಗೆ ಕೊಟ್ಟಿದ್ದು ದಲಿತ ಗುತ್ತಿಗೆದಾರರಿಗೆ ಸಿಗುತ್ತಿಲ್ಲ ಸರ್ಕಾರದ ಆದೇಶವನ್ನು ಉಲ್ಲಂಘನೆ ಮಾಡಲಾಗಿದೆ ಅದರ ಬಗ್ಗೆ ಜಿಲ್ಲಾಡಳಿತ ಮತ್ತು ಸರ್ಕಾರವು ಕ್ರಮ ವಹಿಸಿ ನ್ಯಾಯ ಒದಗಿಸಬೇಕು ಎಂದು ಮನವಿ ಮಾಡಿದರು.

ಇದನ್ನು ಓದಿದ್ದೀರಾ..?ಹಿರಿಯ ನಾಯಕ ನಜೀರ್ ಅಹ್ಮದ್ ರಾಜೀನಾಮೆ ಪಡೆದರೆ ಕಾಂಗ್ರೆಸ್‌ಗೆ ತಕ್ಕ ಪಾಠ: ಬೆಂಬಲಿಗರ ಎಚ್ಚರಿಕೆ

ಈ ಸಂದರ್ಭದಲ್ಲಿ ಲೋಕೋಪಯೋಗಿ ಇಲಾಖೆಯ ರಾಮಮೂರ್ತಿ, ಕುಡಿಯುವ ನೀರು ಇಲಾಖೆಯ ಎಂ.ರಘು, ಸಣ್ಣ ನೀರಾವರಿ ಇಲಾಖೆಯ ವೆಂಕಟರಮಣ, ನಗರಾಭಿವೃದ್ಧಿ ಇಲಾಖೆಯ ಗಂಗಾಧರ, ಹಿರಿಯ ದಲಿತ ಮುಖಂಡರು ವಕ್ಕಲೇರಿ ರಾಜಪ್ಪ, ವರದೇನಹಳ್ಳಿ ವೆಂಕಟೇಶ್, ದಲಿತ್ ಇಂಡಿಯನ್ ಚೇಂಬರ್ ಆಫ್ ಕಾಮರ್ಸ್ ಇಂಡಸ್ಟ್ರಿ ಅಧ್ಯಕ್ಷ ಅಮ್ಮೇರಹಳ್ಳಿ ಚಲಪತಿ, ಜಿಲ್ಲಾ ಹಿಂದುಳಿದ ವರ್ಗಗಳ ಗುತ್ತಿಗೆದಾರರ ಸಂಘದ ಅಧ್ಯಕ್ಷ ಜಯರಾಮ್ ಮುಖಂಡರಾದ ಕಿರಣ್ ರಾಜಣ್ಣ ಮುಂತಾದವರು ಇದ್ದರು

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

​ಚಿಂತಾಮಣಿ | ಎನ್‌ಡಿಎ ಅಭ್ಯರ್ಥಿ ಪರ ಜೆಡಿಎಸ್-ಬಿಜೆಪಿ ಕಾರ್ಯಕರ್ತರ ಮತಬೇಟೆ;ವಕೀಲರ ಭೇಟಿ ಮಾಡಿದ ಜೆ.ಕೆ. ಕೃಷ್ಣಾರೆಡ್ಡಿ

ಚಿಂತಾಮಣಿ ನಗರದ ನ್ಯಾಯಾಲಯದಲ್ಲಿ ಪದವೀಧರ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆಯ ಎನ್‌ಡಿಎ...

ರಾಯಚೂರು | ರೈತರ ವಿವಿಧ ಬೇಡಿಕೆಗಳ ಈಡೇರಿಕೆಗೆ ಅ.24ರಿಂದ ಬೃಹತ್ ಪಾದಯಾತ್ರೆ

ರೈತರು, ಕೃಷಿ ಕೂಲಿಕಾರರು ಹಾಗೂ ಗ್ರಾಮೀಣ ಕಾರ್ಮಿಕರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ...

ಹಾವೇರಿ ವಿವಿಯಲ್ಲಿ ಆಯುಧಪೂಜೆ ಕಡ್ಡಾಯ; ಸಾಹಿತಿಗಳು, ಶಿಕ್ಷಣ ತಜ್ಞರು ಖಂಡನೆ

ಹಾವೇರಿ ವಿಶ್ವವಿದ್ಯಾಲಯದ ಕುಲಸಚಿವರು ಎಲ್ಲ ಅಧ್ಯಯನ ವಿಭಾಗಗಳ ಶಿಕ್ಷಕ/ ಶಿಕ್ಷಕೇತರ ಸಿಬ್ಬಂದಿ...

ಬಲೂನ್ ಮಾರುವ 9 ವರ್ಷದ ಬಾಲಕಿ ಅತ್ಯಾಚಾರ, ಕೊಲೆ ಪ್ರಕರಣ: ಅಪರಾಧಿ ಕಾರ್ತಿಕ್‌ಗೆ ಗಲ್ಲು ಶಿಕ್ಷೆ

ಕಳೆದ ವರ್ಷದ ದಸರಾ ಮಹೋತ್ಸವದ ಸಂದರ್ಭದಲ್ಲಿ ಕುಟುಂಬದೊಂದಿಗೆ ಟೆಂಟ್‌ನಲ್ಲಿ ಮಲಗಿದ್ದ 9...