ಮಂಗಳೂರು ಮಹಾನಗರ ಪಾಲಿಕೆಗೆ ನಿನ್ನೆ ಜಿಲ್ಲಾಧಿಕಾರಿ ದರ್ಶನ್ ಎಚ್ ವಿ ದಿಢೀರ್ ಭೇಟಿ ನೀಡಿದರು. ಮಹಾನಗರ ಪಾಲಿಕೆಯಲ್ಲಿ ವ್ಯಾಪಕ ಭಷ್ಟ್ರಾಚಾರ ನಡೆಯುತ್ತಿದೆ ಎಂಬ ಆರೋಪ ಕೇಳಿ ಬಂದ ಬೆನ್ನಲ್ಲೇ ಜೂನ್ 21 ರಂದು ಮಹಾನಗರ ಪಾಲಿಕೆ ಮೇಲೆ ಲೋಕಾಯುಕ್ತ ದಾಳಿ ನಡೆದಿತ್ತು.
ಈ ಹಿನ್ನೆಲೆ ಜಿಲ್ಲಾಧಿಕಾರಿ ದರ್ಶನ್ ಎಚ್ ವಿ ಅವರು ಪಾಲಿಕೆಯ ವಿವಿಧ ವಿಭಾಗಗಳಿಗೆ ಭೇಟಿ ನೀಡಿ ಪರಿಶೀಲಿಸಿದ ಬಳಿಕ ಮಹಾನಗರ ಪಾಲಿಕೆಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು. ನಗರದಲ್ಲಿ ಚಾಲನೆಯಲ್ಲಿರುವ ವಿವಿಧ ಅಭಿವೃದ್ಧಿ ಕಾಮಗಾರಿಗಳ ಮಾಹಿತಿ ಪಡೆದ ಅವರು, ಪ್ರವಾಹ ನಿಯಂತ್ರಣಕ್ಕೆ ನಡೆದಿರುವ ಕಾಮಗಾರಿಗಳ ಕುರಿತು ಚರ್ಚೆ ನಡೆಸಿದರು.
ಇದನ್ನೂ ಓದಿ: ಮಂಗಳೂರು | ರೀಲ್ಸ್‌ಗಳಿಗೆ ಲೈಕ್ ನೆಪದಲ್ಲಿ ₹2.30 ಲಕ್ಷ ವಂಚನೆ; ಕೇಸ್ ದಾಖಲು
ನಂತರ, ಸ್ಮಾರ್ಟ್ ಸಿಟಿ ಕಚೇರಿಗೆ ಭೇಟಿ ನೀಡಿ ಇದುವರೆಗೆ ನಡೆದಿರುವ ಯೋಜನೆಗಳ ಸಂಪೂರ್ಣ ಮಾಹಿತಿ ಪಡೆದರು. ಈ ಸಂದರ್ಭದಲ್ಲಿ ಮಹಾನಗರಪಾಲಿಕೆ ಆಯುಕ್ತ ರವಿಚಂದ್ರ ನಾಯಕ್. ಸ್ಮಾರ್ಟ್ ಸಿಟಿ ಎಂ ಡಿ ರಾಜು ಮತ್ತಿತರರು ಇದ್ದರು.