ತುಂಗಭದ್ರಾ ಅಣೆಕಟ್ಟು ಗೇಟಿನ ದುರಸ್ಥಿಗೆ ಉನ್ನತಮಟ್ಟದ ತಂತ್ರಜ್ಞರ ತಂಡ: ಡಿಸಿಎಂ ಡಿ.ಕೆ. ಶಿವಕುಮಾರ್

Date:

ತುಂಗಭದ್ರಾ ಅಣೆಕಟ್ಟಿನ ಹಾನಿಗೊಳಗಾದ 19ನೇ ಗೇಟನ್ನು ದುರಸ್ಥಿ ಮಾಡಲು ಉನ್ನತ ಅನುಭವವುಳ್ಳವರನ್ನು ಕರೆಸುತ್ತಿದ್ದೇವೆ. ಈ ಘಟನೆ ಅತ್ಯಂತ ದುಃಖಕರ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಹೇಳಿದರು.

- Advertisement -

ಭಾನುವಾರ ಹೊಸಪೇಟೆಯ ತುಂಗಭದ್ರಾ ಜಲಾಶಯಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ನಂತರ ಮಾಧ್ಯಮದವರನ್ನು ಉದ್ದೇಶಿಸಿ ಮಾತನಾಡಿದ ಅವರು, “ನಮ್ಮ ತುಂಗಭದ್ರಾ ನೀರಾವರಿ ನಿಗಮದಲ್ಲಿಯೂ ಉತ್ತಮ ತಂತ್ರಜ್ಞರಿದ್ದಾರೆ. ಅಲ್ಲದೇ ಗುತ್ತಿಗೆದಾರ ಸಂಸ್ಥೆಗಳಾದ ಕೃಷ್ಣಯ್ಯ, ನಾರಾಯಣ ಹಾಗೂ ಹಿಂದುಸ್ಥಾನ್ ಸಂಸ್ಥೆಯ ತಂಡಗಳು ಈಗಾಗಲೇ ದುರಸ್ತಿ ಕಾರ್ಯಕ್ಕೆ ಚಾಲನೆ ನೀಡಿದ್ದಾರೆ. ತಂತ್ರಜ್ಞರಿಗೆ ಈಗಾಗಲೇ ಅಣೆಕಟ್ಟಿನ ವಿನ್ಯಾಸ ನಕ್ಷೆ ನೀಡಲಾಗಿದೆ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

“ಶನಿವಾರ ರಾತ್ರಿ ಜಲಾಶಯದ 10 ಗೇಟ್ ಗಳನ್ನು ತೆರೆಲಾಗಿತ್ತು. ಏಕಾಏಕಿ ಜಲಾಶಯದ 19 ನೇ ಗೇಟಿನ ಚೈನ್ ಲಿಂಕ್ ತುಂಡಾದ ಹಿನ್ನೆಲೆ ಎಲ್ಲಾ ಗೇಟ್ ತೆರೆದು ಅಣೆಕಟ್ಟಿನ ಮೇಲಿನ ಒತ್ತಡ ಕಡಿಮೆ ಮಾಡಲಾಗಿದೆ” ಎಂದರು.

“ಸದ್ಯ ಜಲಾಶಯದಿಂದ 98 ಸಾವಿರ ಕ್ಯೂಸೆಕ್ ನೀರು ಹೊರಗಡೆ ಬಿಡಲಾಗುತ್ತಿದೆ. 19 ನೇ ಗೇಟ್ ಒಂದರಲ್ಲಿಯೇ 35 ಸಾವಿರ ಕ್ಯೂಸೆಕ್ ನೀರು ಹೊರಹೋಗುತ್ತಿದೆ. ಅಚ್ಚುಕಟ್ಟು ಪ್ರದೇಶದ ರೈತರು ಭಯಪಡುವ ಅವಶ್ಯಕತೆ ಇಲ್ಲ” ಎಂದು ಹೇಳಿದರು.

ರೈತರ ಒಂದು ಬೆಳೆಗಾದರೂ ನೀರನ್ನು ಉಳಿಸುತ್ತೇವೆ

“ಜಲಾಶಯದಿಂದ 60 ಟಿಎಂಸಿ ನೀರು ಖಾಲಿ ಮಾಡಬೇಕಿದೆ. ಗೇಟನ್ನು ಮತ್ತೆ ಹಾಕಬೇಕೆಂದರೆ ಒತ್ತಡ ಕಡಿಮೆ ಮಾಡಬೇಕಿದೆ. ಜಲಾಶಯದಲ್ಲಿ 150 ಟಿಎಂಸಿ ನೀರನ್ನು ಸಂಗ್ರಹ ಮಾಡಬಹುದು. ಜಲಾಶಯಕ್ಕೆ ಒಳಹರಿವು 28,000 ಕ್ಯೂಸೆಕ್ಸ್  ಇದೇ. ಕನಿಷ್ಠ ನಮ್ಮ ರೈತರಿಗೆ ಒಂದು ಬೆಳಗಾದರೂ ಒದಗಿಸುವಷ್ಟು ನೀರನ್ನು ಉಳಿಸಿಕೊಳ್ಳುತ್ತೇವೆ” ಎಂದು ತಿಳಿಸಿದರು.

“ಅಣೆಕಟ್ಟಿನ  ಪ್ರಮುಖ ಮೂರು ಕಾಲುವೆಗಳಿಗೆ ನೀರನ್ನು ಹರಿಸಲು 115 ಟಿ ಎಂ ಸಿ ನೀರಿನ ಅವಶ್ಯಕತೆ ಇದೆ. ಇದೆಲ್ಲವನ್ನು ಲೆಕ್ಕಾಚಾರ ಹಾಕಿ ರೈತರನ್ನು ಉಳಿಸುವ ನಿಟ್ಟಿನಲ್ಲಿ ಕೆಲಸ ಮಾಡುತ್ತೇವೆ. ಪಕ್ಕದ ರಾಜ್ಯಗಳಿಗೆ ಈಗಾಗಲೇ 25 ಟಿಎಂಸಿ ನೀರನ್ನು ಕೊಡಲಾಗಿದೆ. ಇನ್ನೂ 90 ಟಿಎಂಸಿ ನೀರನ್ನು ಕೊಡಬೇಕಾಗಿದೆ. ಮೂರು ರಾಜ್ಯಗಳು ಒಟ್ಟಿಗೆ ಸೇರಿ ಈ ಸಮಸ್ಯೆಯನ್ನು ಬಗೆಹರಿಸುತ್ತೇವೆ. ರೈತರು ಆತಂಕಕ್ಕೆ ಒಳಗಾಗಬೇಡಿ” ಎಂದರು.

“ಆಂಧ್ರಪ್ರದೇಶ, ತೆಲಂಗಾಣ ಮತ್ತು ಕರ್ನಾಟಕ ಈ ಮೂರು ರಾಜ್ಯಗಳ ರೈತರಿಗೆ ಬಹುಮುಖ್ಯವಾದ ಜಲಾಶಯ ಇದಾಗಿದೆ. ನಮ್ಮ ಕರ್ನಾಟಕದ 12 ಲಕ್ಷ ಹೆಕ್ಟರ್ ಅಚ್ಚುಕಟ್ಟು ಪ್ರದೇಶವನ್ನು ಇದು ಹೊಂದಿದೆ. ಕೊಪ್ಪಳ, ರಾಯಚೂರು, ಬಳ್ಳಾರಿ ಸೇರಿದಂತೆ ಅನೇಕ ಜಿಲ್ಲೆಗಳು ಇದರಿಂದ ಲಾಭ ಪಡೆಯುತ್ತಿವೆ. ನಮ್ಮ ರೈತರು ಆತಂಕ ಪಡಬೇಕಾಗಿಲ್ಲ ಸರ್ಕಾರ ನಿಮ್ಮ ಜೊತೆಗಿದೆ” ಎಂದು ತಿಳಿಸಿದರು.

“ಇದು 60 ರಿಂದ 70 ವರ್ಷ ಹಳೆಯ ಜಲಾಶಯವಾಗಿದ್ದು. ಘಟನೆಗೆ ಸಂಬಂಧಿಸಿದಂತೆ ನಾನು ಯಾವ ಅಧಿಕಾರಿಗಳನ್ನೂ ದೂರುವುದಿಲ್ಲ. ದೇಶದ ಸಂಪತ್ತನ್ನು ಕಾಪಾಡಬೇಕಿದೆ. ಅಣೆಕಟ್ಟಿನ ಎರಡು ಕಿಲೋಮೀಟರ್ ಸುತ್ತಳತೆಯಲ್ಲಿ ತಂತ್ರಜ್ಞರು ಹಾಗೂ ಸಂಬಂಧಪಟ್ಟ ಅಧಿಕಾರಿಗಳನ್ನು ಹೊರತುಪಡಿಸಿ ಜನಪ್ರತಿನಿಧಿಗಳಿಗೂ ಸಹ ಪ್ರವೇಶವನ್ನು ನಿರ್ಬಂಧಿಸಲಾಗಿದೆ” ಎಂದರು.

“ಆ.13 ರಂದು ಅಣೆಕಟ್ಟು ತುಂಬಿದ ಹಿನ್ನೆಲೆಯಲ್ಲಿ  ನಾನು, ಸಿಎಂ ಬಾಗಿನ ಅರ್ಪಿಸುವ ಕಾರ್ಯಕ್ರಮವಿತ್ತು. ಈಗ ಅದನ್ನು ಮುಂದೂಡಲಾಗಿದೆ. ಮೊದಲು ಅಣೆಕಟ್ಟಿನ ಸುರಕ್ಷತೆ ನಮಗೆ ಮುಖ್ಯವಾಗಿದೆ ” ಎಂದರು.

ದುರಸ್ತಿಗೆ ಎಷ್ಟು ಸಮಯ ತೆಗೆದುಕೊಳ್ಳುತ್ತದೆ ಎಂದು ಪ್ರಶ್ನೆ ಕೇಳಿದಾಗ ” ನಮ್ಮ ಅಧಿಕಾರಿಗಳು ಪ್ರತಿಕ್ಷಣವೂ ಎಚ್ಚರಿಕೆಯಿಂದ ಕೆಲಸ ಮಾಡುತ್ತಿದ್ದಾರೆ. ಈ ಘಟನೆ ಆದ ಕ್ಷಣದಿಂದ ತ್ವರಿತವಾಗಿ ಕೆಲಸ ಮಾಡುತ್ತಿದ್ದಾರೆ. ಯಾರ ನಿರ್ಲಕ್ಷತೆಯಿಂದಲೂ ಈ ಅವಘಡ ನಡೆದಿಲ್ಲ. ಆಕಸ್ಮಿಕವಾಗಿ ಈ ಘಟನೆ ನಡೆದಿದೆ” ಎಂದು ಹೇಳಿದರು.

ಇತರೆ ಜಲಾಶಯಗಳನ್ನು ಪರಿಶೀಲಿಸಲಾಗುತ್ತದೆಯೇ ಎಂದು ಕೇಳಿದಾಗ “ಬೇರೆ ಜಲಾಶಯಗಳಲ್ಲಿ ರೋಪ್ ಹಾಗೂ ಚೈನ್ ಎರಡು ವ್ಯವಸ್ಥೆ ಮಾಡಲಾಗಿರುತ್ತದೆ. ಈ ಜಲಾಶಯವನ್ನು ವಿನ್ಯಾಸ ಮಾಡುವಾಗ ಚೈನ್ ವ್ಯವಸ್ಥೆ ಮಾಡಿದ್ದಾರೆ. ಮೊದಲು ಇಲ್ಲಿನ ಸಮಸ್ಯೆ ಪರಿಹರಿಸಿ ಆನಂತರ ಇತರೆಡೆ ಪರಿಶೀಲನೆ ಮಾಡಲಾಗುವುದು” ಎಂದು ತಿಳಿಸಿದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಧಾರವಾಡ | ಎನ್‌.ಎಸ್‌.ಎಸ್‌ ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನದ ದಾರಿ: ನಾಲತವಾಡ

ವಿದ್ಯಾರ್ಥಿಗಳಲ್ಲಿ ಕೇವಲ ಶೈಕ್ಷಣಿಕ ಜ್ಞಾನವಷ್ಟೇ ಅಲ್ಲದೆ, ಸಾಮಾಜಿಕ ಜವಾಬ್ದಾರಿ, ನಾಯಕತ್ವ ಗುಣ...

ವಿಜಯಪುರ | ಮತದಾರರ ಹಕ್ಕು ರಕ್ಷಣೆಗೆ SIR ಪರಿಶೋಧನಾ ಪ್ರವಾಸ; ನಟ ಪ್ರಕಾಶ್ ರಾಜ್ ಭಾಗಿ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ಮತದಾರರ...

ಯುವ ಪೀಳಿಗೆ ಸತ್ಯ, ಸರಳತೆಯ ತತ್ವಗಳನ್ನು ಅಳವಡಿಸಿಕೊಳ್ಳಬೇಕು: ಪ್ರೊ. ವಿಜಯಾ ಕೋರಿಶೆಟ್ಟಿ

ಸತ್ಯ, ಅಹಿಂಸೆ, ಸರಳತೆ, ಕರ್ತವ್ಯನಿಷ್ಠೆ ಮತ್ತು ನೈತಿಕ ಮೌಲ್ಯಗಳು ಕೇವಲ ಇತಿಹಾಸದ...

ಅಹಿಂಸೆ-ಸತ್ಯಾಗ್ರಹದ ಸಂದೇಶದೊಂದಿಗೆ ಸಾಮರಸ್ಯ ನಡಿಗೆ

ಅಹಿಂಸೆ ಮತ್ತು ಸತ್ಯಾಗ್ರಹದ ಮೂಲಕ ಭಾರತವನ್ನು ಮುನ್ನಡೆಸಿ, ಜಗತ್ತಿಗೆ ಬೆಳಕಾದ ಮಹಾತ್ಮ...