ಮಂಡ್ಯ | ಕೆಆರ್‌ಎಸ್ ಬೃಂದಾವನ ಉದ್ಯಾನ ಅಭಿವೃದ್ಧಿಗೆ ಸ್ಥಳ ಪರಿಶೀಲನೆ ನಡೆಸಿದ ಡಿಸಿಎಂ ಡಿ ಕೆ ಶಿವಕುಮಾರ್

Date:

Advertisements

ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೆಆರ್‌ಎಸ್ ಬೃಂದಾವನ ಉದ್ಯಾನವನ ಅಭಿವೃದ್ಧಿಗೆ ಸಂಬಂಧಿಸಿದಂತೆ ಜಿಲ್ಲೆಯ ನಾಯಕರು ಹಾಗೂ ಇಲಾಖೆ ಅಧಿಕಾರಿಗಳ ಜತೆ ಸ್ಥಳ ಪರಿಶೀಲನೆ ನಡೆಸಿದರು.

ನಂತರ ಕೆಆರ್‌ಎಸ್‌ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೃಂದಾವನ ಉದ್ಯಾನ ಮೇಲ್ದರ್ಜೆಗೆ ಏರಿಸಲು ಈಗ ಇರುವ 200 ಎಕರೆ ಜಾಗದಲ್ಲಿ ಯೋಜನೆ ಆರಂಭಿಸುತ್ತೇವೆ. ಅಣೆಕಟ್ಟಿನ ರಕ್ಷಣೆಗೆ ಅಗತ್ಯವಿರುವ ಜಾಗವನ್ನು ಬಿಟ್ಟು ಇತರೆ ಜಾಗದಲ್ಲಿ ನಾವು ಯೋಜನೆ ರೂಪಿಸುತ್ತಿದ್ದೇವೆ. ಎರಡು ಮೂರು ಪಂಚಾಯ್ತಿ ಸೇರಿ ಇದಕ್ಕೆ ಯೋಜನಾ ಪ್ರದೇಶ ರೂಪಿಸುತ್ತೇವೆ” ಎಂದರು.

“ಹತ್ತಾರು ಸಾವಿರ ಉದ್ಯೋಗ ಸೃಷ್ಟಿಯಾಗಿ ಹೆಚ್ಚಿನ ಜನ ಆಗಮಿಸುವ ನಿರೀಕ್ಷೆಯಿಂದ ರಸ್ತೆ ಅಗಲೀಕರಣ ಸೇರಿದಂತೆ, ಈ ಭಾಗದ ಪ್ರವೇಶ ಹಾಗೂ ನಿರ್ಗಮನದಲ್ಲಿ ನಾಲ್ಕು ಸಾಲಿನ ರಸ್ತೆ, ನೀರು, ಒಳಚರಂಡಿ ವ್ಯವಸ್ಥೆ ಮಾಡಲಾಗುವುದು. ಬೃಂದಾವನ ಹಾಗೂ ರಂಗನತಿಟ್ಟು ಸೇರಿದಂತೆ ಪ್ರವಾಸೋದ್ಯಮ ಉತ್ತೇಜನ ನೀಡಲು ಯೋಜನೆ ರೂಪಿಸಲಾಗುತ್ತಿದೆ” ಎಂದು ಡಿ ಕೆ ಶಿವಕುಮಾರ್ ತಿಳಿಸಿದರು.

Advertisements
WhatsApp Image 2024 08 09 at 9.42.05 PM

“ನಮ್ಮ ಪರಂಪರೆ ಉಳಿಸಿಕೊಂಡು, ಹಳೆಯ ಮಾದರಿಯಲ್ಲಿ ಕೆಲವು ಬದಲಾವಣೆ ಮಾಡಿಕೊಳ್ಳಲಾಗಿದೆ. ಈ ಯೋಜನೆಗೆ ನಾವು 2 ಸಾವಿರ ಕೋಟಿ ಅನುದಾನ ಇಟ್ಟುಕೊಂಡಿದ್ದು, ಉದ್ಯಾನವನ ಮೇಲ್ದರ್ಜೆಗೆ ಮಾಡುವವರು ಯಾವ ರೀತಿ ಮಾಡಬೇಕು ಎಂದು ಕೆಲವು ಮಾರ್ಗಸೂಚಿಯನ್ನು ನಿಗದಿಪಡಿಸಿದ್ದೇವೆ” ಎಂದರು.

ಅಣೆಕಟ್ಟಿಗೆ ಯಾವುದೇ ತೊಂದರೆಯಾಗದಂತೆ ಅಣೆಕಟ್ಟಿನ ಘನತೆ ಹೆಚ್ಚಿಸಿ ಹಣಕಾಸು ಏಳಿಗೆಗೆ ಯೋಜನೆ ರೂಪಿಸುತ್ತಿದ್ದೇವೆ ಎಂದು ತಿಳಿಸಿದರು.

ಪತ್ರಿಕಾ ಗೋಷ್ಠಿಯಲ್ಲಿ ಕೃಷಿ ಸಚಿವ ಎನ್ ಚಲುವರಾಯಸ್ವಾಮಿ, ಶಾಸಕ ಕೆ.ಎಂ.ಉದಯ್‌ಗೌಡ, ಪಿ.ರವಿಕುಮಾರ್ ಸೇರಿದಂತೆ ಇತರರು ಉಪಸ್ಥಿತರಿದ್ದರು.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಒಳಮೀಸಲಾತಿ ಪುನರ್ ಪರಿಶೀಲಿಸಿ, ನ್ಯಾಯ ಒದಗಿಸಿ ; ಅಖಿಲ ಕರ್ನಾಟಕ ಕೊರಚ ಮಹಾ ಸಂಘ ಆಗ್ರಹ

ಶಿವಮೊಗ್ಗ, ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ಸರ್ಕಾರದ ಒಳಮೀಸಲಾತಿಯನ್ನು ಪುನರ್...

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

ಶಿವಮೊಗ್ಗ | ಡಿ.ಎ.ಆರ್.ಸಭಾಂಗಣದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಶಾಂತಿ ಸಮಿತಿ ಸಭೆ

ಎಲ್ಲಾ ಧರ್ಮದವರು ಹಬ್ಬಗಳನ್ನು ಸಡಗರ-ಸಂಭ್ರಮಗಳಿಂದ ಆಚರಿಸುವಂತೆ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಕರೆ...

Download Eedina App Android / iOS

X