ಚಿತ್ರದುರ್ಗ | ಇಂದಿರಾ ಕ್ಯಾಂಟೀನ್‌ಗೆ ಡಿಸಿ ದಿಢೀರ್ ಭೇಟಿ; ಆಹಾರದ ಗುಣಮಟ್ಟದ ಬಗ್ಗೆ ಅಸಮಾಧಾನ

Date:

Advertisements

ಚಿತ್ರದುರ್ಗದ ಇಂದಿರಾ ಕ್ಯಾಂಟೀನ್‌ಗೆ ಜಿಲ್ಲಾಧಿಕಾರಿ ದಿವ್ಯಪ್ರಭು ಜಿಆರ್‌ಜೆ ಅವರು ಬೆಳ್ಳಂಬೆಳಿಗ್ಗೆ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕ್ಯಾಂಟೀನ್‌ನಲ್ಲಿ ಸಾರ್ವಜನಿಕರಿಗೆ ನೀಡಲಾಗುವ ಆಹಾರದ ಗುಣಮಟ್ಟ, ಶುಚಿ-ರುಚಿ ಕಾಯ್ದುಕೊಳ್ಳುವಂತೆ ಕ್ಯಾಂಟೀನ್ ಸಿಬ್ಬಂದಿಗೆ ತಾಕೀತು ಮಾಡಿದ್ದಾರೆ.

ಪ್ರವಾಸಿ ಮಂದಿರದ ಬಳಿ ಇರುವ ಇಂದಿರಾ ಕ್ಯಾಂಟೀನ್‌ಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಜಿಲ್ಲಾಧಿಕಾರಿಗಳು, ಅಡುಗೆ ತಯಾರಿಕೆ ಕೊಠಡಿಗೆ ಭೇಟಿ ನೀಡಿ, ಆಹಾರದ ಗುಣಮಟ್ಟ, ಶುಚಿ-ರುಚಿ ಕೊರತೆ, ದಾಖಲೆಗಳ ಅಸಮರ್ಪಕ ನಿರ್ವಹಣೆ ಬಗ್ಗೆ ಸಾರ್ವಜನಿಕರಿಂದ ದೂರುಗಳು ಕೇಳಿ ಬರುತ್ತಿವೆ.

ಕ್ಯಾಂಟೀನ್‌ನಲ್ಲಿ ಉಪಹಾರ ಹಾಗೂ ಊಟದ ತಯಾರಿಕೆ ಉತ್ತಮವಾಗಿಲ್ಲ, ಉಪಹಾರ ರುಚಿಕಟ್ಟಾಗಲು ಅಗತ್ಯವಿರುವ ಸಾಮಾಗ್ರಿಗಳ ಸಮರ್ಪಕ ಬಳಕೆಯಾಗುತ್ತಿಲ್ಲ. ಹೀಗಾಗಿ ಸಾರ್ವಜನಿಕರು ಇಂದಿರಾ ಕ್ಯಾಂಟೀನ್‌ಗೆ ಹೆಚ್ಚು ಬರುತ್ತಿಲ್ಲ ಎಂದು ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಕಡಿಮೆ ದರದಲ್ಲಿ ಬಡವರಿಗೆ ಉತ್ತಮ ಗುಣಮಟ್ಟದ ಹಾಗೂ ರುಚಿಯಾದ ಊಟೋಪಹಾರ ಒದಗಿಸಬೇಕು ಎಂಬ ಸದುದ್ದೇಶದಿಂದ ಸರ್ಕಾರ ವಿವಿಧೆಡೆ ಇಂದಿರಾ ಕ್ಯಾಂಟೀನ್ ಗಳನ್ನು ಪ್ರಾರಂಭಿಸಿ, ನಡೆಸಲಾಗುತ್ತಿದೆ.

Advertisements

ಆದರೆ, ಸಿಬ್ಬಂದಿ ಹಾಗೂ ಸಂಬಂಧಿಸಿದ ಅಧಿಕಾರಿಗಳ ನಿರ್ಲಕ್ಷ್ಯದಿಂದಾಗಿ ಕ್ಯಾಂಟೀನ್ ನಿರ್ವಹಣೆ ಸರಿಯಾಗಿ ಆಗುತ್ತಿಲ್ಲ. ಕ್ಯಾಂಟೀನ್‌ಗೆ ಎಷ್ಟು ಆಹಾರ ಧಾನ್ಯ ಹಾಗೂ ಅಡುಗೆ ಸಾಮಗ್ರಿ ಸ್ವೀಕರಿಸಲಾಗಿದೆ, ಎಷ್ಟು ಪ್ರಮಾಣದಲ್ಲಿ ಎಷ್ಟು ಜನರಿಗೆ ಊಟೋಪಹಾರ ವಿತರಿಸಲಾಗಿದೆ ಎಂಬುದರ ಬಗ್ಗೆ ಸಮರ್ಪಕವಾಗಿ ದಾಖಲೆಗಳನ್ನು ನಿರ್ವಹಿಸಿಲ್ಲ ಎಂದು ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.

ಇಂದಿರಾ ಕ್ಯಾಂಟೀನ್‌ಗೆ ಆಹಾರದ ಗುಣಮಟ್ಟ ಪರಿಶೀಲನೆಗೆ ಸಂಬಂಧಪಟ್ಟ ಅಧಿಕಾರಿ ಪ್ರತಿ ನಿತ್ಯ ಭೇಟಿ ಮಾಡಿ ಪರಿಶೀಲಿಸಬೇಕು. ಸಂಬಂಧಪಟ್ಟ ನಗರ ಸ್ಥಳೀಯ ಸಂಸ್ಥೆಯ ಪೌರಾಯುಕ್ತರು, ಮುಖ್ಯಾಧಿಕಾರಿಗಳು ವಾರಕ್ಕೊಮ್ಮೆ ಕ್ಯಾಂಟೀನ್‌ಗೆ ಭೇಟಿ ನೀಡಿ, ಅಲ್ಲಿಯೇ ಉಪಹಾರ ಮತ್ತು ಊಟ ಸೇವಿಸಿ ಪರಿಶೀಲಿಸಬೇಕು. ಅಲ್ಲದೆ ಅಡುಗೆ ಸಾಮಾಗ್ರಿಗಳ ದಾಸ್ತಾನು, ಬಳಕೆ, ಊಟ-ಉಪಹಾರ ವಿತರಣೆ ಪ್ರಮಾಣ ಕುರಿತಂತೆ ನಿತ್ಯ ರಿಜಿಸ್ಟರಲ್ಲಿ ಮಾಹಿತಿ ದಾಖಲಾಗಬೇಕು.

ಈ ಬಗ್ಗೆ ಸಂಬಂಧಿಸಿದ ಅಧಿಕಾರಿಗಳು ಪರಿಶೀಲನೆ ನಡೆಸಬೇಕು, ನಗರ ಸ್ಥಳೀಯ ಸಂಸ್ಥೆಗಳಲ್ಲಿನ ಆರೋಗ್ಯ ನಿರೀಕ್ಷಕರು ಸ್ವಚ್ಛತೆ ಹಾಗೂ ಶುಚಿತ್ವ ನಿರ್ವಹಣೆಗೆ ಸಂಬಂಧಿಸಿದ ಅಧಿಕಾರಿಗಳು ನಿತ್ಯ ಕ್ಯಾಂಟೀನ್‌ನಲ್ಲಿನ ಸ್ವಚ್ಛತೆ ಬಗ್ಗೆ ಪರಿಶೀಲಿಸಬೇಕು ಎಂದು ಜಿಲ್ಲಾಧಿಕಾರಿಗಳು ತಾಕೀತು ಮಾಡಿದರು.

ಬರುವ ದಿನಗಳಲ್ಲಿ ಜಿಲ್ಲೆಯಲ್ಲಿನ ಇಂದಿರಾ ಕ್ಯಾಂಟೀನ್‌ಗಳಿಗೆ ಆಕಸ್ಮಿಕ ಭೇಟಿ ನೀಡಿ ಪರಿಶೀಲನೆ ನಡೆಸಲಾಗುವುದು, ಲೋಪದೋಷಗಳು ಕಂಡುಬಂದಲ್ಲಿ ಸಂಬಂಧಪಟ್ಟ ಸಿಬ್ಬಂದಿ, ಅಧಿಕಾರಿಗಳನ್ನು ಹೊಣೆಗಾರರನ್ನಾಗಿಸಲಾಗುವುದು ಎಂದು ಜಿಲ್ಲಾಧಿಕಾರಿ ದಿವ್ಯಪ್ರಭು ಅವರು ಹೇಳಿದರು.

ನಗರದ ವಿವಿಧೆಡೆ ತೆರಳಿ ಪರಿಶೀಲಿಸಿದ ಜಿಲ್ಲಾಧಿಕಾರಿಗಳು, ಮನೆ ಮನೆಯಿಂದ ಕಸ ಸಂಗ್ರಹಿಸಿ, ವಿಲೇವಾರಿ ಮಾಡುವ ಕಾರ್ಯ ಸಮರ್ಪಕವಾಗಿ ಆಗಬೇಕು. ಹಸಿ ಕಸ ಮತ್ತು ಒಣ ಕಸವನ್ನು ವಿಂಗಡಿಸಿಯೇ ಪಡೆಯಬೇಕು. ನಗರದ ಚರಂಡಿಗಳನ್ನು ಸ್ವಚ್ಛವಾಗಿರಿಸಬೇಕು ಎಂದು ನಗರಸಭೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಮಹೇಂದ್ರ ಕುಮಾ‌ರ್, ನಗರಸಭೆ ಪೌರಾಯುಕ್ತ ರೇಣುಕಾ, ಪರಿಸರ ಅಭಿಯಂತರ ಜಾಫ‌ರ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

Download Eedina App Android / iOS

X