ಪ್ರಸ್ತೂತಿ ಪೂರ್ವ ಲಿಂಗ ಪತ್ತೆ ಮತ್ತು ಭ್ರೂಣ ಹತ್ಯೆ ಪ್ರಕರಣ ರಾಜ್ಯದ ಗಮನ ನಡೆಸಿದೆ. ಹಲಾವರು ಪ್ರತಿಭಟನೆಗಳು ನಡೆಯುತ್ತಿವೆ. ಇದೂವರೆಗೂ ಒಂಬತ್ತು ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಇದೆಲ್ಲದರ ನಡುವೆ, ಮಂಡ್ಯ ಜಿಲ್ಲೆಯ ಮೇಲುಕೋಟೆ ಬಳಿ ನವಜಾತ ಹೆಣ್ಣು ಶಿಶುವಿನ ಮೃತದೇಹ ಪತ್ತೆಯಾಗಿದೆ.
ಮೇಲುಕೋಟೆ ಬಳಿಯ ದಳವಾಯಿ ಕೆರೆಯಲ್ಲಿ ಹೆಣ್ಣು ಶಿಶುವಿನ ಮೃತದೇಹ ಪತ್ತೆಯಾಗಿದೆ. ಕವರ್‌ನಲ್ಲಿ ಸುತ್ತಿ ಇಟ್ಟಿರುವ ಸ್ಥಿತಿಯಲ್ಲಿ ಮೃತದೇಹ ಕಂಡುಬಂದಿದೆ. ಮಗು ಜನಿಸಿ ಎರಡು ದಿನಗಳಷ್ಟೇ ಆಗಿರಬಹುದು ಎಂದು ಹೇಳಲಾಗಿದೆ.
ಮಗು ಸಹಜವಾಗಿ ಸಾವನ್ನಪ್ಪಿದೆಯೇ ಅಥವಾ ಹೆಣ್ಣು ಎಂಬ ಕಾರಣದಿಂದಾಗಿ ಕೊಲ್ಲಲಾಗಿದೆಯೇ ಎಂಬ ಶಂಕೆ ವ್ಯಕ್ತವಾಗಿದೆ. ಮೇಲುಕೋಟೆ ಪೊಲೀಸರು ಸ್ಥಳಕ್ಎಕ ಬಂದು ಪರಿಶೀಲನೆ ನಡೆಸಿದ್ದಾರೆ. ಮಗುವಿನ ಪೋಷಕರ ಪತ್ತೆಗೆ ಯತ್ನಿಸುತ್ತಿದ್ದಾರೆ.
ಇತ್ತೀಚೆಗೆ ಪ್ರಸೂತಿ ಪೂರ್ವ ಲಿಂಗ ಪತ್ತೆ ಮತ್ತು ಭೂತ್ರ ಹತ್ಯೆ ಪ್ರಕರಣ ಬೆಳಕಿಗೆ ಬಂದಿತ್ತು. ಬೆಂಗಳೂರು, ಮಂಡ್ಯ ಹಾಗೂ ಮೈಸೂರು ಮೂಲದ ಆರೋಪಿಗಳು ಮಂಡ್ಯದ ಆಲೆಮನೆಯೊಂದರಲ್ಲಿ ಭ್ರೂಣ ಲಿಂಗ ಪತ್ತೆ ಮಾಡಿ, ಹೆಣ್ಣು ಭ್ರೂಣಗಳನ್ನು ಕೊಲ್ಲುತ್ತಿದ್ದರು. ಪ್ರಕರಣದ ಬೆನ್ನತ್ತಿದ್ದ ಬೆಂಗಳೂರಿನ ಬೈಯಪ್ಪನಹಳ್ಳಿ ಪೊಲೀಸರು ಇದೂವರೆಗೆ ಒಂಬತ್ತು ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ.
ಆರೋಪಿಗಳು ಕಳೆದ ಒಂದೂವರೆ ವರ್ಷದಲ್ಲಿ 900 ಹೆಣ್ಣು ಭ್ರೂಣ ಹತ್ಯೆ ಮಾಡಿರುವುದಾಗಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ಇದೀಗ, ಹೆಣ್ಣು ಶಿಶುವಿನ ಮೃತದೇಹವೊಂದು ಮೇಲುಕೋಟೆ ಬಳಿ ಪತ್ತೆಯಾಗಿದೆ.