ಮೋರಿ ಬಳಿ ಒಂದೂವರೆ ವರ್ಷದ ಹೆಣ್ಣು ಮಗುವಿನ ಮೃತದೇಹ ಪತ್ತೆಯಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ನಡೆದಿದೆ.
ನಗರದ ಹೊರವಲಯದ ಬಾಶೆಟ್ಟಿಹಳ್ಳಿ ಗ್ರಾಮದ ಮೋರಿ ಬದಿ ಮಗುವಿನ ಮೃತದೇಹ ಪತ್ತೆಯಾಗಿದೆ. ಮೋದಿ ಬದಿಯಲ್ಲಿ ಶಾಲು ಹಾಸಿ, ಮಗುವಿನ ಮೃತದೇಹವನ್ನು ಯಾರೋ ಇಟ್ಟುಹೋಗಿವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.
ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ತಾಲೂಕು ಆಸ್ಪತ್ರೆಯ ಶವಾಗಾರಕ್ಕೆ ರವಾನಿಸಿದ್ದಾರೆ. ಮಗುವಿನ ಗುರುತು ಇನ್ನೂ ಪತ್ತೆಯಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.
ಮಲಗಿಸಿರುವ ಸ್ಥಿತಿಯಲ್ಲಿ ಮಗುವಿನ ಮೃತದೇಹ ಪತ್ತೆಯಾಗಿರುವ ಕಾರಣ, ಮಗು ಸಾವನ್ನಪ್ಪಿದ ಬಳಿಕವೇ ಮೋರಿ ಬಳಿಗೆ ಇಟ್ಟುಹೋಗಿರಬಹುದು ಎಂದು ಪೊಲೀಸರು ಅನುಮಾನ ವ್ಯಕ್ತಪಡಿಸಿದ್ದಾರೆ.