ಶಿರಾಡಿಘಾಟ್ ಮಾರ್ಗದಲ್ಲಿ ಸುರಂಗ ನಿರ್ಮಾಣ; ಕೇಂದ್ರಕ್ಕೆ ಪ್ರಸ್ತಾವನೆ: ಸತೀಶ್‌ ಜಾರಕಿಹೊಳಿ

Date:

  • ಶಿರಾಡಿ ಘಾಟ್, ರಾಷ್ಟ್ರೀಯ ಹೆದ್ದಾರಿ-75ರ ಕಾಮಗಾರಿ ಪರಿಶೀಲನೆ
  • ಕಾಮಗಾರಿ ಪೂರ್ಣಗೊಳಿಸಲು ಮಾರ್ಚ್‌ ವರೆಗೆ ಗಡುವು

ಪ್ರಯಾಣಿಕರ ಅನುಕೂಲ, ಸಂಚಾರ ಸಮಸ್ಯೆ ಶಾಶ್ಚತ ಪರಿಹಾರಕ್ಕಾಗಿ ಶಿರಾಡಿಘಾಟ್ ಸುರಂಗಗಳನ್ನೊಳಗೊಂಡ ಸಂಚಾರ ಮಾರ್ಗ ನಿರ್ಮಾಣ ಮಾಡಲು ಯೋಜಿಸಲಾಗಿದೆ. ಒಟ್ಟು 30 ಕಿ.ಮೀ ಉದ್ದದ ಹೊಸ ಯೋಜನೆಗೆ ರೂಪುರೇಷೆ ಸಿದ್ದಪಡಿಸಲಾಗಿದೆ. ಇದರಲ್ಲಿ 3.8 ಕಿ.ಮೀ ಸುರಂಗ ಮಾರ್ಗ ಇರಲಿದೆ ಎಂದು ಸಚಿವರು ಮಾಹಿತಿ ನೀಡಿದರು.

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರು ಶನಿವಾರ ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನಲ್ಲಿ ನಡೆಯುತ್ತಿರುವ ಶಿರಾಡಿ ಘಾಟ್, ರಾಷ್ಟ್ರೀಯ ಹೆದ್ದಾರಿ-75ರ ಕಾಮಗಾರಿ ಪರಿಶೀಲಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹತ್ತು ಕಿಲೋಮೀಟರ್ ಪ್ರದೇಶ ಅರಣ್ಯ ಸಂರಕ್ಷಣಾ ಕಾಯಿದೆ ವ್ಯಾಪ್ತಿಯಲ್ಲಿದ್ದು, ಅರಣ್ಯ ಇಲಾಖೆಯೊಂದಿಗೆ ವ್ಯವಹರಿಸಿ ವನ್ಯ ಜೀವಿಗಳ ಚಲನ ವಲನಕ್ಕೆ ಧಕ್ಕೆ ಉಂಟಾಗದಂತೆ ಯೋಜನೆ ರೂಪಿಸಲಾಗುವುದು. ಕೇಂದ್ರ ಮಂತ್ರಿಗಳನ್ನು ಭೇಟಿ ಮಾಡಿ ಗಮನಕ್ಕೆ ತರುತ್ತೇವೆ. ಅನುಮತಿ‌ ದೊರೆತ ನಂತರ ವಿಸ್ತೃತ ಕ್ರಿಯಾ ಯೋಜನೆ ರೂಪಿಸಲಾಗುವುದು ಎಂದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಹಾಸನದಿಂದ ಸಕಲೇಶಪುರ ಬೈಪಾಸ್‌ವರೆಗೆ ನವೆಂಬರ್‌ 1ರ ಒಳಗೆ ಕಾಮಗಾರಿ ಮುಗಿಸಬೇಕು. ಸಂಪೂರ್ಣ ಕಾಮಗಾರಿ 2024ರ ಮಾರ್ಚ್‌ ವೇಳೆಗೆ ಮುಕ್ತಾಯ ಮಾಡಬೇಕು. ಪ್ರತಿ ತಿಂಗಳು ಗುರಿ ನಿಗದಿಪಡಿಸಿ ಪ್ರಗತಿ ಪರಿಶೀಲನೆ, ಮೇಲ್ವಿಚಾರಣೆ ಮಾಡಲಾಗುವುದು ಎಂದು ಹೇಳಿದರು.

ದೋಣಿಗಾಲ್ ಬಳಿ ಕಳೆದ ಹಲವು ವರ್ಷಗಳಿಂದಲೂ ಭೂ ಕುಸಿತದಿಂದ ಸಮಸ್ಯೆ ಉಂಟಾಗಿರುವ ಸ್ಥಳ ಪರಿಶೀಲಿಸಿದ ಸಚಿವರು, ಆದಷ್ಟು ಶೀಘ್ರವಾಗಿ ಸಮಸ್ಯೆಗೆ ಶಾಶ್ವತ ಪರಿಹಾರ ಮಾಡುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಇದೇ ವೇಳೆ ರಸ್ತೆ ಕಾಮಗಾರಿಯಿಂದ ಭೂ ಕುಸಿತ ಉಂಟಾಗಿ ಜಮೀನು ಕಳೆದುಕೊಂಡ ರೈತರ ಭೂ‌ಮಾಲೀಕರ ಅಹವಾಲು ಆಲಿಸಿ, ಪರಿಹಾರ ದೊರಕಿಸಿ ಕೊಡುವ ಭರವಸೆ ನೀಡಿದರು.

ಸಕಲೇಶಪುರದಿಂದ ಗುಂಡ್ಯವರೆಗೆ ರಸ್ತೆ ಕಾಮಗಾರಿ ಪರಿಶೀಲಿಸಿದ ಅವರು ಕಾಲಮಿತಿಯೊಳಗೆ ಗುಣಮಟ್ಟದೊಂದಿಗೆ ಕಾಮಗಾರಿ ನಿರ್ವಹಣೆ ಮಾಡುವಂತೆ ಸೂಚಿಸಿದರು.

ಇದೇ ವೇಳೆ ಸುದ್ದಿಗಾರರಿಗೆ ಪ್ರತಿಕ್ರಿಯೆ ನೀಡಿದ ಸಚಿವ ಸತೀಶ್ ಜಾರಕಿಹೊಳಿ, ಅಧಿಕಾರಿಗಳು ಮತ್ತು ಗುತ್ತಿಗೆದಾರರ ನಿರ್ಲಕ್ಷ್ಯ ಹಾಗೂ ತಾಂತ್ರಿಕ ತೊಂದರೆಯಿಂದ ಕಾಮಗಾರಿ ವಿಳಂಬವಾಗಿದೆ. ರಾಜ್ಯದಲ್ಲಿ ಬಹಳ ದಿನಗಳಿಂದ ನನೆಗುದಿಗೆ ಬಿದ್ದಿರುವ ಯೋಜನೆಗಳಲ್ಲಿ ಇದೂ ಒಂದು ಎಂದರು.

2017 ದಿಂದ ಕಾಮಗಾರಿ ನಡೆಯುತ್ತಿದ್ದು, ಎರಡು – ಮೂರು ವರ್ಷದ ಹಿಂದೆಯೇ ಕಾಮಗಾರಿ ಮುಗಿಯಬೇಕಿತ್ತು. ಮಳೆಗಾಲದಲ್ಲಿ ಭೂಕುಸಿತ ತಡೆಗೆ ಅಗತ್ಯವಿರುವ ಕಡೆ ಕಡ್ಡಾಯವಾಗಿ ತಡೆಗೋಡೆ ನಿರ್ಮಾಣಕ್ಕೆ ಸೂಚನೆ ನೀಡಲಾಗಿದೆ ಎಂದು ಹೇಳಿದರು.

ಹಿಂದೆ ಏನಾಗಿದೆ ಎಂಬುದನ್ನು ಗಮನಿಸುತ್ತಾ ಶೀಘ್ರ ಪೂರ್ಣಗೊಳಿಸುವುದು ಸದ್ಯದ ಸವಾಲು. ನಮ್ಮ ಸರ್ಕಾರ ಇದನ್ನು ಸಮರ್ಥವಾಗಿ ನಿಭಾಯಿಸಲಿದೆ. ಎಲ್ಲೆಲ್ಲಿ ಬಹಳ ಸಮಸ್ಯೆಯಿದೆ ಅಲ್ಲಿ ಕಾಂಕ್ರಿಟ್ ತಡೆಗೋಡೆ ಕಟ್ಟಲು ಸೂಚನೆ ನೀಡಿದ್ದೇವೆ. ಭೂಕುಸಿತದಿಂದ ನಷ್ಟ ಅನುಭವಿಸುವವರಿಗೆ ಪರಿಹಾರನೂ ಕೊಡಲಾಗುವುದು ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ನನ್ನ ರಾಜಕೀಯ ಜೀವನದಲ್ಲಿ ಹೊಸ ಅಧ್ಯಾಯ : ಪರಿಷತ್‌ಗೆ ಆಯ್ಕೆ ಬಳಿಕ ಜಗದೀಶ್ ಶೆಟ್ಟರ್

ಇದು ಬೆಂಗಳೂರು – ಮಂಗಳೂರಿಗೆ ನಡುವೆ ಸಂಪರ್ಕ ಕಲ್ಪಿಸುವ ಮುಖ್ಯ ರಸ್ತೆಯಾಗಿದ್ದು, ಕಾಮಗಾರಿಗಾಗಿ ಸಂಪೂರ್ಣವಾಗಿ ಶಿರಾಡಿಘಾಟ್ ರಸ್ತೆ ಬಂದ್ ಮಾಡಲು ಆಗುವುದಿಲ್ಲ. ಸಮಯದ ಮಿತಿಗಳಲ್ಲಿ ಏಕಮುಖ ಸಂಚಾರ ಮಾಡಿ ವಾಹನ ಸಂಚರಿಸಲು ಅವಕಾಶ ನೀಡಲು ಚಿಂತನೆ ಮಾಡಿದ್ದೇವೆ ಎಂದು ಹೇಳಿದರು.

ಈ ವೇಳೆ ಸಕಲೇಶಪುರ ಕ್ಷೇತ್ರದ ಶಾಸಕ ಸಿಮೆಂಟ್‌ ಮಂಜು, ಲೋಕೋಪಯೋಗಿ ಇಲಾಖೆ ಕಾರ್ಯದರ್ಶಿ ಸತ್ಯನಾರಾಯಣ, ರಾಷ್ಟೀಯ ಹೆದ್ದಾರಿ ಪ್ರಾಧಿಕಾರದ ಮುಖ್ಯ ಎಂಜಿನಿಯರ್ ರಮೇಂದ್ರ, ಎಸ್ ಎಚ್.ಡಿ.ಪಿ ಮುಖ್ಯ ಯೋಜನಾಧಿಕಾರಿ ಶಿವಯೋಗಿ ಹಿರೇಮಠ್, ಉಪ ವಿಭಾಗಾಧಿಕಾರಿ ಅನ್ಮೋಲ್ ಜೈನ್ ಹಾಗೂ ಇತರರು ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯಪುರ | ದೇಶದ ಅಭಿವೃದ್ಧಿಯಲ್ಲಿ ಕಾಂಗ್ರೆಸ್‌ ತನ್ನದೇ ಛಾಪು ಮೂಡಿಸಿದೆ: ಮಂಜುನಾಥ ಸುಣಗಾರ

ಇವತ್ತು ದೇಶದಲ್ಲಿ ಕಾಂಗ್ರೆಸ್ ಪಕ್ಷ ಸ್ವಾತಂತ್ರ್ಯ ಪೂರ್ವದಲ್ಲಿ ಹಾಗೂ ಸ್ವಾತಂತ್ರ್ಯ ನಂತರದಲ್ಲಿ...

ವಿಜಯಪುರ | ಮೋದಿ ದುರಾಡಳಿತ ಕೊನೆಗಾಣಿಸಬೇಕು: ಅಪ್ಪಾಸಾಹೇಬ ಯರನಾಳ

ಮೋದಿ ಹಿಟ್ಲರ್ ಶಾಹಿ ಆಡಳಿತ ಕೊನೆಗೊಳ್ಳುವ ಸಮಯ ಬಂದಿದೆ, ಮೋದಿ ಈ...

ತುಮಕೂರು | ಸ್ಟ್ರಾಂಗ್ ರೂಮ್ ಪರಿಶೀಲಿಸಿದ ಜಿಲ್ಲಾಧಿಕಾರಿ

ತುಮಕೂರು ಲೋಕಸಭಾ ಕ್ಷೇತ್ರದ ಚುನಾವಣೆ ಯಶಸ್ವಿಯಾಗಿ ಮುಕ್ತಾಯಗೊಂಡಿದ್ದು, ಕ್ಷೇತ್ರ ವ್ಯಾಪ್ತಿಗೆ ಒಳಪಡುವ...

ಚಿಕ್ಕಬಳ್ಳಾಪುರ | ಅನುಚಿತ ಪ್ರಭಾವ, ಲಂಚ, ಭ್ರಷ್ಟಾಚಾರ ಪ್ರಕರಣದಡಿ ಕೆ.ಸುಧಾಕರ್ ವಿರುದ್ಧ ಎಫ್‌ಐಆರ್

ಚುನಾವಣೆಯಲ್ಲಿ ಮತದಾರರಿಗೆ ಲಂಚ ನೀಡಲು ಮನೆಯೊಂದರಲ್ಲಿ ಅಕ್ರಮವಾಗಿ ಹಣ ದಾಸ್ತಾನು ಮಾಡಿದ್ದ...