ವಿಜಯಪುರ | 7 ಮಂದಿ ಕಾರ್ಮಿಕರ ಸಾವು ಪ್ರಕರಣ; ಸಂತ್ರಸ್ತ ಕುಟುಂಬಗಳಿಗೆ ಹೆಚ್ಚಿನ ಪರಿಹಾರಕ್ಕೆ ಆಗ್ರಹ

Date:

Advertisements

ವಿಜಯಪುರದ ರಾಜಗುರು ಮೆಕ್ಕಜೋಳ ಸಂಸ್ಕರಣಾ ಘಟಕದಲ್ಲಿ ಸಂಭವಿಸಿದ ಅವಘಡದಲ್ಲಿ ಏಳು ಮಂದಿ ಕಾರ್ಮಿಕರು ಮೃತಪಟ್ಟಿದ್ದಾರೆ. ಸಂತ್ರಸ್ತರ ಕುಟುಂಬಗಳಿಗೆ ಹೆಚ್ಚಿನ ಪರಿಹಾರ ನೀಡಬೇಕು. ಗಾಯಾಳುಗಳಿಗೆ ಉತ್ತಮ ಚಿಕಿತ್ಸೆ ಕೊಡಿಸಬೇಕು ಎಂದು ವಿಜಯಪುರ ಜಿಲ್ಲಾ ಜಂಟಿ ಕಾರ್ಮಿಕ ಸಂಘಟನೆಗಳ ಸಮಿತಿ ಆಗ್ರಹಿಸಿದೆ.

ವಿಜಯಪುರ ಜಿಲ್ಲಾಧಿಕಾರಿಯನ್ನು ಭೇಟಿ ಮಾಡಿದ ಸಮಿತಿಯ ಕಾರ್ಯಕರ್ತರು ಹಕ್ಕೊತ್ತಾಯ ಪತ್ರ ಸಲ್ಲಿಸಿದ್ದಾರೆ. “ಜೀವ ಕಳೆದುಕೊಂಡ ಕಾರ್ಮಿಕರ ಕುಟುಂಬಕ್ಕೆ ಕಾರ್ಮಿಕ ಕಾಯ್ದೆಗಳ ಪ್ರಕಾರ, ಮಾನವೀಯ ದೃಷ್ಟಿಯಿಂದ ಕರ್ನಾಟಕ ಸರ್ಕಾರ ಹಾಗೂ ಜಿಲ್ಲಾಡಳಿತ ಹೆಚ್ಚಿನ ಪರಿಹಾರ ನೀಡಬೇಕು. ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು” ಎಂದು ಆಗ್ರಹಿಸಿದೆ.

“ಘಟನೆಯಲ್ಲಿ ಗಾಯಗೊಂಡ ಕಾರ್ಮಿಕರಿಗೂ ಉಚಿತ ಮತ್ತು ಸೂಕ್ತ ವೈದ್ಯಕೀಯ ಚಿಕಿತ್ಸೆ ನೀಡಬೇಕು. ಅವರ ಅರೆ ಅಂಗವೈಕಲ್ಯೆಕ್ಕೆ ಅನುಗುಣವಾಗಿ ಸೂಕ್ತ ಪರಿಹಾರ ನೀಡಬೇಕು. ಈ ಕುರಿತು ಜಿಲ್ಲೆಯ ಕಾರ್ಮಿಕ ಅಧಿಕಾರಿಗಳು, ಪಿಎಫ್ ಅಧಿಕಾರಿಗಳು, ಇಎಸ್ಇ ಅಧಿಕಾರಿಗಳ ಮೂಲಕ ಸೂಕ್ತ ಕ್ರಮ ಕೈಗೊಳ್ಳಬೇಕು” ಎಂದು ಒತ್ತಾಯಿಸಿದ್ದಾರೆ.

Advertisements

ಪ್ರತಿಭಟನಾಕಾರರ ಹಕ್ಕೊತ್ತಾಯಗಳು:

1) ಮರಣ ಹೊಂದಿದ ಕಾರ್ಮಿಕರ ಕುಟುಂಬಕ್ಕೆ ಪರಿಹಾರವನ್ನು ಒದಗಿಸಬೇಕು.
2) ಗಾಯಾಳುಗಳಾದ ಕಾರ್ಮಿಕರಿಗೆ ಉತ್ತಮ ಉಚಿತವಾಗಿ ವೈದ್ಯಕೀಯ ಚಿಕಿತ್ಸೆಯನ್ನು ಒದಗಿಸಬೇಕು.
3) ಗಾಯಾಳುಗಳಾದ ಕಾರ್ಮಿಕರು ಪೂರ್ಣ ಗುಣಮುಖರಾಗಿ ಮರಳಿ ಉದ್ಯೋಗಕ್ಕೆ ತಿರುಗುವವರೆಗೂ ವೇತನ ನೀಡಬೇಕು.
4) ಕೈಗಾರಿಕೆಯಲ್ಲಿ ಕೆಲಸ ನಿರ್ವಹಿಸುತ್ತಿರುವ ಎಲ್ಲಾ ಕಾರ್ಮಿಕರಿಗೆ ಪಿಎಫ್ ಮತ್ತು ಇಎಸ್ಐ ಸೌಕರ್ಯಗಳನ್ನು ಕಡ್ಡಾಯಗೊಳಿಸಬೇಕು.
5) ಕೈಗಾರಿಕಾ ಕಟ್ಟಡ ನಿರ್ಮಾಣದಲ್ಲಿ ಗುಣಮಟ್ಟ ಕಾಪಾಡಬೇಕು.
6) ಎಲ್ಲಾ ಕೈಗಾರಿಕೆಗಳಲ್ಲಿ ಸುರಕ್ಷತಾ ಸಾಮಗ್ರಿಗಳನ್ನು ವ್ಯವಸ್ಥೆ ಮಾಡಿ, ಎಲ್ಲಾ ಕೈಗಾರಿಕೆಗಳಲ್ಲಿ ಕೆಲಸ ನಿರ್ವಹಿಸುತ್ತಿರುವ ಕಾರ್ಮಿಕರಿಗೆ ಶಾಸನಬದ್ಧ ಸೌಕರ್ಯಗಳಾದ ಪಿಎಫ್, ಇಎಸ್ಐ ನೀಡಿದ ಕುರಿತು ಮೇಲಿಂದ ಮೇಲೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಬೇಕು.
7) ಕೈಗಾರಿಕಾ ಕಾರ್ಮಿಕ ಕಾಯ್ದೆಗಳನ್ನು ಉಲ್ಲಂಘನೆ ಮಾಡಿದ ಮಾಲೀಕರ ಮೇಲೆ ಕ್ರಮ ಕೈಗೊಳ್ಳಬೇಕು.
8) ವಲಸೆ ಕಾರ್ಮಿಕರಿಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ವಿಶೇಷ ನೀತಿಗಳನ್ನು ಸೌಲಭ್ಯಗಳನ್ನು ರೂಪಿಸಬೇಕು.

ನಿಯೋಗದಲ್ಲಿ ಎಐಯುಟಿಯುಸಿ ಜಿಲ್ಲಾ ಅಧ್ಯಕ್ಷ ಮಲ್ಲಿಕಾರ್ಜುನ್ ಎಚ್‌ಟಿ, ಪ್ರಗತಿಪರ ಸಂಘಟನೆ ಮುಖಾಂಡಾರದ ಸಿದ್ದಲಿಂಗ ಬಾಗೇವಾಡಿ, ಸಿ.ಎ ಗಂಟೆಪ್ಪ ಗೋಳು ಸಂಚಾಲಕರು ಎಐಟಿಯುಸಿ, ಸಿಐಟಿಯು ನ ಜಿಲ್ಲಾ ಕಾರ್ಯದರ್ಶಿ ಲಕ್ಷ್ಮಣ್ ಹಂದ್ರಾಳ, ಆರ್ ಆರ್ ನದಾಫ ರಾಜ್ಯ ಕಾರ್ಯದರ್ಶಿ ಕೆಎಸ್ಆರ್ಟಿಸಿ, ಪ್ರಗತಿಪರ ಸಂಘಟನೆಯ ಮುಖಂಡರಾದ ಅಕ್ರಮ್ ಮಾಶಾಳಕರ ಇತರರು ಉಪಸ್ಥಿತರಿದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಮತ್ತೆ ಸದ್ದು ಮಾಡುತ್ತಿದೆ ವಾಹನಗಳ ಕರ್ಕಶ ಸೈಲೆಂಸರ್ ; ಕ್ರಮ ಕೈಗೊಳ್ಳುವರೆ ಟ್ರಾಫಿಕ್ ಪೊಲೀಸ್?

ಶಿವಮೊಗ್ಗ ನಗರದಲ್ಲಿ ಕೆಲವು ತಿಂಗಳು ಹಿಂದೆ ಸೈಲೆಂಟ್ ಆಗಿದ್ದ ಸೈಲೆಂಸರ್ ಕರ್ಕಶ...

ಕೋಲಾರ | ಎಫ್ಆರ್‌ಎಸ್ ನಿಲ್ಲಿಸುವಂತೆ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

ಅಂಗನವಾಡಿ ಕಾರ್ಯಕರ್ತೆಯರ ಮುಖಚರ್ಯೆ ಗುರುತಿಸುವ ಕ್ರಮಕ್ಕೆ (ಎಫ್ಆರ್‌ಎಸ್) ತಡೆ ಹಾಗೂ ಐಸಿಡಿಎಸ್...

ಬೀದರ್‌ | ಬಸವಲಿಂಗ ಪಟ್ಟದ್ದೇವರ ಅಮೃತ ಮಹೋತ್ಸವ : ಎರಡು ದಿನ ರಾಷ್ಟ್ರೀಯ ವಿಚಾರ ಸಂಕಿರಣ

ಭಾಲ್ಕಿ ಹಿರೇಮಠ ಸಂಸ್ಥಾನದ ನಾಡೋಜ ಡಾ.ಬಸವಲಿಂಗ ಪಟ್ಟದ್ದೇವರ ಅಮೃತ ಮಹೋತ್ಸವ ...

ಶಿರಸಿ | NWKRTC ವತಿಯಿಂದ ಅಪ್ರೆಂಟಿಸ್ ಹುದ್ದೆಗಳಿಗೆ WALK-IN-INTERVIEW

ಕರ್ನಾಟಕ ರಾಜ್ಯ ವಾಯುವ್ಯ ಸಾರಿಗೆ ಸಂಸ್ಥೆ, ಶಿರಸಿ ವಿಭಾಗದಲ್ಲಿ ವಿವಿಧ ಅಪ್ರೆಂಟಿಸ್...

Download Eedina App Android / iOS

X