ಸಚಿವ ಮಧು ಬಂಗಾರಪ್ಪರಿಂದ ಕೊಲೆ ಬೆದರಿಕೆ: ಪ್ರಣವಾನಂದ ಸ್ವಾಮೀಜಿ ಗಂಭೀರ ಆರೋಪ

Date:

  • ಮಧು ಬಂಗಾರಪ್ಪ ಬೆಂಬಲಿಗರು ಕರೆ ‌ಮಾಡಿ ಬೆದರಿಕೆ ಹಾಕುತ್ತಿದ್ದಾರೆಂದು ಆರೋಪ
  • ಪೊಲೀಸ್ ‌ಕಮಿಷನರ್ ಭೇಟಿ ಮಾಡಿ, ದೂರು ನೀಡುವೆ ಎಂದ ಸ್ವಾಮೀಜಿ

ಈಡಿಗ ಸಮುದಾಯದ ಪ್ರಣವಾನಂದ ಸ್ವಾಮೀಜಿ ಅವರು ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರಿಂದ ಕೊಲೆ ಬೆದರಿಕೆ ಇದೆ ಎಂದು ಗಂಭೀರ ಆರೋಪ ಮಾಡಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಸ್ವಾಮೀಜಿ, “ಮಧು ಬಂಗಾರಪ್ಪ ಬೆಂಬಲಿಗರು ಕರೆ ‌ಮಾಡಿ ಬೆದರಿಕೆ ಹಾಕುತ್ತಿದ್ದಾರೆ. ನನಗೆ ಜೀವ ಬೆದರಿಕೆ ಇದೆ. ಇವತ್ತು ಪೊಲೀಸ್ ‌ಕಮಿಷನರ್ ಭೇಟಿ ಮಾಡಿ, ಮಧು ಬಂಗಾರಪ್ಪ ವಿರುದ್ಧ ದೂರು ನೀಡುವೆ” ಎಂದಿದ್ದಾರೆ.

“ಹರಿಪ್ರಸಾದ್ ಅವರು ಹಿಂದುಳಿದ ವರ್ಗದವರು. ಅವರಿಗೆ ಸ್ಥಾನಮಾನ ಕೇಳುವುದರಲ್ಲಿ ಏನು ತಪ್ಪಿದೆ? ಬೇರೆ ಸಮುದಾಯದವರು ಹೋರಾಟ ‌ಮಾಡಿಲ್ವಾ? ಈಡಿಗ ಸಮುದಾಯಕ್ಕೆ ಮಧು ಬಂಗಾರಪ್ಪ ಕೊಡುಗೆ ಏನು?” ಎಂದು ಪ್ರಶ್ನಿಸಿದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

“ಈಡಿಗ ಸಮುದಾಯವನ್ನು ಸರ್ಕಾರವೇ ಒಡೆಯುತ್ತಿದೆ. ಸ್ವಾಮೀಜಿಗಳ ವಿರುದ್ಧ ಎತ್ತಿ ಕಟ್ಟುವ ಕೆಲಸ ಆಗುತ್ತಿದೆ. ನಾರಾಯಣ ಗುರು ರಥ ಬಂದಾಗ ಒಂದೇ ಒಂದು ಹಾರವನ್ನು ಮಧು ಬಂಗಾರಪ್ಪ ಹಾಕಿದರಾ. ನಾನು ಸಮುದಾಯದ ಭೂಮಿ ಕೊಳ್ಳೆ ಹೊಡೆದಿಲ್ಲ. ಸೈಟ್ ಮಾಡಿ ಮಾರಾಟ ಮಾಡಿಲ್ಲ. ಬಿ ಕೆ ಹರಿಪಸ್ರಾದ್ ಭೂಮಿ ಕಳ್ಳತನ ಮಾಡಿದವರಲ್ಲ” ಎಂದರು.

ಈ ಸುದ್ದಿ ಓದಿದ್ದೀರಾ? ಮೂವರು ಡಿಸಿಎಂ ನೇಮಕ ಬಗ್ಗೆ ಹೈಕಮಾಂಡ್‌ಗೆ ಪತ್ರ ಬರೆಯುತ್ತೇವೆ: ಸಚಿವ ಕೆ ಎನ್ ರಾಜಣ್ಣ

“ನಾನು ಸ್ವಾಮೀಜಿ ಅಲ್ಲ ಅಂತ ಹೇಳಲು ಅವರಿಗೆ ಹಕ್ಕು ಕೊಟ್ಟವರು ಯಾರು. ಸಮುದಾಯಕ್ಕೆ ಅನ್ಯಾಯವಾದರೆ ಅದಕ್ಕೆ ನೀವೇ ಹೊಣೆ. ನಿಮ್ಮ ಹಿನ್ನೆಲೆ ಏನು ಅಂತ ನಿಮಗೆ ಗೊತ್ತಿದೆ. ಸಮುದಾಯಕ್ಕೆ ನಿಮ್ಮ ಸಾಧನೆ ಏನು? ಈಗ ಜೆಡಿಎಸ್​ನಿಂದ ಕಾಂಗ್ರೆಸ್ಸಿಗೆ ಬಂದಿದ್ದೀರಾ. ಮುಂದೆ ಯಾವ ಪಕ್ಷಕ್ಕೆ ಹೋಗುತ್ತೀರಾ ಅಂತ ಗೊತ್ತಿಲ್ಲ” ಎಂದು ಕಿಡಿಕಾರಿದರು.

“ಸಿಎಂ ಸಿದ್ದರಾಮಯ್ಯನವರು ಮಧು ಬಂಗಾರಪ್ಪ ಮಾತಿಗೆ ಕಡಿವಾಣ ಹಾಕಬೇಕು. ಸ್ಪೀಕರ್ ಭೇಟಿ ಮಾಡಿ ಮಧು ಬಂಗಾರಪ್ಪ ವಿರುದ್ಧ ದೂರು ಕೊಡುತ್ತೇವೆ. ಕಾನೂನು ಹೋರಾಟ ಕೂಡ ಮಾಡುತ್ತೇವೆ” ಎಂದು ಪ್ರಣವಾನಂದ ಸ್ವಾಮೀಜಿ ಎಚ್ಚರಿಸಿದರು.

ಯಾರಿಗೆ ಬೇಕಾದರೂ ದೂರು‌ ಕೊಡಲಿ: ಮಧು ಬಂಗಾರಪ್ಪ

ಪ್ರಣವಾನಂದ ಸ್ವಾಮೀಜಿ ಹೇಳಿಕೆ ವಿಚಾರವಾಗಿ ಶಿವಮೊಗ್ಗದಲ್ಲಿ ಸಚಿವ ಮಧು ಬಂಗಾರಪ್ಪ ಪ್ರತಿಕ್ರಿಯಿಸಿ, “ಪ್ರಣವಾನಂದಶ್ರೀ ಯಾಕೆ ಕಣ್ಣೀರು ಹಾಕಿದ್ದಾರೆ, ತಪ್ಪು ಮಾಡಿದ್ದಾರಾ? ಪ್ರಣವಾನಂದಶ್ರೀ ಇಂತಹ ಬುರುಡೆಗಳನ್ನ ಬಿಟ್ಟುಕೊಂಡೇ ಬಂದಿದ್ದಾರೆ. ಪ್ರಣವಾನಂದಶ್ರೀ ನಮ್ಮ ಸಮಾಜದವರೇ ಅಲ್ಲ. ಅವರೇನು ಈಡಿಗ ಸಮಾಜದವರಾ? ಅವರ ಹಿನ್ನೆಲೆ ಕೆದಕಿ ನಿಮಗೆ ಗೊತ್ತಾಗುತ್ತದೆ. ನನ್ನ ವಿರುದ್ಧ ಬೆಂಗಳೂರು ನಗರ ಪೊಲೀಸ್ ಕಮಿಷನರ್, ಸ್ಪೀಕರ್ ಹಾಗೂ ಮಲ್ಲಿಕಾರ್ಜುನ ಖರ್ಗೆ ಸೇರಿ ಯಾರಿಗೆ ಬೇಕಾದರೂ ದೂರು‌ ಕೊಡಲಿ” ಎಂದಿದ್ದಾರೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೈಸೂರು | ಬಿಸಿಲಿನ ತಾಪ ಹೆಚ್ಚಳ; ಮೃಗಾಲಯ ತಂಪಾಗಿಡಲು ವಿಶೇಷ ವ್ಯವಸ್ಥೆ

ಪ್ರಸ್ತುತ ವರ್ಷ ಮೈಸೂರು ನಗರದಲ್ಲಿ ತಾಪಮಾನ ಗಣನೀಯವಾಗಿ ಏರಿಕೆಯಾಗಿರುವುದರಿಂದ ಮೃಗಾಲಯದ ಪ್ರಾಣಿಗಳು...

ತುಮಕೂರು | ಹಾಲಪ್ಪ ಯಾರು? ಮುದ್ದಹನುಮೇಗೌಡರಿಗೆ ಟಿಕೆಟ್ ಸಿಗುವ ಸಾಧ್ಯತೆ ಇದೆ: ಸಚಿವ ರಾಜಣ್ಣ

ಮಾಜಿ ಸಂಸದ ಮುದ್ದಹನುಮೇಗೌಡ ಅವರು ಯಾವುದೇ ಷರತ್ತಿಲ್ಲದೆ ಪಕ್ಷಕ್ಕೆ ಮರು ಸೇರ್ಪಡೆಯಾಗಿದ್ದು,...

ಬೆಂಗಳೂರು | ಕನ್ನಡ ನಾಮಫಲಕ ಕಡ್ಡಾಯ; ತಪ್ಪಿದಲ್ಲಿ ‘ಕರ್ನಾಟಕ ಬಂದ್’: ವಾಟಾಳ್ ನಾಗರಾಜ್ ಎಚ್ಚರಿಕೆ

ಕನ್ನಡ ನಾಮಫಲಕ ಕಡ್ಡಾಯಕ್ಕೆ ಮೂರು ದಿನಗಳಷ್ಟೇ ಬಾಕಿ ಉಳಿದಿದ್ದು, ಗಡುವು ಮುಗಿಯುವುದರೊಳಗಾಗಿ...

ತುಮಕೂರು | ಲೋಕಸಭಾ ಚುನಾವಣೆಗೆ ಜೆಡಿಎಸ್‌ ಟಿಕೆಟ್‌ ಬೇಡಿಕೆಯಿಟ್ಟ ಕೆ.ಟಿ ಶಾಂತಕುಮಾರ್

ಕಳೆದ 2019ರಲ್ಲಿ ನಡೆದ ಲೋಕಸಭಾ ಚುನಾವಣೆಯಲ್ಲಿ ತುಮಕೂರು ಲೋಕಸಭಾ ಕ್ಷೇತ್ರದಿಂದ ಜೆಡಿಎಸ್...