ಕರ್ನಾಟಕ ಉಚ್ಚ ನ್ಯಾಯಾಲಯದ ಆರು ನ್ಯಾಯಮೂರ್ತಿಗಳಿಗೆ ಕೊಲೆ ಬೆದರಿಕೆ!

Date:

  • ಪಾಕಿಸ್ತಾನದ ಬ್ಯಾಂಕ್‌ ಖಾತೆಗೆ 50 ಲಕ್ಷ ರೂ. ಹಣಕ್ಕೆ ಬೇಡಿಕೆ
  • ಎಫ್‌ಐಆರ್‌ ದಾಖಲಾಗಿದ್ದು, ಪೊಲೀಸರು ತನಿಖೆ ಆರಂಭ

ಕರ್ನಾಟಕ ಉಚ್ಚ ನ್ಯಾಯಾಲಯದ (ಹೈಕೋರ್ಟ್‌) ಆರು ನ್ಯಾಯಮೂರ್ತಿಗಳಿಗೆ ಕೊಲೆ ಬೆದರಿಕೆಯೊಡ್ಡಿ, 50 ಲಕ್ಷ ರೂ.ಗೆ ಬೇಡಿಕೆ ಇಟ್ಟಿರುವ ಪ್ರಕರಣ ಬೆಳಕಿಗೆ ಬಂದಿದೆ.

ಹೈಕೋರ್ಟ್‌ನ ಸಾರ್ವಜನಿಕ ಸಂಪರ್ಕ ಅಧಿಕಾರಿ (ಪಿಆರ್‌ಒ) ಕೆ ಮುರಳೀಧರ್‌ ಅವರ ದೂರು ಆಧರಿಸಿ ಕೇಂದ್ರ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಜುಲೈ 12 ರಂದು ಹೈಕೋರ್ಟ್ ಪಿಆರ್‌ಒಗೆ ಕೊಲೆ ಬೆದರಿಕೆ ಸಂದೇಶ ಬಂದಿದ್ದು, ಜುಲೈ 14 ರಂದು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಕೆ ಮುರಳೀಧರ್‌ ಅವರ ಅಧಿಕೃತ ವಾಟ್ಸ್‌ಆಪ್‌ ಸಂಖ್ಯೆಗೆ ಸಂದೇಶವನ್ನು ಕಳುಹಿಸುವ ಮೂಲಕ ಅಪರಿಚಿತ ವ್ಯಕ್ತಿ ಕೊಲೆ ಬೆದರಿಕೆ ಹಾಕಿದ್ದಾನೆ. ಅದಲ್ಲದೇ ಪಾಕಿಸ್ತಾನದ ಅಲೈಡ್‌ ಬ್ಯಾಂಕ್‌ ಲಿಮಿಟೆಡ್‌ನಲ್ಲಿರುವ ಬ್ಯಾಂಕ್‌ ಖಾತೆಗೆ 50 ಲಕ್ಷ ರೂ. ಅನ್ನು ಜಮೆ ಮಾಡುವಂತೆ ವಾಟ್ಸ್‌ಆಪ್‌ಗೆ ಸಂದೇಶದಲ್ಲಿ ಬೇಡಿಕೆ ಇಟ್ಟಿದ್ದಾನೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ರಾಯಿಸ್ಟ್ ಬೊಮ್ಮಾಯಿ, ಬೊಂಬೆ ಬೊಮ್ಮಾಯಿ ಮತ್ತು ಬಿಜೆಪಿ

ದುಬೈ ಗ್ಯಾಂಗ್ ಮೂಲಕ ತಮ್ಮನ್ನು ಸೇರಿ ಆರು ಹೈಕೋರ್ಟ್‌ ನ್ಯಾಯಾಧೀಶರನ್ನು ಕೊಲ್ಲುವುದಾಗಿ ವಾಟ್ಸ್‌ಆಪ್‌ ಸಂದೇಶದಲ್ಲಿ ಬೆದರಿಕೆ ಹಾಕಲಾಗಿದೆ ಎಂದು ಮುರಳೀಧರ್‌ ಅವರು ಪೊಲೀಸರಿಗೆ ನೀಡಿದ ದೂರಿನಲ್ಲಿ ವಿವರಿಸಿದ್ದಾರೆ.

ಕರ್ನಾಟಕ ಹೈಕೋರ್ಟ್‌ನ ನ್ಯಾಯಮೂರ್ತಿಗಳಾದ ಮೊಹಮ್ಮದ್‌ ನವಾಜ್‌, ಎಚ್‌ಟಿ ನರೇಂದ್ರ ಪ್ರಸಾದ್‌, ಅಶೋಕ್‌ ಜಿ ನಿಜಗಣ್ಣವರ್‌, ಎಚ್‌ಪಿ ಸಂದೇಶ್‌, ಕೆ ನಟರಾಜನ್‌ ಹಾಗೂ ಬಿ ವೀರಪ್ಪ ಅವರ ಹೆಸರನ್ನು ಸಂದೇಶದಲ್ಲಿ ಉಲ್ಲೇಖಿಸಲಾಗಿದೆ.

50 ಲಕ್ಷ ರೂ. ಅನ್ನು ಪಾಕಿಸ್ತಾನದ ಬ್ಯಾಂಕ್‌ ಅಕೌಂಟ್‌ಗೆ ಹಾಕಿ ಎಂದು ಹೇಳಿರುವುದು ಕೊಲೆ ಬೆದರಿಕೆ ಹಿಂದೆ ಪಾಕಿಸ್ತಾನದ ಕೈವಾಡ ಇದೆಯಾ ಎಂಬ ಅನುಮಾನಕ್ಕೆ ಕಾರಣವಾಗಿದೆ. ಈ ಬಗ್ಗೆ ಎಫ್‌ಐಆರ್‌ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಗ್ನಿಪಥ್ ಯೋಜನೆಯಿಂದ ದೇಶದ ಯುವಕರಿಗೆ ಅನ್ಯಾಯ: ರಾಷ್ಟ್ರಪತಿಗೆ ಮಲ್ಲಿಕಾರ್ಜುನ ಖರ್ಗೆ ಪತ್ರ

ಅಗ್ನಿಪಥ್ ಯೋಜನೆಯಿಂದಾಗಿ ಸಶಸ್ತ್ರ ಪಡೆಗಳಲ್ಲಿ ನಿಯಮಿತ ಉದ್ಯೋಗವನ್ನು ಬಯಸುತ್ತಿರುವ ದೇಶದ ಯುವಕರಿಗೆ...

ತುಮಕೂರು | ಬೀಡಿ ಕಾರ್ಮಿಕರಿಗೆ ಪರ್ಯಾಯ ಪರಿಹಾರ ನೀಡದೆ ಮಾರಾಟ ನಿಷೇಧ ವಿಧೇಯಕ ಜಾರಿ; ಕಾರ್ಮಿಕರ ವಿರೋಧ

ರಾಜ್ಯದಲ್ಲಿರುವ ಸರಿಸುಮಾರು 6 ಲಕ್ಷದಿಂದ 7 ಲಕ್ಷ ಬೀಡಿ ಕಾರ್ಮಿಕರ ಬದುಕಿಗೆ...

ಸರ್ಕಾರಿ ಗೌರವದೊಂದಿಗೆ ನೆರವೇರಿದ ಶಾಸಕ ರಾಜಾ ವೆಂಕಟಪ್ಪ ನಾಯಕ ಅಂತಿಮ ಸಂಸ್ಕಾರ: ಸಿಎಂ ಭಾಗಿ

ನಿನ್ನೆ(ಫೆ.25) ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದ ಯಾದಗಿರಿ ಜಿಲ್ಲೆಯ ಸುರಪುರ ವಿಧಾನಸಭಾ...

ವಿಜಯಪುರ | ಸಂವಿಧಾನ, ಸಾಮಾಜಿಕ ನ್ಯಾಯ, ಸಹಬಾಳ್ವೆ ಸಮಾಲೋಚನೆ ಸಭೆ

ನಮ್ಮ ದೇಶ ಬಹುಸಂಸ್ಕೃತಿಗೆ ಪ್ರಖ್ಯಾತಿಯನ್ನು ಪಡಿದಿದೆ. ವಿವಿಧತೆಯಲ್ಲಿ ಏಕತೆಯನ್ನು ನಮ್ಮ ರಾಷ್ಟ್ರ...