ಸಾಲ ಬಾಧೆ ತಾಳಲಾರದೆ ವಿಷ ಸೇವಿಸಿ ರೈತ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹಾಸನ ಜಿಲ್ಲೆ ಅರಕಲಗೂಡು ತಾಲೂಕಿನ ಮುದಗನೂರು ಗ್ರಾಮದಲ್ಲಿ ನಡೆದಿದೆ.
ಅಣ್ಣಜಯ್ಯ (65) ಮೃತ ದುರ್ದೈವಿ. ಅಣ್ಣಜ್ಜಯ್ಯ ಬ್ಯಾಂಕ್ ಸಾಲ ಮತ್ತು ಕೈಸಾಲ ಸೇರಿ ₹10 ಲಕ್ಷಕ್ಕೂ ಹೆಚ್ಚು ಸಾಲ ಮಾಡಿಕೊಂಡಿದ್ದರು.
ಸಾಲ ಮರುಪಾವತಿಸುವಂತೆ ಅಣ್ಣಜ್ಜಯ್ಯಗೆ ಬ್ಯಾಂಕ್‌ನಿಂದ ನೋಟೀಸ್ ನೀಡಲಾಗಿತ್ತು. ಇದರಿಂದ ಹೆದರಿದ್ದ ರೈತ ಅಣ್ಣಜ್ಜಯ್ಯ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಅರಕಲಗೂಡಿನ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ. ಕೊಣನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.