ಮಂಗಳೂರು | ಡಿ.25: ಬಿಎಸ್‌ಡಬ್ಲ್ಯೂಟಿ ವರ್ಷದ ವ್ಯಕ್ತಿ ಪ್ರಶಸ್ತಿ ಪ್ರದಾನ, ವಿದ್ಯಾರ್ಥಿ ವೇತನ ವಿತರಣೆ ಕಾರ್ಯಕ್ರಮ

Date:

Advertisements

ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಭಾರತ್ ಸೋಶಿಯಲ್ ವೆಲ್ಫೇರ್ ಟ್ರಸ್ಟ್ (BSWT) ವತಿಯಿಂದ 2024ನೆ ಸಾಲಿನ “BSWT ವರ್ಷದ ವ್ಯಕ್ತಿ ಪ್ರಶಸ್ತಿ ಪ್ರದಾನ ಮತ್ತು ಅರ್ಹ ಬಡ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ವಿತರಣಾ ಸಮಾರಂಭ ಕಾರ್ಯಕ್ರಮವು ಡಿ.25ರಂದು ಮಂಗಳೂರಿನಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಟ್ರಸ್ಟ್‌ನ ಕಾರ್ಯದರ್ಶಿ ಆಕೀಫ್ ಇಂಜಿನಿಯರ್ ತಿಳಿಸಿದ್ದಾರೆ.

ಈ ಬಗ್ಗೆ ಪ್ರಕಟಣೆಯ ಮೂಲಕ ಮಾಹಿತಿ ನೀಡಿರುವ ಅವರು, ಡಿ.25ರಂದು ಅಪರಾಹ್ನ 3 ಗಂಟೆಗೆ ಹಂಪನಕಟ್ಟೆಯಲ್ಲಿರುವ ವಿಶ್ವವಿದ್ಯಾಲಯ ಕಾಲೇಜಿನ ರವೀಂದ್ರ ಕಲಾಭವನದಲ್ಲಿ ನಡೆಯಲಿದೆ.

ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಂಗಳೂರು ವಿಶ್ವವಿದ್ಯಾಲಯ ಕಾಲೇಜು ಹಂಪನಕಟ್ಟೆಯ ಪ್ರಾಂಶುಪಾಲರಾದ ಪ್ರೊ. ಗಣಪತಿ ಗೌಡ ಎಸ್, ಡಾ. ಪಿ ದಯಾನಂದ ಪೈ, ಪಿ.ಸತೀಶ್ ಪೈ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಜಯಕಾರ ಭಂಡಾರಿ, ಯೆನೆಪೋಯ ವಿಶ್ವವಿದ್ಯಾಲಯದಲ್ಲಿ ಡೈರೆಕ್ಟೊರೇಟ್ ಎಕ್ಸ್ಟೆನ್ಷನ್ ಆಂಡ್ ಔಟ್ ರೀಚ್ ಆಕ್ಟಿವಿಟಿ ಇದರ ಡೈರೆಕ್ಟರ್ ಆಗಿರುವ ಡಾ. ಅಶ್ವಿನಿ ಎಸ್ ಶೆಟ್ಟಿ, ಎ.ಜೆ ಆಸ್ಪತ್ರೆಯಲ್ಲಿ ಗೈನೋಕಾಲಜಿಸ್ಟ್ ವಿಭಾಗದಲ್ಲಿ ಅಸೋಸಿಯೇಟ್ ಪ್ರೊಫೆಸರ್ ಆಗಿರುವ ಡಾ. ವೀಣಾ ಕೆ.ಆರ್ ಭಾಗ್ವಾನ್, ಮಂಗಳ ಗಂಗೋತ್ರಿ ಇಲ್ಲಿನ ನಿವೃತ್ತ ಸೂಪರಿಂಟೆಂಡೆಂಟ್ ಹರೀಶ್ ಕುಮಾರ್ ಕುತ್ತಡ್ಕ, ಖದೀಜ ಚಾರಿಟೇಬಲ್ ಟ್ರಸ್ಟ್ ಇದರ ಅಧ್ಯಕ್ಷರಾದ ಅಶ್ರಫ್ ಎಂ.ಸಿ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದು ತಿಳಿಸಿದ್ದಾರೆ.

Advertisements

ಇದನ್ನು ಓದಿದ್ದೀರಾ? ದೇವಾಲಯಗಳ ಆಸ್ತಿ ರಕ್ಷಣೆಗೆ ಮಹತ್ವದ ಕ್ರಮ ವಹಿಸಿದ ರಾಜ್ಯ ಸರ್ಕಾರ: ಉಳಿಯಿತು 10,700 ಎಕರೆ ‘ದೇವರ ಸ್ವತ್ತು’

bswt
ರೂಪಾ ಬಲ್ಲಾಳ್ ಉಡುಪಿ

ಮಂಗಳೂರು ದಕ್ಷಿಣ ವಲಯದ ಕ್ಷೇತ್ರ ಶಿಕ್ಷಣಾಧಿಕಾರಿ ಎಚ್ ಆರ್ ಈಶ್ವರ್ (ಕೆ.ಎ.ಎಸ್) ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಲಿದ್ದು, ಭಾರತ್ ಸೋಶಿಯಲ್ ವೆಲ್ಫೇರ್ ಟ್ರಸ್ಟ್‌ನ ಚೇರ್‌ಮೆನ್ ಎನ್ ಅಮೀನ್ ಅಧ್ಯಕ್ಷತೆ ವಹಿಸಲಿದ್ದಾರೆ. ಚಿಲ್ಡ್ರನ್ಸ್ ವಿಥ್ ಡ್ರೀಮ್ಸ್ ಇದರ ಸ್ಥಾಪಕಿಯಾಗಿರುವ ರೂಪಾ ಬಲ್ಲಾಳ್ ಉಡುಪಿ ಅವರಿಗೆ ಈ ಸಂದರ್ಭದಲ್ಲಿ ‘ಬಿಎಸ್‌ಡಬ್ಲ್ಯೂಟಿ ವರ್ಷದ ವ್ಯಕ್ತಿ ಪ್ರಶಸ್ತಿ’ ಪ್ರದಾನ ಮಾಡಲಾಗುವುದು’ ಹಾಗೂ ಅರ್ಹ ಬಡ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನವನ್ನು ವಿತರಿಸಲಾಗುವುದು ಎಂದು ಭಾರತ್ ಸೋಷಿಯಲ್ ಆಂಡ್ ವೆಲ್ಫೇರ್ ಟ್ರಸ್ಟ್ ಇದರ ಕಾರ್ಯದರ್ಶಿ ಆಕೀಫ್ ಇಂಜಿನಿಯರ್ ತಿಳಿಸಿದ್ದಾರೆ.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾವೇರಿ | ಗಣೇಶ ಚತುರ್ಥಿ ಪ್ರಯುಕ್ತ 265 ಹೆಚ್ಚುವರಿ ಸಾರಿಗೆ ಸೌಲಭ್ಯ

ಚತುರ್ಥಿಯ ಪ್ರಯುಕ್ತ ಸಾರ್ವಜನಿಕರು ತಮ್ಮ ಸ್ವಂತ ಊರುಗಳಿಗೆ ತೆರಳಲು ಅನುಕೂಲವಾಗುವಂತೆ ವಾಯವ್ಯ...

ಗದಗ | ಆಗಸ್ಟ್ 25ಕ್ಕೆ ಲೋಕಾಯುಕ್ತ ಜನ ಸಂಪರ್ಕ ಸಭೆ

ಸಾರ್ವಜನಿಕ ಕುಂದು-ಕೊರತೆಗಳ ಅಹವಾಲು ಸ್ವೀಕರಿಸಲು ಆಗಸ್ಟ್ 25 ಸೋಮವಾರದಂದು  ಗದಗ ಶಿರಹಟ್ಟಿ...

ಬೀದರ್‌ | ಅತಿವೃಷ್ಟಿ : ತ್ವರಿತ ಬೆಳೆ ಹಾನಿ ಪರಿಹಾರಕ್ಕೆ ಕಿಸಾನ್‌ ಸಭಾ ಒತ್ತಾಯ

ಮೇ ತಿಂಗಳಿಂದ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಉದ್ದು, ಹೆಸರು, ತೊಗರಿ ಸೇರಿದಂತೆ ಹಲವು...

ಚಿಕ್ಕಬಳ್ಳಾಪುರ | ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಎಲ್ಲರೂ ಕೈಜೋಡಿಸಿ: ಹಿರಿಯ ನ್ಯಾ. ಶಿಲ್ಪಾ

ಜಾಗತೀಕರಣ ಯುಗದಲ್ಲಿ ನಮ್ಮ ಜಾಗೃತಿ ನಮಗೆ ಗುರುವಾಗಬೇಕು. ಪೋಷಕರು ಮಕ್ಕಳನ್ನು...

Download Eedina App Android / iOS

X