ಬೀದರ್ ಲೋಕಸಭಾ ಕ್ಷೇತ್ರದ ಎಲ್ಲ ತಾಲೂಕು ಬರಪಿಡಿತ ಎಂದು ಘೋಷಿಸಿ: ಕೇಂದ್ರ ಸಚಿವ ಖೂಬಾ

Date:

Advertisements

ಬೀದರ್ ಲೋಕಸಭಾ ಕ್ಷೇತ್ರದ ಎಲ್ಲ ತಾಲೂಕುಗಳನ್ನು ಬರಪಿಡಿತ ತಾಲುಕುಗಳೆಂದು ಘೊಷಣೆ ಮಾಡಬೇಕೆಂದು ಕೇಂದ್ರ
ನೂತನ ಹಾಗು ನವೀಕರಿಸಬಹುದಾದ ಇಂಧನ ಮೂಲ ಮತ್ತು ರಸಾಯನಿಕ ಹಾಗೂ ರಸಗೊಬ್ಬರ ಖಾತೆ ಸಹ ಸಚಿವ ಭಗವಂತ ಖೂಬಾ ರಾಜ್ಯ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.

“ಭಾಲ್ಕಿ, ಹುಲಸೂರ ಮತ್ತು ಆಳಂದ ತಾಲೂಕುಗಳನ್ನು ಮಾತ್ರ ಬರಪಿಡಿತ ಎಂದು ಘೋಷಿಸಿದರೆ ಸಾಲದು, ಉಳಿದ
ತಾಲುಕುಗಳಲ್ಲಿಯೂ ಸಹ ಮಳೆಯಾಗಿರುವುದಿಲ್ಲ, ಔರಾದ ಹಾಗೂ ಚಿಂಚೋಳಿಯಲ್ಲಂತೂ ಕುಡಿಯಲು ನೀರು ಸಹ ಸಿಗುತ್ತಿಲ್ಲಾ, ಒಟ್ಟಿನಲ್ಲಿ ಬೀದರ ಲೋಕಸಭಾ ಕ್ಷೇತ್ರದ ರೈತರು ಮಳೆಯಿಲ್ಲದೆ ಕಂಗಾಲಾಗಿದ್ದಾರೆ. ಆದರೆ ಜಿಲ್ಲೆಯಲ್ಲಿ ಶತ ಪ್ರತಿಷತಃ ಉಳಿಮೆಯಾಗಿದೆ, ರೈತರು ಉಳಿಮೆಗಾಗಿ ತನ್ನಲ್ಲಿದ್ದ ದುಡ್ಡನ್ನು ಖರ್ಚು ಮಾಡಿಕೊಂಡಿದ್ದಾರೆ” ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

“ರೈತರ ಬಳಿ ದುಡ್ಡಿಲ್ಲಾ, ಇದರ ಜೊತೆಗೆ ಪಿ.ಎಮ್.ಕಿಸಾನ್ ನಿಧಿಯಡಿ ರಾಜ್ಯ ಸರ್ಕಾರದಿಂದ ನೀಡಲಾಗುತ್ತಿದ್ದ 4 ಸಾವಿರ ರೂಪಾಯಿ ಪ್ರೋತ್ಸಾಹ ಧನ ಸಹ ಬಂದ ಮಾಡಲಾಗಿದೆ, ಇದರಿಂದ ರೈತರಿಗೆ ಗಾಯದ ಮೇಲೆ ಬರೆ ಎಳೆದಂತೆ ಆಗಿದೆ. ಕೂಡಲೇ ಪಿ.ಎಮ್. ಕಿಸಾನ್ ನಿಧಿಯಡಿ ನೀಡಲಾಗುತ್ತಿದ್ದ 4 ಸಾವಿರ ರೂ. ಪ್ರೊತ್ಸಾಹ ಧನವನ್ನು ರೈತರ ಖಾತೆಗೆ ಜಮೆ
ಮಾಡಬೇಕು” ಎಂದು ಒತ್ತಾಯಿಸಿದರು.

ಈ ಸುದ್ದಿ ಓದಿದ್ದೀರಾ ? ಔರಾದ್ ಸೀಮೆಯ ಕನ್ನಡ | ‘ಮಳಿ ಹೆಚ್ಚ್ ಬಿದ್ದುರ್ ಬಿ ಹೈರಾಣ್, ಕಮ್ಮಿ ಆದುರ್ ಬೀ ಕಠಿಣೇ…’

“ಬೀದರ ಲೋಕಸಭಾ ಕ್ಷೇತ್ರದ ಎಲ್ಲಾ ತಾಲೂಕುಗಳು ಬರಪಿಡಿತ ಎಂದು ಘೋಷಿಸಿ, ಪ್ರತಿ ಹೆಕ್ಟರಗೆ 50 ಸಾವಿರ ರೂಪಾಯಿ ಪರಿಹಾರ ಘೋಷಣೆ ಮಾಡಬೇಕು, ರೈತರ ಹಿತವನ್ನು ಕಾಪಾಡುವ ಕೆಲಸ ಮಾಡಬೇಕೆಂದು” ಸರ್ಕಾರಕ್ಕೆ ಕೇಂದ್ರ ಸಚಿವ ಭಗವಂತ ಖೂಬಾ ಆಗ್ರಹಿಸಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ಸರಕಾರ ದೇವದಾಸಿ ಮಹಿಳೆಯರ ಕುಟುಂಬ ಸದಸ್ಯರನ್ನು ಗಣತಿ ಪಟ್ಟಿಗೆ ಸೇರಿಸುವ ಕ್ರಮ ಸ್ವಾಗತ

"ಸರಕಾರ ಈಚೆಗೆ ದೌರ್ಜನ್ಯದ ದೇವದಾಸಿ ಪದ್ಧತಿಗೆ ಪರಿಣಾಮಕಾರಿ ಕ್ರಮ ಕೈಗೊಳ್ಳಲು ದೇವದಾಸಿ...

ಗದಗ | ತಹಸೀಲ್ದಾರ ಕಚೇರಿಗಳಲ್ಲಿ ಅಧಿಕಾರಿಗಳ ಬ್ರಹ್ಮಾಂಡ ಭ್ರಷ್ಟಾಚಾರ ಆರೋಪ

"ಜಿಲ್ಲೆಯ ಎಲ್ಲಾ ತಾಲೂಕ ತಹಶೀಲ್ದಾರ್ ಕಚೇರಿ ಹಾಗೂ ಹೋಬಳಿಗಳಲ್ಲಿ ವೃಧ್ಯಾಪ್ಯ ವೇತನ,...

ಜನಮನ ಗೆದ್ದ ತುಮಕೂರು ದಸರಾ ಉತ್ಸವ : ಡಾ. ಜಿ.ಪರಮೇಶ್ವರ

 ತುಮಕೂರು ದಸರಾ ಉತ್ಸವವು ನಾಡಿನಾದ್ಯಂತ ಜನರ ಮನಸ್ಸನ್ನು ಗೆಲ್ಲುವ ಮೂಲಕ ಐತಿಹಾಸಿಕ...

Download Eedina App Android / iOS

X