ನಂಜನಗೂಡು ತಾಲೂಕಿನ ನಂದಗುಂದಪುರ ಗ್ರಾಮದಲ್ಲಿ ನಿರ್ಮಾಣವಾಗಿರುವ ಬಾಬು ಜಗಜೀವನ್ ರಾಮ್ ಸಮುದಾಯ ಭವನವನ್ನು ಮಾಜಿ ಶಾಶಕ ಡಾ. ಯತೀಂದ್ರ ಸಿದ್ದರಾಮಯ್ಯ ಅವರು ಉದ್ಘಾಟಿಸಿದ್ದಾರೆ. ಗ್ರಾಮದಲ್ಲಿ ಸುಮಾರು 24 ಲಕ್ಷ ರೂ. ವೆಚ್ಚದಲ್ಲಿ ಸಮುದಾಯ ಭವನವನ್ನು ನಿರ್ಮಾಣ ಮಾಡಲಾಗಿದೆ.
ಸಮುದಾಯ ಭವನ ಉದ್ಘಾಟಿಸಿ ಮಾತನಾಡಿದ ಯತೀಂದ್ರ ಸಿದ್ದರಾಮಯ್ಯ, “ವರುಣ ಕ್ಷೇತ್ರದ ಬಹುತೇಕ ಗ್ರಾಮಗಳಲ್ಲಿ ಡಾ. ಬಿ ಆರ್ ಅಂಬೇಡ್ಕರ್ ಸಮುದಾಯ ಭವನ, ಕನಕ ಸಮುದಾಯ ಭವನ, ಬಸವಭವನ, ಬಾಬೂ ಜಗಜೀವನ್ ರಾಮ್ ಸಮುದಾಯ ಭವನಗಳನ್ನು ನಿರ್ಮಿಸಲಾಗುತ್ತಿದೆ. ಬಹುತೇಕ ಸಮುದಾಯ ಭವನಗಳು ಪೂರ್ಣಗೊಂಡಿವೆ” ಎಂದು ತಿಳಿಸಿದರು.
“ಇನ್ನು ಹಲವು ಸಮುದಾಯ ಭವನಗಳ ನಿರ್ಮಾಣಕ್ಕೆ ಬೇಡಿಕೆ ಇದೆ. ಗ್ರಾಮಸ್ಥರ ಬೇಡಿಕೆಗೆ ಅನುಗುಣವಾಗಿ ಸಮುದಾಯ ಭವನಗಳನ್ನು ನಿರ್ಮಿಸಿಕೊಡಲು ಬದ್ಧರಾಗಿದ್ದೇವೆ. ಊ ಭವನಗಳನ್ನು ಸಾರ್ವಜನಿಕರು ಬಳಸಿಕೊಳ್ಳವು ಮೂಲಕ ಅಂಬೇಡ್ಕರ್, ಜಗಜೀವನ್ ರಾಮ್, ಬಸವಣ್ಣ, ಕನಕದಾಸರ ಆದರ್ಶಗಳನ್ನು ಅರಿತುಕೊಳ್ಳಬೇಕು” ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತಿ ಮಾಜಿ ಅಧ್ಯಕ್ಷ ಎಸ್ ಸಿ ಬಸವರಾಜು ತಗಡೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಂಗಸ್ವಾಮಿ ಗ್ರಾಮ ಪಂಚಾಯತಿ ಅಧ್ಯಕ್ಷ ನಂದೀಶ್ ಉಪಾಧ್ಯಕ್ಷ ರೇಣುಕಮ್ಮ ಗುತ್ತಿಗೆದಾರ ನಗರ್ಲೆ ನಾರಾಯಣ್ ನಾಯ್ಕ ಮುಖಂಡರಾದ ಶಿವಪ್ರಸಾದ್ ಲಲಿತಾದ್ರಿಪುರ ಬಸವರಾಜು ಸಿದ್ದರಾಮಯ್ಯ ಹುಂಡಿ ಮಂಜುನಾಥ್ ಚಿನ್ನಂಬಳ್ಳಿ ಸಿ ಆರ್ ಮಹದೇವ್ ಸುತ್ತೂರ್ ಸೋಮಣ್ಣ ಕುಮಾರ ಜಗದೀಶ ಮಲೆ ರಾಜನಹುಂಡಿ ಮಹದೇವು ವಿವಿಧ ಇಲಾಖೆಯ ಅಧಿಕಾರಿಗಳು ಸೇರಿದಂತೆ ಗ್ರಾಮ ಪಂಚಾಯತಿ ಸದಸ್ಯರು ಮುಖಂಡರುಗಳು ಈ ಸಂದರ್ಭದಲ್ಲಿ ಹಾಜರಿದ್ದರು.