ಸೇಡಂ | ಪ್ರವಾದಿ ಮೊಹಮ್ಮದ್ ಅವಹೇಳನ : ನರಸಿಂಹಾನಂದ್ ವಿರುದ್ಧ ಕ್ರಮಕ್ಕೆ ಆಗ್ರಹ

Date:

Advertisements

ಪ್ರವಾದಿ ಮೊಹಮ್ಮದ್ ಪೈಗಂಬರ್‌ ಅವರನ್ನು ಅವಮಾನಿಸಿದ ಯತಿ ನರಸಿಂಹಾನಂದ ಸರಸ್ವತಿ ಸ್ವಾಮೀಜಿಗಳ ವಿರುದ್ಧ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ಗಾಜಿಯಾಬಾದ್ ದೇವಸ್ಥಾನದ ದಾಸ್ನಾ ಅವರನ್ನು ಕೂಡಲೇ ಬಂಧಿಸಬೇಕೆಂದು ಆಗ್ರಹಿಸಿ ಸೇಡಂ ಪಟ್ಟಣದಲ್ಲಿ ಪ್ರತಿಭಟನೆ ನಡೆಸಲಾಯಿತು.

ಹಜರತ್ ಟಿಪ್ಪು ಸುಲ್ತಾನ್ ಯುವ ಚಾರಿಟೇಬಲ್, ವೆಲ್ಪರ್ ಟ್ರಸ್ಟ್ ಸಹಯೋಗದಲ್ಲಿ ಸೇಡಂ ಪಟ್ಟಣದ ಮುಖ್ಯ ರಸ್ತೆಯಿಂದ ಪ್ರಾರಂಭಗೊಂಡು ಕಿರಣಾ ಬಜಾರ್ ಮಾರ್ಗವಾಗಿ ತಹಸೀಲ್ದಾರ್ ಕಛೇರಿವರೆಗೆ ಪ್ರತಿಭಟನೆ ನಡೆಸಿದರು. ರಾಷ್ಟ್ರಪತಿಗಳಿಗೆ ಬರೆದ ಹಕ್ಕೊತ್ತಾಯ ಪತ್ರವನ್ನು ಉಪ ವಿಭಾಗಾಧಿಕಾರಿ ಅವರಿಗೆ ಸಲ್ಲಿಸಿದರು.

ಸ್ವಾಮಿ ನರಸಿಂಹಾನಂದ ಸರಸ್ವತಿ ಅವರು ಪ್ರವಾದಿ ಮೊಹಮ್ಮದ್ ಪೈಗಂಬರ್ ಅವರನ್ನು ಅವಮಾನಿಸಿದ್ದಾರೆ. ಇದರಿಂದ ಮುಸ್ಲಿಂ ಸಮುದಾಯದ ಧಾರ್ಮಿಕ ಭಾವನೆಗಳಿಗೆ ತೀವ್ರ ನೋವುಂಟು ಮಾಡಿದೆ. ಶಾಂತಿಪ್ರಿಯ ಭಾರತ ದೇಶದಲ್ಲಿ ಇಂತಹ ದ್ವೇಷ ಹುಟ್ಟಿಸುವ ಹೇಳಿಕೆ ನೀಡುವುದು ಖಂಡನೀಯವಾಗಿದೆʼ ಎಂದು ಆರೋಪಿಸಿದರು.

Advertisements

“ದೇಶದ ಸೌಹಾರ್ದತೆಗೆ ಧಕ್ಕೆ ತಂದು ದ್ವೇಷ ಹೇಳಿಕೆ ನೀಡಿದ ಯತಿ ಸ್ವಾಮಿ ನರಸಿಂಹನಂದ ಸರಸ್ವತಿ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಬೇಕುʼ ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.

ಈ ಸುದ್ದಿ ಓದಿದ್ದೀರಾ? ಖ್ಯಾತ ಉದ್ಯಮಿ ರತನ್‌ ಟಾಟಾ ನಿಧನ: ಗಣ್ಯರು, ಅಭಿಮಾನಿಗಳಿಂದ ಕಂಬನಿ

ಪ್ರತಿಭಟನೆಯಲ್ಲಿ ಶಾಹಿದ್ ಹಜರತ್ ಟಿಪ್ಪು ಸುಲ್ತಾನ್ ಯುವ ಚಾರಿಟೇಬಲ್ ಟ್ರಸ್ಟ್ ವೆಲ್ಫರ್ ಟ್ರಸ್ಟ್ ಹಾಗೂ ಮುಸ್ಲಿಂ ಸಮುದಾಯದ ಮುಖಂಡರು ಕಾರ್ಯಕರ್ತರು ಸೇರಿದಂತೆ ಮುಸ್ಲಿಂ ಸಮುದಾಯದ ಮುಖಂಡರು ಪಾಲ್ಗೊಂಡಿದ್ದರು.

ವರದಿ: ಸುನೀಲ್ ರಾಣಿವಾಲ್

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X