ಖರ್ಗೆ ವಿರುದ್ಧ ಅಪಮಾನಕಾರಿ ಹೇಳಿಕೆ ಪ್ರಕರಣ; ಚಕ್ರವರ್ತಿ ಸೂಲಿಬೆಲೆಗೆ ಜಾಮೀನು

Date:

ಕಾಂಗ್ರೆಸ್‌ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ನಿಂದಿಸಿದ ಪ್ರಕರಣದಲ್ಲಿ ಹಿಂದುತ್ವವಾದಿ ಕೋಮು ಭಾಷಣಕಾರ ಚಕ್ರವರ್ತಿ ಸೂಲಿಬೆಲೆಗೆ ನಿರೀಕ್ಷಣಾ ಜಾಮೀನು ದೊರೆತಿದೆ. ರಾಯಚೂರಿನ 1ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯವು ಸೂಲಿಬೆಲೆಗೆ ನಿರೀಕ್ಷಣಾ ಜಾಮೀನು ನೀಡಿದೆ.

- Advertisement -

ಇದೇ ವರ್ಷದ ಜನವರಿ 18ರಂದು ರಾಯಚೂರಿನ ಸಿರವಾರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ್ದ ಸೂಲಿಬೆಲೆ, ಖರ್ಗೆ ಅವರ ಕುರಿತು ಅಪಮಾನಕರ ಹೇಳಿಕೆ ನೀಡಿದ್ದರು. ಅವರ ವಿರುದ್ಧ ಜಾತಿ ನಿಂದನೆ ಆರೋಪದ ಮೇಲೆ ಸಿರವಾರ ಪೊಲೀಸ್ ಠಾಣೆಯಲ್ಲಿ ಕಾಂಗ್ರೆಸ್‌ ಮುಖಂಡರು ದೂರು ದಾಖಲಿಸಿದ್ದರು. ದೂರಿನ ಆಧಾರದ ಮೇಲೆ ಪೊಲೀಸರು ಎಫ್‌ಐಆರ್ ದಾಖಲಿಸಿಕೊಂಡಿದ್ದರು. ಈ ಬೆನ್ನಲ್ಲೇ, ತಮ್ಮನ್ನು ಬಂಧಿಸಿದಂತೆ ನಿರೀಕ್ಷಣಾ ಜಾಮೀನು ಕೋರಿ, ನ್ಯಾಯಾಲಯಕ್ಕೆ ಸೂಲಿಬೆಲೆ ಅರ್ಜಿ ಸಲ್ಲಿಸಿದ್ದರು. ಅವರ ಅರ್ಜಿಯ ವಿಚಾರಣೆ ನಡೆಸಿರುವ ನ್ಯಾಯಾಲಯ, ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಕಾರ್ಯಕ್ರಮದಲ್ಲಿ ಮಾತನಾಡಿದ್ದ ಸೂಲಿಬೆಲೆ, “ಕಲಬುರಗಿಯಲ್ಲಿ ಖರ್ಗೆ ಸಾಹೇಬರ ಕಾಲದಲ್ಲಿ ಇಎಸ್‌ಐ ಆಸ್ಪತ್ರೆ ನಿರ್ಮಾಣ‌ ಮಾಡಲಾಗಿದೆ. ಆಸ್ಪತ್ರೆ ಮೇಲ್ಭಾಗವನ್ನು ಡ್ರೋನ್ ಕ್ಯಾಮರಾ ಮೂಲಕ ನೋಡಿದರೆ ಕಟ್ಟಡಗಳ ಆಕಾರದಲ್ಲಿ ‘ಮೊದಲ ಅಕ್ಷರ ಖ, ಎರಡನೇ ಅಕ್ಷರ ಗೆ, ಮೂರನೆಯದು ಅರ್ಕವತ್ತು’ ಕಾಣಿಸುತ್ತದೆ. ಆ ಕಟ್ಟಡ ಖರ್ಗೆ ಅಂತಾ ಇದೆ. ಕಟ್ಟಡ ಇರೋವರೆಗೆ ಅವರ ಹೆಸರು ಉಳಿಯಬೇಕೆಂದು ಹೀಗೆ ಮಾಡಲಾಗಿದೆ. ಆಸ್ಪತ್ರೆಯಲ್ಲಿ ಅವರ ಸ್ವಂತ ದುಡ್ಡಿಂದ, ಪಕ್ಷ ದುಡ್ಡಿಂದ ಕಟ್ಟಿಲ್ಲ. ಜನರ ತೆರಿಗೆ ದುಡ್ಡಲ್ಲಿ ತಮ್ಮ ಹೆಸರು ಶಾಶ್ವತಗೊಳಿಸುವಂತ ಅಯೋಗ್ಯರಿದ್ದಾರೆ” ಎಂದಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಜಿಲ್ಲಾ ಮಟ್ಟದ ಕಬಡ್ಡಿಯಲ್ಲಿ ಮೊರಾರ್ಜಿ ಶಾಲಾ ವಿದ್ಯಾರ್ಥಿಗಳ ಗೆಲುವು

ಜಿಲ್ಲಾ ಕ್ರೀಡಾಂಗಣದಲ್ಲಿ ಇತ್ತೀಚೆಗೆ ನಡೆದ ಪ್ರೌಢಶಾಲಾ ವಿಭಾಗದ ಬಾಲಕರ ಜಿಲ್ಲಾ ಮಟ್ಟದ...

ಉಡುಪಿ | ತೈಲದ ಮೇಲಿನ ಭಾರತದ ಅವಲಂಬನೆ ಕಡಿಮೆ ಮಾಡಲು ಹಸಿರು ಹೈಡ್ರೋಜನ್ ಸಹಕಾರಿ

ಪರ್ಯಾಯ ಇಂಧನವಾಗಿ ಹಸಿರು ಹೈಡ್ರೋಜನ್ ಭಾರತಕ್ಕೆ ಅಪಾರ ಸಾಧ್ಯತೆಗಳನ್ನು ಹೊಂದಿದ್ದು, ತೈಲದ...

ಎಂಆರ್‌ಪಿಎಲ್ ಸ್ಫೋಟ: ಮೃತ ಮನೀಶ್ ಕುಟುಂಬಕ್ಕೆ ಸಾಂತ್ವನ, ಹಾನಿಗೊಳಗಾದ ಚರ್ಚ್‌ಗೆ ಪ್ರಶಾಂತ್ ಜತ್ತನ್ನ ಭೇಟಿ

ಎಂಆರ್‌ಪಿಎಲ್‌ನ ಕೋಕರ್ ಹೈಡ್ರೋಟ್ರೀಟರ್ ಯುನಿಟ್‌ (ಸಿಎಚ್‌ಟಿಯು)ನಲ್ಲಿ ಸಂಭವಿಸಿದ ಸ್ಫೋಟದಲ್ಲಿ ಮೃತಪಟ್ಟ ಮುಲ್ಕಿ...

ರಾಯಚೂರು | ಪ್ರವಾಸಕ್ಕೆ ತೆರಳಿದ್ದ ಕಾರು ಅಪಘಾತ: ಇಬ್ಬರು ಸಾವು, ಇಬ್ಬರಿಗೆ ಗಂಭೀರ ಗಾಯ

ಪ್ರವಾಸಕ್ಕೆ ತೆರಳಿದ್ದ ಕಾರು ಅಪಘಾತಕ್ಕೀಡಾಗಿ ನಾಲ್ವರ ಪೈಕಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು,...