ಉತ್ತರ ಕನ್ನಡಕ್ಕೆ ‘ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ’ಗಾಗಿ ಬೇಡಿಕೆ; ರಕ್ತದಲ್ಲಿ ಪತ್ರ ಅಭಿಯಾನ

Date:

ಉತ್ತರ ಕನ್ನಡ ಜಿಲ್ಲೆಯಲ್ಲಿ ಎಲ್ಲ ರೀತಿಯ ಅಗತ್ಯ ವೈದ್ಯಕೀಯ ಸೌಲಭ್ಯ ಹೊಂದಿರುವ ಸುಸಜ್ಜಿತ ಆಸ್ಪತ್ರೆಯಿಲ್ಲ. ಜಿಲ್ಲೆಗೆ ಸರ್ಕಾರಿ ‘ಮಲ್ಟಿಸ್ಪಷಾಲಿಟಿ ಆಸ್ಪತ್ರೆ’ ಬೇಕು. ಆಸ್ಪತ್ರೆಗೆ ನಿರ್ಮಾಣಕ್ಕೆ ಸರ್ಕಾರ ಕ್ರಮ ಕೈಗೊಳ್ಳಬೇಕೆಂದು ಜಿಲ್ಲೆಯ ಜನರು ಹಲವು ವರ್ಷಗಳಿಂದ ಬೇಡಿಕೆ ಇಟ್ಟಿದ್ದಾರೆ. ಆದರೆ, ಅವರ ಬೇಡಿಕೆ ಹಾಗೆಯೇ ಉಳಿದುಹೋಗಿದೆ. ಇದೀಗ, ತಮ್ಮ ಬೇಡಿಕೆಯ ಈಡೇರಿಕೆಗಾಗಿ ಆಗ್ರಹಿಸಿ ಜಿಲ್ಲೆಯ ಜನರು ಮುಖ್ಯಮಂತ್ರಿಗಳಿಗೆ ‘ರಕ್ತದಲ್ಲಿ ಪತ್ರ’ ಅಭಿಯಾನ ಆರಂಭಿಸಿದ್ದಾರೆ.

- Advertisement -

ಭಟ್ಕಳ ಮೂಲದ ಮಸ್ತಾಪ್ಪ ನಾಯ್ಕ್ ಬೆಳಸೆ ನೇತೃತ್ವದ ತಂಡವು ರಕ್ತದಲ್ಲಿ ಪತ್ರಗಳನ್ನು ಬರೆದು ಮುಖ್ಯಮಂತ್ರಿಗಳಿಗೆ ಕಳಿಸುವ ಅಭಿಯಾನ ಆರಂಭಿಸಿದೆ. “ಜಿಲ್ಲೆಯು ಭೌಗೋಳಿಕವಾಗಿ ಹೆಚ್ಚು ವಿಸ್ತೀರ್ಣ ಹೊಂದಿದೆ. ಜಿಲ್ಲೆಯ ಜನರು ಸುಸಜ್ಜಿತ ವೈದ್ಯಕೀಯ ಸೇವೆ ಸಿಗದ ತತ್ತರಿಸಿದ್ದಾರೆ. ಉನ್ನತ ಚಿಕಿತ್ಸೆಗಾಗಿ ನೂರಾರು ಕಿ.ಮೀ. ಪ್ರಯಾಣಿಸಬೇಕಾದ ದುಸ್ಥಿತಿ ಇದೆ. ಪರಿಣಾಮ, ಹಲವರು ಜೀವ ಕಳೆದುಕೊಂಡಿದ್ದಾರೆ. ಜಿಲ್ಲೆಗೆ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಗೆ ಅಗತ್ಯಗತ್ಯ” ಎಂದು ಒತ್ತಾಯಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

“ಜಿಲ್ಲೆಗೆ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ನೀಡಿ, ಇಲ್ಲವೇ ದಯಾಮರಣ ಕೊಡಿ ಎಂಬ ಘೋಷಣೆಯೊಂದಿಗೆ ಪತ್ರ ಬರೆಯುತ್ತಿದ್ದೇವೆ. ಜಿಲ್ಲೆಯ ಸುಮಾರು 7 ಲಕ್ಷ ಜನರು ಆಸ್ಪತ್ರೆಗಾಗಿ ಮುಖ್ಯಮಂತ್ರಿಗಳಿಗೆ ಪತ್ರ ಬರೆಯಲಿದ್ದಾರೆ. ಜಿಲ್ಲೆಯ ಪ್ರತಿ ಗ್ರಾಮ ಪಂಚಾಯತಿ ವ್ಯಾಪ್ತಿಗಳಲ್ಲೂ ಪತ್ರ ಅಭಿಯಾನ ಆರಂಭವಾಗಿದೆ” ಎಂದು ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಾರ್ಮಿಕರು ಹಕ್ಕು ಮತ್ತು ಸೌಲಭ್ಯಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ. ಶಾಹಿದ್ ತೆಕ್ಕಿಲ್

ಕಾರ್ಮಿಕರ ಹಿತಾಸಕ್ತಿಯನ್ನು ಕಾಪಾಡುವುದರೊಂದಿಗೆ ಸರ್ಕಾರದ ಕಲ್ಯಾಣ ಕಾರ್ಯಕ್ರಮಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ...

ಬಾಗೇಪಲ್ಲಿಯಲ್ಲಿ ರಸ್ತೆ ಅಪಘಾತ:ರೈತ ನಂಜಪ್ಪ ಸಾವು

ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದು ದ್ವಿಚಕ್ರ ವಾಹನದಲ್ಲಿ ಹೊಲಕ್ಕೆ ತೆರಳುತ್ತಿದ್ದ ನಡಂಪಲ್ಲಿ...

ಮಂಗಳೂರು | ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣ: ಆರೋಪಿಗಳ ಜಾಮೀನು ರದ್ದುಪಡಿಸಿದ ಸುಪ್ರೀಂ ಕೋರ್ಟ್

ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣದಲ್ಲಿ ಆರೋಪಿಗಳಿಗೆ ಇತ್ತೀಚೆಗೆ ನ್ಯಾಯಾಲಯ ಜಾಮೀನು ನೀಡಿತ್ತು....

ಕೋಲಾರ | ಚೈನಾ ಶಾಂಘೈನಲ್ಲಿ ಕನ್ನಡದ ಮೊದಲ ಜಾನಪದ ಕಾರ್ಯಕ್ರಮ: ಗೋ.ನಾ. ಸ್ವಾಮಿ ಭಾಗಿ

ಚೈನಾ ದೇಶದ ಶಾಂಘೈನಲ್ಲಿ ಕನ್ನಡಿಗರ ಸಂಘದ ವತಿಯಿಂದ ಆಯೋಜಿಸಿದ್ದ ಕನ್ನಡದ ಮೊದಲ...