ಬೀದರ್‌ | ʼಬ್ರಿಮ್ಸ್‌ʼನಲ್ಲಿ ಮೂತ್ರಶಾಸ್ತ್ರಜ್ಞ ವೈದ್ಯರ ನೇಮಿಸಲು ಆಗ್ರಹ

Date:

ನೂರಾರು ಕೋಟಿ ವೆಚ್ಚದಲ್ಲಿ ನಿರ್ಮಾಣವಾದ ಬೀದರ್‌ ನಗರದ ವೈದ್ಯಕೀಯ ವಿಜ್ಞಾನ ಸಂಸ್ಥೆಯ (ಬ್ರಿಮ್ಸ್‌ ) ಆಸ್ಪತ್ರೆಯಲ್ಲಿ ಮೂತ್ರಶಾಸ್ತ್ರಜ್ಞ ವೈದ್ಯರಿಲ್ಲದೆ ರೋಗಿಗಳು ಪರದಾಡುತ್ತಿದ್ದು, ಕೂಡಲೇ ಮೂತ್ರಶಾಸ್ತ್ರಜ್ಞ ವೈದ್ಯರನ್ನು ನೇಮಕ ಮಾಡುವಂತೆ ಕರ್ನಾಟಕ ಯುವ ರಕ್ಷಣಾ ವೇದಿಕೆ ಜಿಲ್ಲಾ ಘಟಕದ ಪದಾಧಿಕಾರಿಗಳು ಆಗ್ರಹಿಸಿದ್ದಾರೆ.

- Advertisement -

ವೇದಿಕೆಯ ಜಿಲ್ಲಾಧ್ಯಕ್ಷ ಗುರುದಾಸ ಅಮದಲಪಾಡ ನೇತ್ರತ್ವದಲ್ಲಿ ಬ್ರಿಮ್ಸ್‌ ನಿರ್ದೇಶಕ ಶಿವಕುಮಾರ್‌ ಶೆಟಕಾರ್‌ ಅವರಿಗೆ ಮನವಿ ಸಲ್ಲಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಬಡ ಯೆಮನ್ ಇಕ್ಕಳದಲ್ಲಿ ಶ್ರೀಮಂತ ಸೌದಿ: ವಿನಾಕಾರಣ ದಾಳಿ...

ಸುಮ್ಮನೆ ಇರಲಾರದ ಸೌದಿ ಅರೇಬಿಯಾ, ಬಡ ರಾಷ್ಟ್ರಗಳ ಮೇಲೆ ದಬ್ಬಾಳಿಕೆ ಮಾಡಲು ಹೋಗಿ, ಮರ್ಮಕ್ಕೆ ತಾಕುವಂತಹ ಹೊಡೆತ ತಿಂದು ಕೂತಿದೆ. ಈಗ ಸೌದಿ ಅರೇಬಿಯಾದ ನೆರವಿಗೆ ಅಮೆರಿಕಾ, ಇಸ್ರೇಲ್‌, ಪಾಕಿಸ್ತಾನ ಮತ್ತು ಟಿರ್ಕಿ...

ಮುಸ್ಲಿಯಾರ್ ಹೇಳಿಕೆ ಎಬ್ಬಿಸಿದ ಪ್ರಶ್ನೆ— ಧಾರ್ಮಿಕ ಮೌಲ್ಯಗಳ ನಡುವೆ...

ಮಹಿಳೆಯ ಗೌರವವನ್ನು ರಕ್ಷಿಸುವ ಹೆಸರಿನಲ್ಲಿ ಆಕೆಯ ಶಿಕ್ಷಣ, ಪ್ರತಿಭೆ, ವೃತ್ತಿ ಅಥವಾ ಸಾಮಾಜಿಕ ಸೇವೆಯ ಬಾಗಿಲುಗಳನ್ನು ಮುಚ್ಚುವುದು ಒಂದು ವಿಷಯ; ಧಾರ್ಮಿಕ ಹಯಾ ಮತ್ತು ಮೌಲ್ಯಗಳನ್ನು ಕಾಪಾಡಿಕೊಂಡೇ ಸಮಾಜದಲ್ಲಿ ಜವಾಬ್ದಾರಿಯುತವಾಗಿ ಪಾಲ್ಗೊಳ್ಳಲು ಅವಕಾಶ...

ಧಾರವಾಡ | ಹುಲಕೊಪ್ಪ‌ ಶಾಲೆ ಶೌಚಾಲಯ ಕಾಮಗಾರಿ ಅಪೂರ್ಣ;...

ಧಾರವಾಡ ಜಿಲ್ಲೆಯ ಕಲಘಟಗಿ ಪ್ರಾಥಮಿಕ ಶಾಲೆಯಲ್ಲಿ‌ ಶೌಚಾಲಯ ಸೇರಿದಂತೆ ಮೂಲಭೂತ ಸೌಲಭ್ಯಗಳ ಕೊರತೆಯಿಂದ ವಿದ್ಯಾರ್ಥಿಗಳು ಸಮಸ್ಯೆ ಎದುರಿಸುತ್ತಿದ್ದಾರೆ. ಹೈಟೆಕ್ ಶೌಚಾಲಯ ಆರಂಭವಾಗಿ ಸುಮಾರು ವರ್ಷಗಳೇ ಕಳೆದರೂ ಇನ್ನೂ ಕಾಮಗಾರಿ ಮುಗಿದಿಲ್ಲ. ಶಾಲೆಯ...

ʼಜಿಲ್ಲಾ ಆಸ್ಪತ್ರೆಯಲ್ಲಿ ಮೂತ್ರಶಾಸ್ತ್ರಜ್ಞ ವೈದ್ಯರ ಕೊರತೆಯೇ ಗಂಭೀರ ಸಮಸ್ಯೆಯಾಗಿದೆ. ಆಸ್ಪತ್ರೆಯಲ್ಲಿ ಎಲ್ಲ ವ್ಯವಸ್ಥೆ ಇದ್ದರೂ ಕೆಲವು ವಿಭಾಗದಲ್ಲಿ ವಿಶೇಷ ತಜ್ಞ ವೈದ್ಯರಿಲ್ಲ. ಗ್ರಾಮೀಣ ಭಾಗದಿಂದ ಚಿಕಿತ್ಸೆಗೆಂದು ಆಗಮಿಸುವ ಜಿಲ್ಲೆಯ ರೋಗಿಗಳಿಗೆ ಆಸ್ಪತ್ರೆಯಲ್ಲಿ ವೈದ್ಯರಿಲ್ಲದ ಕಾರಣ ಸೂಕ್ತ ಚಿಕಿತ್ಸೆ ದೊರಕುತ್ತಿಲ್ಲʼ ಎಂದು ದೂರಿದರು.

ಸರ್ಕಾರಿ ಆಸ್ಪತ್ರೆ ಅವಲಂಬಿಸಿರುವ ಬಡ ರೋಗಿಗಳಿಗೆ ನುರಿತ ವೈದ್ಯರು ಇಲ್ಲದ ಪರಿಣಾಮ ತೊಂದರೆಗೆ ಸಿಲುಕಿದ್ದಾರೆ. ಇದರಿಂದ ಜನರು ಅನಿವಾರ್ಯವಾಗಿ ಖಾಸಗಿ ಆಸ್ಪತ್ರೆಗಳಿಗೆ ತೆರಳುವ ಹಣ ಖರ್ಚು ಮಾಡಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಶೀಘ್ರದಲ್ಲೇ ವೈದ್ಯರನ್ನು ನೇಮಿಸುವ ಮಹತ್ತರ ಜವಾಬ್ದಾರಿ ಆರೋಗ್ಯ ಇಲಾಖೆ ಹಾಗೂ ಜನಪ್ರತಿನಿಧಿಗಳು ಮಾಡಬೇಕು. ಇಲ್ಲದಿದ್ದರೆ ಹೋರಾಟ ನಡೆಸಲಾಗುವುದುʼ ಎಂದು ಎಚ್ಚರಿಕೆ ನೀಡಿದರು.

ಈ ಸುದ್ದಿ ಓದಿದ್ದೀರಾ? ರಾಯಚೂರು | ಗುಡುಗು ಸಹಿತ ಮಳೆ; ಸಿಡಿಲಿಗೆ ಕುರಿಗಾಹಿ ಬಲಿ

ಈ ಸಂದರ್ಭದಲ್ಲಿ ಕರ್ನಾಟಕ ಯುವಗರ್ಜನೆ ಜಿಲ್ಲಾಧ್ಯಕ್ಷ ಅನೀಲ್‌ ಕುಮಾರ್‌ ಭವಾನಿ, ಜಿಲ್ಲಾಧ್ಯಕ್ಷ ವಿಲ್ಸನ್‌ ದೊಡ್ಡಮನಿ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಶಿಕ್ಷಕರು ಪೀಳಿಗೆಯ ಭವಿಷ್ಯ ರೂಪಿಸುವ ಜವಾಬ್ದಾರಿ ಹೊಂದಿದ್ದಾರೆ: ಪ್ರಿಯಾಂಕ್ ಖರ್ಗೆ

ಶಿಕ್ಷಕರು ಕೇವಲ ಪಠ್ಯಕ್ರಮ ಬೋಧಿಸುವವರಲ್ಲ. ವಿದ್ಯಾರ್ಥಿಗಳ ವ್ಯಕ್ತಿತ್ವ ಹಾಗೂ ಭವಿಷ್ಯ ರೂಪಿಸುವ...

ಕಲಬುರಗಿ | ಶರಣರ ಸಮಾನತೆಯ ತತ್ವಕ್ಕೆ ಹಿಂದೂತ್ವದ ಬಣ್ಣ : ಸೆ.25ರಂದು ಬೃಹತ್ ಹೋರಾಟ

ಬಸವಾದಿ ಶರಣರ ಸಮಾನತೆ, ಜಾತಿ ವಿರೋಧಿ ಹಾಗೂ ಮಾನವೀಯ ಮೌಲ್ಯಗಳನ್ನು ತಿರುಚಿ,...

ಕಲಬುರಗಿ | ಸಿದ್ದರಾಮೇಶ್ವರ ಜಯಂತಿ ಪ್ರಯುಕ್ತ ಉಚಿತ ಆರೋಗ್ಯ, ನೇತ್ರ ತಪಾಸಣಾ ಶಿಬಿರ

ಜಿಡಾಗಾ ಮುಗಳಖೋಡ ಮಠದ ಪೂಜ್ಯ ಷಡಕ್ಷರಿ ಶಿವಯೋಗಿ ಶ್ರೀ ಸಿದ್ದರಾಮೇಶ್ವರ ಅವರ...

ಉಡುಪಿ | ಕಸ್ತೂರಿ ರಂಗನ್ ವರದಿ ಅಧಿಸೂಚನೆ ತಕ್ಷಣ ಹಿಂಪಡೆಯಿರಿ: ಕಾಂಗ್ರೆಸ್ ಆಗ್ರಹ

ಪಶ್ಚಿಮ ಘಟ್ಟ ಹಾಗೂ ಅದರ ತಪ್ಪಲು ಪ್ರದೇಶಗಳ ನಿವಾಸಿಗಳಿಗೆ ಮಾರಕವಾಗಿರುವ ಕಸ್ತೂರಿ...