ರಾಯಚೂರು | ದೇವದಾರಿಯಲ್ಲಿ ಗಣಿಗಾರಿಕೆ ನಿಷೇಧಕ್ಕೆ ಆಗ್ರಹ; ಎಚ್‌ಡಿಕೆಗೆ ರಕ್ತದಲ್ಲಿ ಪತ್ರ ಬರೆದ ಹೋರಾಟಗಾರ

Date:

ಬಳ್ಳಾರಿ ಜಿಲ್ಲೆಯ ಸಂಡೂರು ತಾಲೂಕಿನ ದೇವದಾರಿ ಅರಣ್ಯ ಪ್ರದೇಶದಲ್ಲಿ ಗಣಿಗಾರಿಕೆ ನಡೆಸಲು ಕುದುರೆಮುಖ ಕಬ್ಬಿಣ್ಣದ ಅದಿರು ಗಣಿಗಾರಿಕೆ ಕಂಪನಿಗೆ ನೀಡಲಾಗಿರುವ ಅನುಮತಿಯನ್ನು ರದ್ದು ಮಾಡಬೇಕೆಂದು ಆಗ್ರಹಿಸಿ, ಕೇಂದ್ರ ಉಕ್ಕು ಖಾತೆ ಸಚಿವ ಎಚ್‌ಡಿ ಕುಮಾರಸ್ವಾಮಿಗೆ ರಕ್ತದಲ್ಲಿ ಪತ್ರ ಬರೆದಿದ್ದೇನೆ ಎಂದು ಪರಿಸರ ಹೋರಾಟಗಾರ ರವಿಗೌಡ ಮಲ್ಲದಗುಡ್ಡ ಹೇಳಿದ್ದಾರೆ.

- Advertisement -

ರಾಯಚೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಅವರು ಮಾತನಾಡಿದರು. “ಕೇಂದ್ರ ಉಕ್ಕು ಖಾತೆ ಸಚಿವರಾಗಿರುವ ಎಚ್.ಡಿ.ಕುಮಾರಸ್ವಾಮಿ ಅವರು ಅಧಿಕಾರ ಸ್ವೀಕರಿಸಿದ ದಿನದಂದೇ ದೇವದಾರಿ ಅರಣ್ಯ ಪ್ರದೇಶದಲ್ಲಿ ಗಣಿಗಾರಿಕೆ ಅವಕಾಶ ನೀಡಿದ್ದಾರೆ. ಅವರ ನಡೆ ಖಂಡನೀಯ. ಗಣಿಗಾರಿಕೆಯಿಂದ ಪರಿಸರ ನಾಶ ಮಾತ್ರವಲ್ಲ ಜೀವ ಸಂಕುಲುಗಳು ನಾಶವಾಗಲಿದೆ. 401 ಹೇಕ್ಟರ್ ಪ್ರದೇಶದಲ್ಲಿ ಗಣಿಗಾರಿಕೆಗೆ ಅವಕಾಶ ನೀಡಿರುವುದರಿಂದ 99,330 ಮರಗಳ ಮಾರಣಹೋಮ ನಡೆಯಲಿದೆ. ಔಷಧಿ ಸಸ್ಯಗಳು, ಪ್ರಾಣಿ, ಪಕ್ಷಿಗಳು, ವನ್ಯಜೀವಿಗಳ, ನೈಸರ್ಗಿಕ ಸಂಪತ್ತು ವಿನಾಶವಾಗಲಿದೆ” ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

“ಉತ್ತರ ಕರ್ನಾಟಕದ ಜಿಲ್ಲೆಗಳಿಗೆ ಆಮ್ಲಜನಕ ನೀಡುವ ದೊಡ್ಡ ಅರಣ್ಯವನ್ನು ನಾಶ ಮಾಡುವುದು ಭವಿಷ್ಯಕ್ಕೆ ಆಪತ್ತಾಗಿ ಪರಿಣಮಸಲಿದೆ. 2006ರಲ್ಲಿ ಸುಪ್ರಿಂಕೋರ್ಟ್‌ ಅದಿರು ಗಣಿಕೆಯನ್ನು ನಿರ್ಬಂಧಿಸಿ ಆದೇಶಿಸಿದ್ದರೂ ಕೇಂದ್ರ ಸರ್ಕಾರ ತರಾತುರಿಯಲ್ಲಿ ಅನುಮತಿ ನೀಡಿದೆ. ಸದ್ಯ, ರಾಜ್ಯ ಅರಣ್ಯ ಇಲಾಖೆ ಗಣಿಗಾರಿಕೆಗೆ ಅವಕಾಶ ನೀಡುವದಿಲ್ಲ ಎಂದು ಹೇಳಿದೆ. ಮುಖ್ಯಮಂತ್ರಿಗಳು ಬಳ್ಳಾರಿ ಜಿಲ್ಲಾಧಿಕಾರಿಗಳಿಗೆ ವರದಿ ನೀಡಲು ಸೂಚಿಸಿದ್ದಾರೆ. ರಾಜ್ಯ ಸರ್ಕಾರ ಯಾವುದೇ ಕಾರಣಕ್ಕೂ ಗಣಿಗಾರಿಕೆ ಅವಕಾಶ ನೀಡಬಾರದು” ಎಂದು ಆಗ್ರಹಿಸಿದ್ದಾರೆ.

“ಎಲ್ಲ ಸಂಘ ಸಂಸ್ಥೆಗಳು, ರಾಜಕೀಯ ಪಕ್ಷಗಳು ಹೋರಾಟಕ್ಕೆ ಬೆಂಬಲವಾಗಿ ನಿಂತು ತೀವ್ರ ವಿರೋಧ ವ್ಯಕ್ತಪಡಿಸಬೇಕು. ರೈತನ ಮಗ ಎಂದು ಹೇಳಿಕೊಳ್ಳುವ ಎಚ್.ಡಿ ಕುಮಾರಸ್ವಾಮಿ ಅವರು ಅರಣ್ಯ ನಾಶಕ್ಕೆ ಕಾರಣವಾಗುವ ಗಣಿಗಾರಿಕೆ ಅವಕಾಶ ಹಿಂಪಡೆಯಬೇಕು” ಎಂದು ಒತ್ತಾಯಿಸಿದ್ದಾರೆ.

ವರದಿ : ಹಫೀಜುಲ್ಲ

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ತುಳುನಾಡ ರಕ್ಷಣಾ ವೇದಿಕೆ ಮಹಿಳಾ ಘಟಕದಿಂದ ಅರ್ಥಪೂರ್ಣ ಗಾಂಧಿ ಜಯಂತಿ

ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜಯಂತಿಯ ಅಂಗವಾಗಿ ತುಳುನಾಡ ರಕ್ಷಣಾ ವೇದಿಕೆ (ರಿ.)...

ಉಡುಪಿ | ಸಮುದಾಯದ ಅಭಿವೃದ್ಧಿಗೆ ಉದ್ಯಮಿಗಳ ಒಗ್ಗಟ್ಟು ಅಗತ್ಯ: ಮುಮ್ತಾಜ್ ಮನ್ಸೂರಿ

ನಮ್ಮ ಸಮುದಾಯದ ದುರ್ಬಲ ವರ್ಗಗಳನ್ನು ಮೇಲಕ್ಕೆತ್ತಲು ಎಲ್ಲರೂ ಬೆಂಬಲ ಮತ್ತು ಸಹಕಾರದೊಂದಿಗೆ...

ರಾಯಚೂರು | ಎಸ್‌ಐಆರ್ ವಿರೋಧಿಸಿ ಪ್ರತಿಭಟನೆ: ಜ್ಞಾನೇಶ ಕುಮಾರ ರಾಜೀನಾಮೆಗೆ ನಾಗರಿಕ ವೇದಿಕೆ ಆಗ್ರಹ

ಕೇಂದ್ರ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ ಕುಮಾರ ಅವರ ರಾಜೀನಾಮೆಗೆ ಆಗ್ರಹಿಸಿ...