ಬೀದರ್‌ | ಕೇಂದ್ರ ಸರ್ಕಾರದಿಂದ ಬಸವ ಜಯಂತಿ ಆಚರಣೆಗೆ ಬಸವಲಿಂಗ ಪಟ್ಟದ್ದೇವರು ಒತ್ತಾಯ

Date:

Advertisements

ವಿಶ್ವಕ್ಕೆ ಮೊದಲ ಪ್ರಜಾಪ್ರಭುತ್ವ ಪರಿಕಲ್ಪನೆ ನೀಡಿದ ಬಸವಣ್ಣನವರ ವಿಚಾರಧಾರೆ ಜಗದಗಲ ಮುಟ್ಟಿಸಲು ಕೇಂದ್ರ ಸರಕಾರದಿಂದ ಪ್ರತಿವರ್ಷ ಬಸವ ಜಯಂತಿ ಆಚರಿಸುವ ಕೆಲಸ ಆಗಬೇಕಿದೆ ಎಂದು ಬಸವಕಲ್ಯಾಣ ಅನುಭವ ಮಂಟಪ ಟ್ರಸ್ಟ್ ಅಧ್ಯಕ್ಷ ನಾಡೋಜ ಡಾ.ಬಸವಲಿಂಗ ಪಟ್ಟದ್ದೇವರು ಹೇಳಿದರು.

ಭಾಲ್ಕಿ ತಾಲೂಕಿನ ಕರಡ್ಯಾಳ ಚನ್ನಬಸವೇಶ್ವರ ಗುರುಕುಲ ಅನುಭವ ಮಂಟಪದಲ್ಲಿ ಹಿರೇಮಠ ಸಂಸ್ಥಾನ ವಿದ್ಯಾಪೀಠ ಟ್ರಸ್ಟ್ ವತಿಯಿಂದ ಭಾನುವಾರ ಆಯೋಜಿಸಿದ್ದ ನೂತನ ಸಂಸದ ಸಾಗರ ಖಂಡ್ರೆ ಅಭಿನಂದನಾ ಸಮಾರಂಭದ ದಿವ್ಯ ಸಾನ್ನಿಧ್ಯ ವಹಿಸಿ ಅವರು ಮಾತನಾಡಿದರು.

“ಈಗಾಗಲೇ ಹಲವು ವರ್ಷಗಳಿಂದ ಗೌತಮ ಬುದ್ಧ, ಮಹಾವೀರ ಜಯಂತಿಯನ್ನು ಕೇಂದ್ರ ಸರಕಾರ ಆಚರಿಸಿಕೊಂಡು ಬರುತ್ತಿದೆ. ಅದರಂತೆ ಬಸವ ಜಯಂತಿ ಕೂಡ ಕೇಂದ್ರ ಸರಕಾರದಿಂದ ಆಚರಿಸಲು ಕ್ರಮ ಕೈಗೊಳ್ಳಬೇಕಿದೆ. ಈ ಬಗ್ಗೆ ನೂತನ ಸಂಸದ ಸಾಗರ ಖಂಡ್ರೆ ಅವರು ಕೇಂದ್ರ ಸರಕಾರದ ವತಿಯಿಂದ ಬಸವ ಜಯಂತಿ ಆಚರಣೆ ಮಾಡುವಂತೆ ಧ್ವನಿಯೆತ್ತಬೇಕು. ಕೇಂದ್ರದ ಮೇಲೆ ನಿರಂತರ ಒತ್ತಡ ತಂದು ಮನವರಿಕೆ ಮಾಡಿಕೊಟ್ಟರೆ ಮುಂಬರುವ ದಿನಗಳಲ್ಲಿ ಬಸವ ಜಯಂತಿ ಕೇಂದ್ರದಿಂದ ಆಚರಣೆಗೆ ಬರಲಿದೆ” ಎಂದು ವಿಶ್ವಾಸ ವ್ಯಕ್ತಪಡಿಸಿದರು.

Advertisements

ಬೀದರ್‌ ಲೋಕಸಭಾ ಕ್ಷೇತ್ರದ ನೂತನ ಸಂಸದ ಸಾಗರ ಖಂಡ್ರೆ ಸನ್ಮಾನ ಸ್ವೀಕರಿಸಿ ಮಾತನಾಡಿ, “ವಿದ್ಯಾರ್ಥಿಗಳು ಜೀವನದಲ್ಲಿ ಮತ್ತೊಬ್ಬರೊಂದಿಗೆ ಯಾವತ್ತು ಹೋಲಿಕೆ ಮಾಡಿಕೊಳ್ಳಬಾರದು. ಪ್ರಾಮಾಣಿಕ ಪ್ರಯತ್ನ, ಪರಿಶ್ರಮದಿಂದ ಕನಸು ನನಸಾಗಿಸಿಕೊಳ್ಳಬೇಕು. ಪೋಷಕರು ಮಕ್ಕಳ ಮೇಲೆ ಅನೇಕ ಆಸೆ, ಆಕಾಂಕ್ಷೆಗಳನ್ನು ಇಟ್ಟುಕೊಂಡಿರುತ್ತಾರೆ. ಅವರ ಕನಸು ಈಡೇರಿಸುವ ಜವಾಬ್ದಾರಿ ವಿದ್ಯಾರ್ಥಿಗಳ ಮೇಲಿದೆ. ಹೀಗಾಗಿ ವಿದ್ಯಾರ್ಥಿಗಳು ತರಗತಿ ಆರಂಭದಿಂದಲೇ ಓದಿನ ಕಡೆ ಗಮನ ಹರಿಸಬೇಕು” ಎಂದು ಸಲಹೆ ನೀಡಿದರು.

“ವಿದ್ಯಾರ್ಥಿಗಳು ಪ್ರತಿನಿತ್ಯ ಪತ್ರಿಕೆಗಳನ್ನು ಓದುವ ಹವ್ಯಾಸ ರೂಡಿಸಿಕೊಳ್ಳಬೇಕು. ಪಾಠದ ಜತೆಗೆ ಕ್ರೀಡೆಯಲ್ಲಿ ತೊಡಗಿಕೊಂಡು ವಿದ್ಯಾರ್ಥಿಗಳು ತಮ್ಮ ಶೈಕ್ಷಣಿಕ ಅಭ್ಯಾಸವನ್ನು ಯಶಸ್ವಿಯಾಗಿ ಪೂರೈಸಬೇಕು ಎಂದರು. ಗಡಿ ಭಾಗದಲ್ಲಿ ಡಾ.ಬಸವಲಿಂಗ ಪಟ್ಟದ್ದೇವರು ನೇತ್ರತ್ವದ ಸಂಸ್ಥೆಯಲ್ಲಿ ಗುಣಾತ್ಮಕ ಶಿಕ್ಷಣದ ಜತೆಗೆ ಉತ್ತಮ ಸಂಸ್ಕಾರ ಕಲಿಸುತ್ತಿರುವುದು ಅತ್ಯಂತ ಹೆಮ್ಮೆ ತರಿಸಿದೆ” ಎಂದರು.

ನೇತೃತ್ವ ವಹಿಸಿದ ಹಿರೇಮಠ ಸಂಸ್ಥಾನದ ಪೀಠಾಧಿಪತಿ ಗುರುಬಸವ ಪಟ್ಟದ್ದೇವರು ಮಾತನಾಡಿ, “ಭಾಲ್ಕಿ ಹಿರೇಮಠ ಸಂಸ್ಥಾನದ ಬೆಳವಣಿಗೆಯಲ್ಲಿ ಭಕ್ತ ಸಮೂಹದ ದೊಡ್ಡ ಶಕ್ತಿಯಿದೆ. ಅದರಲ್ಲೂ ಖಂಡ್ರೆ ಮನೆತನದ ಪಾಲು ಹೆಚ್ಚಿದೆ. ಡಾ.ಭೀಮಣ್ಣ ಖಂಡ್ರೆ ಪರಿವಾರ ಶ್ರೀಮಠದ ಮೇಲೆ ಅಪಾರ ಶ್ರದ್ಧೆ, ಭಕ್ತಿ ಹೊಂದಿದೆ. ಸಚಿವ ಈಶ್ವರ ಖಂಡ್ರೆಯವರು ಈ ಭಾಗದ ಸಮಗ್ರ ಪ್ರಗತಿಗೆ ಹಗಲಿರುಳು ಶ್ರಮಿಸುತ್ತಿದ್ದಾರೆ. ಅವರ ಪುತ್ರ, ನೂತನ ಸಂಸದರಾಗಿರುವ ಸಾಗರ ಖಂಡ್ರೆ ಅವರು ಜಿಲ್ಲೆಯ ಧ್ವನಿಯಾಗಿ ಕೇಂದ್ರದಲ್ಲಿ ಕೆಲಸ ಮಾಡುವ ವಿಶ್ವಾಸವಿದೆ” ಎಂದು ತಿಳಿಸಿದರು.

“ಬಸವಣ್ಣವರು ದೇಹವನ್ನು ದೇಗುಲಕ್ಕೆ ಹೋಲಿಸಿದ್ದಾರೆ. ಅಂತಹ ದೇಗುಲವನ್ನು ಯಾವುದೇ ಕಾರಣಕ್ಕೂ ಕೆಡಿಸಿಕೊಳ್ಳಬಾರದು. ಪರಿಶ್ರಮ, ಪ್ರಯತ್ನ ಇದ್ದಲ್ಲಿ ದೇವರು ಒಲಿಯುತ್ತಾನೆ. ಹೀಗಾಗಿ ವಿದ್ಯಾರ್ಥಿಗಳು ಎರಡು ವರ್ಷ ಪಿಯುಸಿ ತಪ್ಪಸ್ಸಿನ ರೀತಿಯಲ್ಲಿ ಅಧ್ಯಯನಗೈದು ಹೆತ್ತವರಿಗೆ ಗೌರವ ತಂದು ಕೊಡಬೇಕು” ಎಂದು ಕಿವಿಮಾತು ಹೇಳಿದರು.

ಬಸವಕಲ್ಯಾಣ ಅನುಭವ ಮಂಟಪದ ಸಂಚಾಲಕ ಶಿವಾನಂದ ಸ್ವಾಮೀಜಿ, ಹಿರೇಮಠ ಸಂಸ್ಥಾನದ ಕಾರ್ಯದರ್ಶಿ ಮಹಾಲಿಂಗ ಸ್ವಾಮೀಜಿ ನೇತೃತ್ವ ವಹಿಸಿದರು. ಸಂಗಮೇಶ್ವರ ಪ್ರಾಥಮಿಕ, ಪ್ರೌಢ ಶಾಲೆ, ಕಾಲೇಜು ಸ್ಥಾನಿಕ ಕಮಿಟಿ ಅಧ್ಯಕ್ಷ ಧನರಾಜ ಬಂಬುಳಗೆ ಬಸವ ಗುರುವಿನ ಪೂಜೆ ನೆರವೇರಿಸಿದರು.

ಈ ಸುದ್ದಿ ಓದಿದ್ದೀರಾ? ಕಲಬುರಗಿ | ಬಿಜೆಪಿಯವರು ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಲಿ : ಸಚಿವ ಶರಣಪ್ರಕಾಶ ಪಾಟೀಲ್

ಕಾರ್ಯಕ್ರಮದಲ್ಲಿ ಪ್ರಾಚಾರ್ಯ ಬಸವರಾಜ ಮೊಳಕೀರೆ ಪ್ರಾಸ್ತಾವಿಕವಾಗಿ ಮಾತನಾಡಿದರು. ಪ್ರಮುಖರಾದ ಪ್ರಥಮ ದರ್ಜೆ ಗುತ್ತಿಗೆದಾರ ಸಂಗಮೇಶ ಹುಣಜೆ, ರವೀಂದ್ರ ಚಿಡಗುಪ್ಪೆ, ಕಾಶಿನಾಥ ಲದ್ದೆ ಇದ್ದರು. ಉಪ ಪ್ರಾಚಾರ್ಯ ಸಿದ್ರಾಮ ಗೊಗ್ಗಾ ವಚನ ಗಾಯನ ನಡೆಸಿಕೊಟ್ಟರು. ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಶಶಿಧರ ಕೋಸಂಬೆ ಸ್ವಾಗತಿಸಿದರು. ಲಕ್ಷ್ಮಣ ಮೇತ್ರೆ ನಿರೂಪಿಸಿದರು, ಬಸವರಾಜ ಪ್ರಭಾ ವಂದಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ಮಹಿಳಾ ಕಾಲೇಜಿನಲ್ಲಿ ಉಪನ್ಯಾಸಕರ ಕೊರತೆ – ವಿದ್ಯಾರ್ಥಿನಿಯರ ಪ್ರತಿಭಟನೆ

ಸಿಂಧನೂರಿನ ಕುಷ್ಟಗಿ ರಸ್ತೆಯಲ್ಲಿರುವ ಸರ್ಕಾರಿ ಮಹಿಳಾ ಪದವಿ ಕಾಲೇಜಿನಲ್ಲಿ ಉಪನ್ಯಾಸಕರ ಕೊರತೆಯಿಂದಾಗಿ...

ಶಿವಮೊಗ್ಗ | ಸೆ. 6ಕ್ಕೆ ಹಿಂದೂ ಮಹಾಸಭಾ ಗಣಪತಿ ವಿಸರ್ಜನೆ

ಶಿವಮೊಗ್ಗದ ಹಿಂದೂ ಮಹಾಸಭಾ ಗಣಪತಿ ಉತ್ಸವದಲ್ಲಿ ಈ ಬಾರಿ ಏನೆಲ್ಲಾ...

ಬೆಳಗಾವಿ : ಗಾಂಜಾ ಮಾರಾಟ ಮಾಫಿಯಾ 9 ಮಂದಿ ಅರೆಸ್ಟ್ : ರೂ 30 ಲಕ್ಷ ಮೌಲ್ಯದ ಗಾಂಜಾ ವಶ

ಬೆಳಗಾವಿ ನಗರದಲ್ಲಿ ಗಾಂಜಾ ಮಾರಾಟ ಜಾಲ ಬಯಲಾಗಿದ್ದು, ಬೆಳಗಾವಿ ಪೊಲೀಸರು ದೊಡ್ಡ...

ಬಾಗಲಕೋಟೆ | ಬಿಜೆಪಿ ಮತಗಳ್ಳತನ ವಿರುದ್ಧ ವ್ಯಾಪಕ ಹೋರಾಟ: ಮಾಜಿ ಸಚಿವ ವಿನಿಯಕುಮಾರ್

ಬಿಜೆಪಿ ಮತಗಳ್ಳತನ ನಡೆಸಿ ಚುನಾವಣೆ ಅಕ್ರಮ ಎಸಗಿರುವ ಬಗ್ಗೆ ವ್ಯಾಪಕವಾಗಿ ಹೋರಾಟ...

Download Eedina App Android / iOS

X