ಕರ್ನಾಟಕದಲ್ಲಿ 250 ಅಡಿ ಎತ್ತರದ ಡಾ. ಬಿ.ಆರ್ ಅಂಬೇಡ್ಕರ್ ಪ್ರತಿಮೆ ನಿರ್ಮಾಣ ಮಾಡಬೇಕೆಂದು ಕರ್ನಾಟಕ ಭೀಮ್ ಸೇನೆ ಒತ್ತಾಯಿಸಿದೆ. ಸಂಘಟನೆಯ ಕಾರ್ಯಕರ್ತರು ಯಾದಗಿರಿ ಜಿಲ್ಲಾಧಿಕಾರಿ ಮೂಲಕ ಮುಖ್ಯಮಂತ್ರಿಗೆ ಹಕ್ಕೊತ್ತಾಯ ಪತ್ರ ಸಲ್ಲಿಸಿದ್ದಾರೆ.
ಹಕ್ಕೊತ್ತಾಯ ಸಲ್ಲಿಸಿ ಮಾನಾಡಿದ ಸಂಘಟನೆಯ ಜಿಲ್ಲಾಧ್ಯಕ್ಷ ರಮೇಶ ಕುಮಾರ, “ಸಮಾನತೆಯ ಸಂಕೇತ, ಭಾರತ ರತ್ನ ಸಂವಿಧಾನ ಶಿಲ್ಪಿ, ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಬಹು ಎತ್ತರದ ಪ್ರತಿಮೆಯನ್ನು ಈಗಾಗಲೇ ಆಂಧ್ರಪ್ರದೇಶದಲ್ಲಿ ನಿರ್ಮಿಸಲಾಗಿದೆ. ಅದೇ ರೀತಿ ಕರ್ನಾಟಕದಲ್ಲೂ 250 ಅಡಿ ಎತ್ತರದ ಬೃಹತ್ ಪ್ರತಿಮೆ ನಿರ್ಮಾಣ ಮಾಡಬೇಕು” ಎಂದರು.
“ಮುಖ್ಯಮಂತ್ರಿಗಳು ಕ್ಯಾಬಿನೆಟ್ ಸಭೆ ಕರೆದು ಈ ವಿಚಾರದ ಬಗ್ಗೆ ಚರ್ಚೆ ನಡೆಸಿ, ನಿರ್ಣಯ ಕೈಗೊಳ್ಳಬೇಕು” ಎಂದು ಆಗ್ರಹಿಸಿದರು.