ಸಚಿವ ಸಂಪುಟ ಸಭೆಯಲ್ಲಿ ಬಯಲುಸೀಮೆ ನೀರಿನ ಸಮಸ್ಯೆ ಕುರಿತ ಚರ್ಚೆಗೆ ಆಗ್ರಹ

Date:

ಬಯಲುಸೀಮೆಯ ಬರಪೀಡಿತ ಜಿಲ್ಲೆಗಳಾದ ಕೋಲಾರ, ಚಿಕ್ಕಬಳ್ಳಾಪುರ ಹಾಘೂ ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಕಳೆದ 30 ವರ್ಷಗಳಿಂದ ನೀರಾವರಿ ಹೋರಾಟ ನಡೆಯುತ್ತಿದೆ. ಈ ಬಯಲುಸೀಮೆಯ ನೀರಿನ ಸಮಸ್ಯೆಯನ್ನು ಸರ್ಕಾರವು ಆದ್ಯತೆಯಾಗಿ ಪರಿಗಣಿಸಬೇಕಿದೆ. ಅದಕ್ಕಾಗಿ, ಗುರುವಾರ (ಜೂನ್ 19)ರಂದು ನಡೆಯಲಿರುವ ಸಚಿವ ಸಂಪುಟ ಸಭೆಯ ಕಾರ್ಯಕಲಾಪಗಳ ಪಟ್ಟಿಯಲ್ಲಿ ಬಯಲುಸೀಮೆಯ ನೀರಿನ ಸಮಸ್ಯೆಯನ್ನು ಸೇರಿಸಿಕೊಳ್ಳಬೇಕೆಂದು ಶಾಶ್ವತ ನೀರಾವರಿ ಹೋರಾಟ ಸಮಿತಿ ಆಗ್ರಹಿಸಿದೆ.

- Advertisement -

ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದಿರುವ ಹೋರಾಟ ಸಮಿತಿಯ ಅಧ್ಯಕ್ಷ ಆರ್ ಆಂಜನೇಯ ರೆಡ್ಡಿ, “ಕೋಲಾರ, ಚಿಕ್ಕಬಳ್ಳಾಪುರ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಗಳ 15 ತಾಲೂಕುಗಳು, 3,870 ಗ್ರಾಮಗಳು ಹಾಗೂ ಸುಮಾರು 2,537 ವಸತಿ ಪ್ರದೇಶಗಳು ನಿರಂತರ ಬರಗಾಲಕ್ಕೆ ತುತ್ತಾಗಿವೆ. ಜಿಲ್ಲೆಗಳಲ್ಲಿ ಹರಿಯುತ್ತಿದ್ದ ಎಲ್ಲ ನದಿಗಳು ಬರಿದಾಗಿವೆ. ಕರೆ, ಕಟ್ಟೆ, ಕೊಳಗಳೂ ಒಣಗಿವೆ. ಇಂತಹ ಪರಿಸ್ಥಿತಿಯಲ್ಲಿ ಜಿಲ್ಲೆಗಳ ನೀರಿನ ಸಮಸ್ಯೆಯನ್ನು ಪರಿಹರಿಸುವುದು ಸರ್ಕಾರದ ಮುಖ್ಯ ಆದ್ಯತೆಯಾಗಬೇಕು” ಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಅಧಿಕೃತ ಕೆಲಸಕ್ಕೆ WHATSAPP ವೆಬ್ ಅಪಾಯಕಾರಿ ಏಕೆ? ಗೃಹ...

ಕಚೇರಿ, ಸಾರ್ವಜನಿಕ ಅಥವಾ ಹಲವರು ಹಂಚಿಕೊಂಡು ಬಳಸುವ ಕಂಪ್ಯೂಟರ್‌ಗಳಲ್ಲಿ WHATSAPP ವೆಬ್ ಬಳಸುವವರಿಗೆ ಕೇಂದ್ರ ಗೃಹ ಸಚಿವಾಲಯ ಮಹತ್ವದ ಭದ್ರತಾ ಎಚ್ಚರಿಕೆ ನೀಡಿದೆ. ಸಚಿವಾಲಯದ ಅಧೀನದ ಭಾರತೀಯ ಸೈಬರ್ ಅಪರಾಧ ಸಮನ್ವಯ ಕೇಂದ್ರದ...

ಆನೆ ಓಡಿಸಲು ಜೇನುನೊಣ ಸಾಕು! ಏನಿದು ತಂತ್ರ?

ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದ ಕೃಷಿಕರು ಆನೆ ಹಾವಳಿ ತಡೆಗೆ ಸರಳ ಮತ್ತು ವಿನೂತನ ಪ್ರಯೋಗಕ್ಕೆ ಮುಂದಾಗಿದ್ದಾರೆ. ಆನೆ ಬರುವ ದಾರಿಯಲ್ಲಿ ಜೇನು ಪೆಟ್ಟಿಗೆಗಳನ್ನಿಟ್ಟು ಗಜಪಡೆಯನ್ನು ಹಿಮ್ಮೆಟ್ಟಿಸುವ ಮಾರ್ಗವಿದು. ಆನೆಗಳ ಸೊಂಡಿಲಿನ ಒಳಭಾಗ...

ವೈದ್ಯರಿಲ್ಲ, ಔಷಧವೂ ಇಲ್ಲ! ದಶಕ ಕಳೆದರೂ ಚೇತರಿಸದ ಗಜೇಂದ್ರಗಡ...

ಗಜೇಂದ್ರಗಡ ತಾಲೂಕು ಘೋಷಣೆಯಾಗಿ ದಶಕ ಕಳೆದರೂ ಇಂದಿಗೂ ಸಮುದಾಯ ಆರೋಗ್ಯ ಕೇಂದ್ರವನ್ನು ಮೇಲ್ದರ್ಜೆಗೆ ಏರಿಸಿಲ್ಲ. ವೈದ್ಯರ ಕೊರತೆ, ಅಗತ್ಯ ಔಷಧಿಗಳ ಕೊರತೆ, ಸಿಬ್ಬಂದಿಗಳ ಕೊರತೆ ಇರುವುದರಿಂದ, ಇಲ್ಲಿಗೆ ಬರುವ ರೋಗಿಗಳಿಗೆ ಸರಿಯಾದ ಚಿಕತ್ಸೆ,...

“ಜಿಲ್ಲೆಗಳಲ್ಲಿ ಸಾವಿರಾರು ಅಡಿಗಳಷ್ಟು ಆಳಕ್ಕೆ ಬಾವಿಗಳನ್ನು ತೋಡಿ, ನೀರು ಮೇಲೆತ್ತಲಾಗುತ್ತಿದೆ. ಆದರೆ, ಆ ನೀರಿನಲ್ಲಿ ಫ್ಲೋರೈಡ್, ನೈಟ್ರೇಟ್, ಯುರೇನಿಯಂ ಹಾಗೂ ಅರ್ಸೆನಿಕ್ ಮುಂತಾದ ವಿಷಕಾರಿ ಅಂಶಗಳಿವೆ. ಆ ನೀರು ಕುಡಿಯಲು ಯೋಗ್ಯವಾಗಿಲ್ಲ. ಅಸುರಕ್ಷಿತ ನೀರು ಸೇವಿಸುತ್ತಿರುವುದರಿಂದ ಮಾರಣಾಂತಿಕ ಖಾಯಿಲೆಗಳಿಗೆ ಜನರು ತುತ್ತಾಗುತ್ತಿದ್ದಾರೆ. ಈ ನೀರು ಕುಡಿಯುತ್ತಿರುವುದರಿಂದ ತಾಯಿಯ ಎದೆ ಹಾಲು ಕೂಡ ಫ್ಲೋರೈಡ್ ಪೂರಿತವಾಗಿರುವ ಪರಿಸ್ಥಿತಿ ಎದುರಾಗಿದೆ” ಎಂದು ಸಮಿತಿಯ ಮುಖಂಡರು ಆತಂಕ ವ್ಯಕ್ತಪಡಿಸಿದ್ದಾರೆ.

“ಜಿಲ್ಲೆಗಳ ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರವನ್ನು ಕಂಡುಕೊಳ್ಳಬೇಕಿದೆ. ಕೆ.ಸಿ ವ್ಯಾಲಿ, ಎಚ್‌.ಎನ್ ವ್ಯಾಲಿ  ಯೋಜನೆಗಳ ಅನುಷ್ಠಾನ ಮಾಡುತ್ತಿರುವ ನಿಗಮ/ನೀರಾವರಿ ಇಲಾಖೆಗಳು ವೈಜ್ಞಾನಿಕ ಸಂಸ್ಥೆಗಳು ನೀಡಿರುವ ಅಧ್ಯಯನ ವರದಿಗಳನ್ನು ನಿರ್ಲಕ್ಷಿಸಿವೆ. ಆ ಅಧ್ಯಯನ ವರದಿಗಳನ್ನು ಇಲಾಖೆಗಳು ಗಂಭೀರವಾಗಿ ಪರಿಗಣಿಸಬೇಕು. ಎತ್ತಿನಹೊಳೆ ಯೋಜನೆಯಡಿ ಶುದ್ಧ ಕುಡಿಯುವ ನೀರು ಪೂರೈಕೆಯ ಭರವಸೆ ಕೊಟ್ಟು 15 ವರ್ಷಗಳು ಕಳೆದುಹೋಗಿವೆ. ಆದರೆ, ಬೊಗಸೆಯಷ್ಟೂ ನೀರು ಜಿಲ್ಲೆಗಳಿಗೆ ಬಂದಿಲ್ಲ. ಎತ್ತಿನಹೊಳೆ ಯೋಜನೆ ನೀರು ಕೊಡುತ್ತೇವೆಂದು ಸುಳ್ಳು ಹೇಳುವುದನ್ನು ಬಿಟ್ಟು, ಪರ್ಯಾಯ ಯೋಜನೆ ಮತ್ತು ಮಾರ್ಗಗಳನ್ನು ಕಂಡುಕೊಳ್ಳಬೇಕು” ಎಂದು ಆಗ್ರಹಿಸಿದ್ದಾರೆ.

“ಬರಪೀಡಿತ ಜಿಲ್ಲೆಗಳ ಕೆರೆ, ಕಟ್ಟೆಗಳಿಗೆ ನೀರು ತುಂಬಿಸಲು, ಅವುಗಳನ್ನು ಅಭಿವೃದ್ಧಿ ಪಡಿಸಲು ಸರ್ಕಾರವು ಯಾವೆಲ್ಲ ಕಾರ್ಯ ಯೋಜನೆಗಳನ್ನು ರೂಪಿಸಿದೆ ಎಂಬುದನ್ನು ಜಿಲ್ಲೆಗಳ ಜನರಿಗೆ ತಿಳಿಸಬೇಕು. ಕೃಷ್ಣ-ಪೆನ್ನಾರ್ ನದಿಗಳನ್ನು ಜೋಡಿಸುವ ಬಗ್ಗೆ ಸರ್ಕಾರದ ನಿಲುವೇನು ಎಂಬುದನ್ನು ತಿಳಿಸಬೇಕು. ಈ ಎಲ್ಲ ವಿಚಾರಗಳನ್ನು ಗುರುವಾರದ ಸಚಿವ ಸಂಪುಟ ಸಭೆಯಲ್ಲಿ ಆದ್ಯತೆಯಾಗಿ ಚರ್ಚಿಸಬೇಕು. ನಿರ್ಣಯಗಳನ್ನು ಜನರ ಮುಂದಿಸಬೇಕು” ಎಂದು ಸಮಿತಿಯು ಒತ್ತಾಯಿಸಿದೆ.

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಕ್ಷಿಣ ಕನ್ನಡ | ರೂ.20 ಲಕ್ಷ ಮೌಲ್ಯದ ಗೋವಾ ಮದ್ಯ, 2 ಕಾರು ವಶ

ದಕ್ಷಿಣ ಕನ್ನಡ ಅಬಕಾರಿ ಇಲಾಖೆ ಅಧಿಕಾರಿಗಳು ಕೈಗೊಂಡ ಎರಡು ಪ್ರತ್ಯೇಕ ಕಾರ್ಯಾಚರಣೆಯಲ್ಲಿ,...

ಬಾಗಲಕೋಟೆ |ಮದ್ಯ–ಮಾದಕ ವ್ಯಸನದ ವಿರುದ್ಧ ಜನಜಾಗೃತಿ ಅಭಿಯಾನಕ್ಕೆ ಗುರುಮಹಾಂತ ಶ್ರೀಗಳ ಸಾರಥ್ಯ

ವ್ಯಸನಮುಕ್ತ ಸಮಾಜ ನಿರ್ಮಾಣ ಹಾಗೂ ಮದ್ಯ ಮತ್ತು ಮಾದಕ ವಸ್ತುಗಳ ದುಷ್ಪರಿಣಾಮಗಳ...

ಬಾಗಲಕೋಟೆ | ಒಂದೇ ದಿನದಲ್ಲಿ ₹8.17 ಕೋಟಿ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ

ಕುಡಚಿ ವಿಧಾನಸಭಾ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಆದ್ಯತೆ ನೀಡಿರುವ ಕಾಂಗ್ರೆಸ್ ಶಾಸಕ...