ಕಲಬುರಗಿ | ಬಗರ್ ಹುಕುಂ ಸಾಗುವಳಿದಾರರಿಗೆ ಹಕ್ಕು ಪತ್ರ ವಿತರಿಸಲು ಆಗ್ರಹ

Date:

ಗ್ರಾಮೀಣ ಪ್ರದೇಶದ ಬಗರ್ ಹುಕುಂ ಸಾಗುವಳಿದಾರರಿಗೆ ಕೂಡಲೇ ಹಕ್ಕು ಪತ್ರ ನೀಡಬೇಕೆಂದು ಆಗ್ರಹಿಸಿ ಅಖಿಲ ಭಾರತ ರೈತ ಕೃಷಿ ಕಾರ್ಮಿಕರ ಸಂಘಟನೆಯ (ಎಐಕೆಕೆಎಂಎಸ್) ಪದಾಧಿಕಾರಿಗಳು ಕಲಬುರಗಿ ಗ್ರಾಮೀಣ ಕ್ಷೇತ್ರದ ಶಾಸಕ ಬಸವರಾಜ ಮತ್ತಿಮೂಡ್ ಅವರಿಗೆ ಮನವಿ ಪತ್ರ ಸಲ್ಲಿಸಿದರು.

- Advertisement -

ಸಂಘಟನೆಯ ಜಿಲ್ಲಾ ಕಾರ್ಯದರ್ಶಿ ಮಹೇಶ್ ಎಸ್ ಬಿ. ಮಾತನಾಡಿ, ʼಕಲಬುರಗಿ ತಾಲೂಕಿನ ಕುಸನೂರು, ಕುಸನೂರು ತಾಂಡಾ, ನಂದೂರ ತಾಂಡಾ ಹಾಗೂ ಝಾಪುರ್ ಗ್ರಾಮಗಳಲ್ಲಿ ಸುಮಾರು ಕಳೆದ 40 ವರ್ಷಗಳಿಂದ ರೈತರು ತಮ್ಮ ಸಾಗುವಳಿ ಭೂಮಿ ಸಕ್ರಮವಾಗಿ ಪರಿವರ್ತಿಸಿಕೊಳ್ಳಲು ಅರ್ಜಿ ಸಲ್ಲಿಸಿ ದಶಕಗಳಿಂದ ಕಾಯುತ್ತಿದ್ದಾರೆ. ಫಾರಂ ನಂ.50, 53 ಮತ್ತು ಫಾರಂ 57 ಇವುಗಳ ವಿಲೇವಾರಿ ಮಾಡಲಾಗುತ್ತಿಲ್ಲ. ಇದರಿಂದ ನಿಜವಾದ ಭೂ ಸಾಗುವಳಿ ಮಾಡುವವರಿಗೆ ಭೂಮಿ ಸಿಗುತ್ತಿಲ್ಲʼ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ರೈತರ ಬದುಕಿನಲ್ಲಿ ಹೊಸ ಬೆಳಕು ಮೂಡಿಸಿದ ಡಾ. ವರ್ಗೀಸ್...

ಕುರಿಯನ್ ಅವರು ಕೇವಲ ಹಾಲಿನ ಉತ್ಪಾದನೆಯನ್ನು ಹೆಚ್ಚಿಸಿದ ವ್ಯಕ್ತಿಯಲ್ಲ. ರೈತರಿಗೆ ಆರ್ಥಿಕ ಸ್ವಾವಲಂಬನೆ, ಮಹಿಳೆಯರಿಗೆ ಉದ್ಯೋಗಾವಕಾಶ, ಗ್ರಾಮೀಣ ಜನರಿಗೆ ಬದುಕಿನ ಭದ್ರತೆ ಹಾಗೂ ದೇಶಕ್ಕೆ ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ದೊರಕಿಸಿಕೊಟ್ಟ ದೂರದೃಷ್ಟಿಯ ನಾಯಕರು. ಭಾರತದ...

ಪಂಜಾಬ್ ಚುನಾವಣೆ | 6 ವರ್ಷಗಳ ಬಳಿಕ ಮತ್ತೆ...

2020ರ ಐತಿಹಾಸಿಕ ರೈತ ಹೋರಾಟದ ವೇಳೆ ಮುರಿದುಬಿದ್ದಿದ್ದ ಶಿರೋಮಣಿ ಅಕಾಲಿ ದಳ (SAD) ಮತ್ತು ಬಿಜೆಪಿ  ಮೈತ್ರಿ ಆರು ವರ್ಷಗಳ ಬಳಿಕ ಮತ್ತೆ ಜೀವ ಪಡೆದುಕೊಂಡಿದೆ. 2027ರ ಪಂಜಾಬ್ ವಿಧಾನಸಭಾ ಚುನಾವಣೆಗೆ ಮುನ್ನ...

ರೇಣುಕಾಸ್ವಾಮಿ ಕೊಲೆ ಪ್ರಕರಣ: ಸಾಕ್ಷಿಗಳು ಉಲ್ಟಾ ಹೊಡೆದ ಮಾತ್ರಕ್ಕೆ...

ಪಟ್ಟಣಗೆರೆ ಶೆಡ್‌ನಲ್ಲಿದ್ದ ನಾಲ್ವರು ಪ್ರಮುಖ ಸಾಕ್ಷಿಗಳು ನ್ಯಾಯಾಲಯದಲ್ಲಿ ಉಲ್ಟಾ ಹೊಡೆದಿರುವುದು ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಹೊಸ ತಿರುವು ನೀಡಿದೆ. ಪ್ರತ್ಯಕ್ಷದರ್ಶಿಗಳು ಉಲ್ಟಾ ಹೊಡೆದ ಮಾತ್ರಕ್ಕೆ ದರ್ಶನ್‌ಗೆ ಕಾನೂನು ಕುಣಿಕೆಯಿಂದ ಮುಕ್ತಿ ಸಿಗುತ್ತದೆಯೇ? ಪೊಲೀಸರು...

ʼಭೂಹೀನ ಮತ್ತು ಬಡ ರೈತರು ಕಂದಾಯ ಹಾಗೂ ಅರಣ್ಯದ ಕುರುಚಲು ಗಿಡ, ಕಲ್ಲು ಭೂಮಿ ಇರುವ ಪ್ರದೇಶಗಳಲ್ಲಿ ಜೀವನೋಪಾಯಕ್ಕಾಗಿ ಸಾಗುವಳಿ ಮಾಡುತ್ತಿದ್ದಾರೆ. ಇದು ಬಹುಪಾಲು ರೈತರ ಬದುಕಿಗೆ ಜೀವನಾಧಾರವಾಗಿದೆ. ಎಲ್ಲಾ ಸರ್ಕಾರಗಳು ಬಡ ರೈತರ ಜೀವನದ ವಸ್ತುಸ್ಥಿತಿ ಅರಿವಿದ್ದೇ ಸರ್ಕಾರಕ್ಕೆ ಸೇರಿದೆ ಜಮೀನಿನಲ್ಲಿ ಉಳುಮೆಗೆ ಅವಕಾಶ ಕೊಡುತ್ತಾ ಬಂದಿದೆ. ಆದರೆ ಶಾಸನಬದ್ದವಾಗಿ ಭೂಮಿಯ ಹಕ್ಕು ದೊರೆಯದೆ ಇರುವುದರಿಂದ ಬಗರ್ ಹುಕುಂ ಸಾಗುವಳಿದಾರರಿಗೆ ದಿಕ್ಕು ತೋಚದಂತಾಗಿದೆ. ಸರ್ಕಾರ ಕೂಡಲೇ ರೈತರಿಗೆ ನ್ಯಾಯ ಒದಗಿಸಿಕೊಡಬೇಕುʼ ಎಂದು ಆಗ್ರಹಿಸಿದರು.

ʼಸಹಜವಾಗಿ ಇವರಿಗೆ ಕೃಷಿ ಬೆಳೆ ಸಾಲ, ಕೃಷಿ ಪರಿಕರ ಮೇಲಿನ ಸಾಲ ಹಾಗೂ ಇನ್ನಿತರ ಜೀವನೋಪಾಯಕ್ಕಾಗಿ ಸಹಕಾರಿ ಹಾಗೂ ರಾಷ್ಟ್ರೀಕೃತ ಬ್ಯಾಂಕ್‌ಗಳಲ್ಲಿ ಯಾವುದೇ ರೀತಿಯ ಅಲ್ಪಾವಧಿ ಸಾಲ ದೊರೆಯದ ಕಾರಣ ಬಹುತೇಕ ಬಡ ರೈತರು ಬೇರೆ ದಾರಿಯಿಲ್ಲದೆ ಕೈಸಾಲ ಪಡೆದು ಸಂಕಟಕ್ಕೆ ಸಿಲುಕಿದ್ದಾರೆ. ಇಂತಹ ಪರಿಸ್ಥಿತಿ ಅವರನ್ನು ಆತ್ಮಹತ್ಯೆಗೆ ದೂಡುವಂತೆ ಮಾಡುತ್ತಿರುವುದು ಅತ್ಯಂತ ವಿಷಾದನೀಯ ಸಂಗತಿ. ಸರ್ಕಾರ ಬಗರ್‌ ಹುಕುಂ ಸಾಗುವಳಿದಾರರಿಗೆ ಹಕ್ಕುಪತ್ರ ಕೊಡುವುದೆಂದರೆ ದೊಡ್ಡ ಕರುಣೆ ಅಥವಾ ಭಿಕ್ಷೆಯಲ್ಲ, ಅದು ನ್ಯಾಯಬದ್ದವಾಗಿ ಕೊಡಬೇಕಾಗಿರುವ ಹಕ್ಕುʼ ಎಂದರು.

ಕಲಬುರಗಿ ಗ್ರಾಮೀಣ ಕ್ಷೇತ್ರದ ವ್ಯಾಪ್ತಿಗೆ ಬರುವ ಗ್ರಾಮಗಳಿಗೆ ಸಂಬಂಧಿಸಿದಂತೆ ತಹಸೀಲ್ದಾರ್‌ ಅವರೊಂದಿಗೆ ಸಭೆ ಕರೆದು ಬಗರ್ ಹುಕುಂ ರೈತರಿಗೆ ಹಕ್ಕು ಪತ್ರ ವಿತರಿಸುವ ಕುರಿತುಗಿ ಚರ್ಚಿಸಬೇಕು. ಆ ಸಭೆಗೆ ಎಲ್ಲಾ ರೈತ ಸಂಘಟನೆಗಳು ಹಾಗೂ ಬಗರ್ ಹುಕುಂ ಸಾಗುವಳಿ ರೈತರಿಗೆ ಮಾಹಿತಿ ತಿಳಿಸಬೇಕು ಎಂದು ಕೋರಿದರು.

ಬೆಳಗಾವಿಯಲ್ಲಿ ಡಿ.9 ರಿಂದ ನಡೆಯಲಿರುವ ಚಳಗಾಲ ಅಧಿವೇಶನದಲ್ಲಿ ಈಗ ಸರ್ಕಾರ ಮಾಡಿರುವ ಹಲವು ನಿಯಮಗಳನ್ನು ಸರಳೀಕರಣಗೊಳಿಸಲು ಒತ್ತಾಯಿಸಿ, ಬಡ ರೈತರು ಭೂಮಿಯನ್ನು ಪಡೆದುಕೊಳ್ಳಲು ಅನುಕೂಲವಾಗುವಂತೆ ಸರ್ಕಾರದ ಮೇಲೆ ಒತ್ತಡ ಹಾಕಬೇಕು ಎಂದು ಮನವಿ ಮಾಡಿದರು.

ಈ ಸುದ್ದಿ ಓದಿದ್ದೀರಾ? ಬೀದರ್‌ | ರಸ್ತೆ ಅಪಘಾತ : ಚಿಕಿತ್ಸೆಗೆ ಸ್ಪಂದಿಸದೆ ವಿದ್ಯಾರ್ಥಿ ಸಾವು

ಈ ಸಂದರ್ಭದಲ್ಲಿ ಶಿವಶರಣಪ್ಪ ದೊಡ್ಮನಿ, ದಶರತ್‌ ತೆಗನೂರ, ಕಾಶಿಪತಿ, ಶರಣಪ್ಪ ತಳವಾರ್‌, ರವಿಚಂದ್ರ, ಪರಶುರಾಮ ಹಾಗೂ ಇನ್ನಿತರರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾಸನ | ಕಟ್ಟಡ ಕಟ್ಟಿಕೊಳ್ಳಲು ಪಾಲಿಕೆಯಿಂದಲೇ ಅನುಮತಿ; ಕಾರ್ಮಿಕರು 

ಹಾಸನ ತಾಲೂಕು ಕೆ.ಆ‌ರ್. ಪುರಂ ಮೊದಲನೇ ಹಂತದಲ್ಲಿ ಫುಟ್‌ಪಾತ್ ಒತ್ತುವರಿ ಮಾಡಿಕೊಂಡು...

ರಾಯಚೂರು | ಶಿಕ್ಷಣ ಹಕ್ಕು ಕಾಯಿದೆ ಸಮಗ್ರ ಜಾರಿಗೆ ಆಗ್ರಹಿಸಿ ನ.26 ರಿಂದ ಅನಿರ್ದಿಷ್ಟಾವಧಿ ಸತ್ಯಾಗ್ರಹ

ಶಿಕ್ಷಣ ಹಕ್ಕು ಕಾಯಿದೆಯನ್ನು ಸಮಗ್ರವಾಗಿ ಜಾರಿಗೊಳಿಸುವುದು ಹಾಗೂ ಸರ್ಕಾರಿ ಶಾಲೆಗಳ ಶಾಲಾ...

ಬೈಂದೂರು | ಜಾಮಿಯಾತುಲ್ ಫಲಾಹ್‌ನಿಂದ 40 ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ವಿತರಣೆ

ಜಾಮಿಯಾತುಲ್ ಫಲಾಹ್ ಬೈಂದೂರು ಯೂನಿಟ್ ವತಿಯಿಂದ ವಿದ್ಯಾರ್ಥಿವೇತನ ವಿತರಣೆ ಹಾಗೂ ಸಮಾರೋಪ...

ಚಿಕ್ಕಮಗಳೂರು | ವಿದ್ಯಾ ಹರ್ಬ್ಸ್ ಕಾರ್ಖಾನೆಯಲ್ಲಿ ಪೋಷ್ ಕಾಯ್ದೆ ಕುರಿತು ಜಾಗೃತಿ ಕಾರ್ಯಕ್ರಮ

​ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಕಾರ್ಮಿಕ ಇಲಾಖೆ, ಮಹಿಳಾ ಮತ್ತು ಮಕ್ಕಳ...