ಮೈಸೂರು | ಕಬ್ಬಿನ ಬಾಕಿ ಹಣ ಪಾವತಿಸುವಂತೆ ಏ.21ರಿಂದ ಅನಿರ್ದಿಷ್ಟಾವಧಿ ಧರಣಿ: ಕುರುಬೂರು ಶಾಂತಕುಮಾರ್

Date:

ಕಬ್ಬು ಬೆಳೆಗಾರರ ಬಾಕಿ ಹಣ ಪಾವತಿಸುವಂತೆ ಒತ್ತಾಯಿಸಿ ಮೈಸೂರು ಜಿಲ್ಲಾಧಿಕಾರಿ ಕಚೇರಿ ಮುಂದೆ ಏಪ್ರಿಲ್ 21ರಿಂದ ನಿರಂತರ ಪ್ರತಿಭಟನಾ ಧರಣಿ ನಡೆಸಲು ತೀರ್ಮಾನಿಸಲಾಗಿದೆ.

- Advertisement -

ಮೈಸೂರು ನಗರದಲ್ಲಿ ಸೋಮವಾರ ನಡೆದ ರಾಜ್ಯ ರೈತ ಸಂಘಟನೆಗಳ ಒಕ್ಕೂಟದ ಸಭೆಯಲ್ಲಿ ಈ ಕುರಿತು ಸುದೀರ್ಘ ಚರ್ಚೆ ನಡೆಸಿದ ಬಳಿಕ ತೀರ್ಮಾನ ಕೈಗೊಳ್ಳಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಪ್ರಚಾರ, ರಾಹುಲ್ ವ್ಯಕ್ತಿತ್ವ ಮತ್ತು ರೆಜಿಮ್ ಚೇಂಜ್

ಮೋದಿ ಅನುಭವಿ ನಟನಂತೆ, ಪ್ರದರ್ಶಕನಂತೆ ಕಾಣುತ್ತಾರೆ. ರಾಹುಲ್ ಗಾಂಧಿ ಪಾತ್ರದ ಒಳಹೊಕ್ಕು ನಟಿಸುವ ಕಲಾವಿದನಂತೆ ಕಾಣುತ್ತಾರೆ. ಈ ನಿಟ್ಟಿನಲ್ಲಿ ರಾಹುಲ್ ರಾಜಕೀಯ ನಡೆಗಳು ಮೋದಿಯವರ ರಾಜಕೀಯ ನಡೆಗಳೊಂದಿಗೆ ವಿಶ್ಲೇಷಣೆಗೊಳಗಾಗುತ್ತಿವೆ. ಕಳೆದ 12 ವರ್ಷಗಳ...

137 ಜೀವ ರಕ್ಷಕ ಕ್ಯಾನ್ಸರ್ ಔಷಧಗಳ ದರ ಶೇ.70ರಷ್ಟು...

ಕ್ಯಾನ್ಸರ್ ಚಿಕಿತ್ಸೆಯ ದುಬಾರಿ ವೆಚ್ಚದಿಂದ ಕಂಗೆಟ್ಟಿರುವ ರೋಗಿಗಳಿಗೆ ಕೇಂದ್ರ ಸರ್ಕಾರದಿಂದ ಕೊಂಚ ನಿರಾಳತೆಯ ಸುದ್ದಿಯೊಂದಿದೆ! 137 ಜೀವರಕ್ಷಕ ಕ್ಯಾನ್ಸರ್ ಔಷಧಗಳ ಬೆಲೆ ಇಳಿಕೆಯಾಗುವ ಸಾಧ್ಯತೆಯಿದ್ದು, ಕೆಲವು ಔಷಧಗಳ ಗರಿಷ್ಠ ಚಿಲ್ಲರೆ ಬೆಲೆ ಶೇ.70ರವರೆಗೆ...

‘ದೇಶ್ ಕೋ ಬಿಕನೇ ನಹೀ ದೂಂಗಾ’ ಎಂದು ನವಮಂಗಳೂರು...

​ರೈಲ್ವೆ, ವಿಮಾನ ನಿಲ್ದಾಣ, ಟೆಲಿಕಾಂ ಸೇರಿದಂತೆ ದೇಶದ ಪ್ರಮುಖ ಜಯಶೀಲ ಸಾರ್ವಜನಿಕ ವಲಯಗಳನ್ನು ಈಗಾಗಲೇ ಆಯ್ದ ಕಾರ್ಪೊರೇಟ್ ಕುಳಗಳಿಗೆ ಒಪ್ಪಿಸಿರುವ ಮೋದಿ ಸರ್ಕಾರ, ಈಗ ತನ್ನ ದೃಷ್ಟಿಯನ್ನು ಕಡಲತೀರಗಳತ್ತ ಹರಿಸಿದೆ. ದೇಶದ ಆಮದು-ರಫ್ತು...

ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ್, “ರಾಜ್ಯ ಸರ್ಕಾರದ ಆದೇಶಗಳಿಗೆ ಗೌರವ ನೀಡದೆ ನಿರ್ಲಕ್ಷ್ಯ ತೋರಿರುವ ಬಣ್ಣಾರಿ ಅಮ್ಲನ್ ಸಕ್ಕರೆ ಕಾರ್ಖಾನೆ ಆಡಳಿತದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಮುಖ್ಯಮಂತ್ರಿಯವರ ಸ್ವಕ್ಷೇತ್ರದಲ್ಲಿಯೇ ಸರ್ಕಾರದ ಆದೇಶವನ್ನು ಕಡೆಗಣಿಸಿರುವುದು ಶೋಚನಿಯ” ಎಂದರು.

“ಕಬ್ಬು ಬೆಳೆಗಾರ ರೈತರ ಖಾತೆಗಳಿಗೆ ಬಾಕಿ ಹಣ ಜಮಾ ಆಗುವ ತನಕ ಹೋರಾಟವನ್ನು ನಿಲ್ಲಿಸುವುದಿಲ್ಲ. ರೈತರ ಹಣ ಬಾಕಿ ವಿಚಾರದಲ್ಲಿ ಜಿಲ್ಲಾಧಿಕಾರಿಗಳು ತಮ್ಮ ಅಧಿಕಾರ ಬಳಸಿ ರಿಕವರಿ ಸರ್ಟಿಫಿಕೆಟ್ ಜಾರಿ ಮಾಡಿ ಸಕ್ಕರೆ ದಾಸ್ತಾನು ಜಪ್ತಿ ಮಾಡಬೇಕು” ಎಂದು ಒತ್ತಾಯಿಸಿದರು.

ಇದೇ ವೇಳೆ, “ಬ್ಯಾಂಕುಗಳಲ್ಲಿ ಚಿನ್ನ ಗಿರವಿ ಸಾಲಗಳಿಗೆ ಸಿಬಿಲ್ ಸ್ಕೋರ್ ಆಧಾರಿತ ನಿಯಮವನ್ನು ರದ್ದುಗೊಳಿಸಬೇಕು. ಹಳೆಯ ಪದ್ಧತಿಯಂತೆ ಪ್ರತಿ ವರ್ಷ ಬಡ್ಡಿ ಪಾವತಿಸಿ ಸಾಲ ನವೀಕರಣಕ್ಕೆ ಅವಕಾಶ ನೀಡಬೇಕು” ಎಂದು ಆಗ್ರಹಿಸಿದರು.

ಈ ಸುದ್ದಿ ಓದಿದ್ದೀರಾ? ಯುವಜನರಿಗಾಗಿ ಭಾಷಣ–ಪ್ರಬಂಧ ಸ್ಪರ್ಧೆ: ಏಪ್ರಿಲ್ 20ರಂದು ಮೈಸೂರಿನಲ್ಲಿ ಜಾಗೃತ ಕರ್ನಾಟಕ ಸಂಘಟನೆಯಿಂದ ಆಯೋಜನೆ

ಕೃಷಿ ಪಂಪ್‌ಸೆಟ್‌ಗಳ ಅಕ್ರಮ-ಸಕ್ರಮ ಪ್ರಕ್ರಿಯೆಯನ್ನು ಹಳೆಯ ವಿಧಾನದಲ್ಲೇ ಮುಂದುವರಿಸಿ, ಅದರ ವೆಚ್ಚವನ್ನು ಸರ್ಕಾರವೇ ಭರಿಸಬೇಕು. ಐವತ್ತು ವರ್ಷಗಳಿಂದ ಸಾಗುವಳಿ ಮಾಡುತ್ತಿರುವ ರೈತರಿಗೆ ಸಾಗುವಳಿ ಚೀಟಿ ನೀಡಬೇಕು. ಹಸುಗಳ ದುರಸ್ತಿ ಕಾರ್ಯ ಹಾಗೂ ಪೋಡಿ ಸರಳೀಕರಣ ಮಾಡಬೇಕು. ಸಾಲ ತೀರಿಸಲು ಒಟಿಎಸ್(ಒನ್ ಟೈಮ್ ಸೆಟ್ಲ್‌ಮೆಂಟ್) ಜಾರಿಗೆ ತರಬೇಕು ಎಂದು ಒತ್ತಾಯಿಸಿದರು.

ಈ ಸುದ್ದಿ ಓದಿದ್ದೀರಾ? ಮೈಸೂರು | ತಾಪಮಾನ ಏರಿಕೆ; ಕುಡಿಯುವ ನೀರಿನ ಸಮಸ್ಯೆ ಉಲ್ಬಣ

ಸಭೆಯಲ್ಲಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬಡಗಲಪುರ ನಾಗರಾಜ್, ಕಾರ್ಯಾಧ್ಯಕ್ಷ ಕಿರಗಸೂರು ಶಂಕರ್, ಮಾರ್ಬಳ್ಳಿ ನೀಲಕಂಠಪ್ಪ, ಲಕ್ಷ್ಮೀಪುರ ವೆಂಕಟೇಶ್, ವರಕೋಡು ನಾಗೇಶ್, ಕುರುಬೂರು ಸಿದ್ದೇಶ್, ಕೆಂಡಗಣ್ಣಪ್ಪ, ಪರಶಿವಮೂರ್ತಿ, ಪ್ರಸಾದ್ ನಾಯಕ, ಬಸವರಾಜ, ನಂಜುಂಡಸ್ವಾಮಿ, ಅಂಬಳೆ ಮಂಜುನಾಥ್, ರಂಗರಾಜು, ನಾಗೇಂದ್ರ, ರವಿಕುಮಾರ್, ಜಯರಾಮು, ಮಹಾದೇವು, ಪ್ರಭಾಕರ್, ರಾಜು, ಬಾಲು, ಸತೀಶ್, ಶಿವಣ್ಣ, ಮಹೇಶ್, ಕಮಲಮ್ಮ ಸೇರಿದಂತೆ ಹಲವರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಭೂಗತ ಪಾತಕಿ ಹೇಮಂತ್ ಪೂಜಾರಿ ಜೊತೆ ಸೇರಿ ಉದ್ಯಮಿಗಳಿಗೆ ಬೆದರಿಕೆ ಪ್ರಕರಣ: ಆರೋಪಿ ಸೆರೆ

ಭೂಗತ ಪಾತಕಿ ಹೇಮಂತ್ ಪೂಜಾರಿ ಜೊತೆ ಸೇರಿಕೊಂಡು ಜಿಲ್ಲೆಯ ಉದ್ಯಮಿ ಹಾಗೂ...

ಬೀದರ್ ಜಿಲ್ಲಾ ಪ್ರಥಮ ದಲಿತ-ಬಂಡಾಯ ಸಮ್ಮೇಳನ : ಸರ್ವಾಧ್ಯಕ್ಷರಾಗಿ ಮಾರುತಿ ಬೌದ್ಧೆ ಆಯ್ಕೆ

ಬೀದರ್ ಜಿಲ್ಲಾ ಪ್ರಥಮ ದಲಿತ-ಬಂಡಾಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಪ್ರಗತಿಪರ ಚಿಂತಕ ಹಾಗೂ...

ಉಡುಪಿ | ಮಲಬಾರ್ ಗೋಲ್ಡ್‌ನಲ್ಲಿ ‘ಆರ್ಟಿಸ್ಟ್ರಿ’ ಆಭರಣ ಪ್ರದರ್ಶನಕ್ಕೆ ಚಾಲನೆ

ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್‌ನ ಉಡುಪಿ ಶಾಖೆಯಲ್ಲಿ ಆಯೋಜಿಸಲಾಗಿರುವ ‘ಆರ್ಟಿಸ್ಟ್ರಿ’ ಕಲಾತ್ಮಕ...

ಗದಗ | ಪಶ್ಚಿಮ ಪದವೀಧರರ  ಚುನಾವಣೆ; ಜಿಲ್ಲೆಯಲ್ಲಿ ಶೇ. 77.66  ರಷ್ಟು ಮತದಾನ ದಾಖಲು

ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆಯ ಮತದಾನವು ಅಕ್ಟೋಬರ್ 23...