ಬೀದರ್‌ | ಏಳನೇ ವೇತನ ಆಯೋಗ ಜಾರಿಗೆ ಸರ್ಕಾರಿ ನೌಕರರ ಆಗ್ರಹ

Date:

Advertisements

ಸರಕಾರಿ ನೌಕರರ ಏಳನೇ ವೇತನ ಆಯೋಗ ಜಾರಿ ಸೇರಿ ವಿವಿಧ ಬೇಡಿಕೆ ಈಡೇರಿಕೆಗೆ ತಾಲೂಕು ಸರಕಾರಿ ನೌಕರರ ಸಂಘ ಒತ್ತಾಯಿಸಿದೆ.

ಭಾಲ್ಕಿ ಪಟ್ಟಣದ ತಹಸೀಲ್ ಕಚೇರಿಯಲ್ಲಿ ಶುಕ್ರವಾರ ತಾಲೂಕು ಸರಕಾರಿ ನೌಕರರ ಸಂಘದ ಅಧ್ಯಕ್ಷ ರಾಜಪ್ಪ ಪಾಟೀಲ್ ನೇತೃತ್ವದಲ್ಲಿ‌ ಪ್ರತಿಭಟನೆ ನಡೆಸಿ ಮುಖ್ಯಮಂತ್ರಿಗಳಿಗೆ ಬರೆದ ಹಕ್ಕೊತ್ತಾಯ ಪತ್ರವನ್ನು ತಹಸೀಲ್ದಾರ್ ಅವರಿಗೆ ಸಲ್ಲಿಸಿದರು.

ʼಆರನೇ ವೇತನ ಆಯೋಗ ಜಾರಿಗೊಂಡು 2022ಕ್ಕೆ ಐದು ವರ್ಷ ಪೂರ್ಣಗೊಂಡಿವೆ. ಆದರೆ ಇದುವರೆಗೂ ವೇತನ, ಭತ್ಯೆ ಪರಿಷ್ಕರಣೆಗೊಂಡಿಲ್ಲ. ಹೀಗಾಗಿ ಕೂಡಲೇ ಏಳನೇ ವೇತನ ಆಯೋಗ ಜಾರಿಗೊಳಿಸಬೇಕು.
ಜತೆಗೆ ನೂತನ ಪಿಂಚಣಿ ಯೋಜನೆ ರದ್ದುಪಡಿಸುವಂತೆ ಹೋರಾಟ ಮಾಡಿಕೊಂಡು ಬರಲಾಗುತ್ತಿದೆ’ ಎಂದರು.

Advertisements

ʼಕಾಂಗ್ರೆಸ್ ಪಕ್ಷ ಚುನಾವಣೆ ಪ್ರಣಾಳಿಕೆಯಲ್ಲಿ ಹಳೆ ಪಿಂಚಣಿ ಯೋಜನೆ ಜಾರಿಗೊಳಿಸುವ ಭರವಸೆ ನೀಡಿತು. ಆದರೆ, ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದು ವರ್ಷ ಕಳೆದರೂ ಕೂಡ ನೂತನ ಪಿಂಚಣಿ ಯೋಜನೆ ರದ್ದು ಪಡಿಸಿಲ್ಲ. ಜತೆಗೆ ಆರೋಗ್ಯ ಸಂಜೀವಿನಿ ಯೋಜನೆ ಕೂಡ ಅನುಷ್ಠಾನಗೊಂಡಿಲ್ಲ. ಕೂಡಲೇ ಸರಕಾರ ಸರಕಾರಿ ನೌಕರರ ಎಲ್ಲ ಬೇಡಿಕೆಗಳನ್ನು ಈಡೇರಿಸಬೇಕುʼ ಎಂದು ಒತ್ತಾಯಿಸಿದರು.

ಈ ಸುದ್ದಿ ಓದಿದ್ದೀರಾ? ಗದಗ | ಮೂಲಭೂತ ಸೌಕರ್ಯಗಳಿಲ್ಲದೆ ಸೊರಗುತ್ತಿವೆ ಅಂಗನವಾಡಿಗಳು; ಮುಕ್ತಿ ಯಾವಾಗ?

ಈ ಸಂದರ್ಭದಲ್ಲಿ ತಾಲೂಕು ಸರಕಾರಿ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಸೂರ್ಯಕಾಂತ ಸುಂಟೆ, ಪ್ರಮುಖರಾದ ದತ್ತು ಕಾಟಕರ್, ಬಸವರಾಜ ಮರೆ, ನಾಗಭೂಷಣ ಮಾಮಡಿ, ಕುಪೇಂದ್ರ ಜಗಶೆಟ್ಟೆ, ಪ್ರಕಾಶ ಮಹಾಗಾಂವೆ, ವಿಶ್ವನಾಥ, ಸಹಾದೇವ, ಶಿವಕುಮಾರ, ಅರವಿಂದ ಪಾಟೀಲ್, ಅಶೋಕ ಕುಂಬಾರ, ತಾನಾಜಿ, ರವಿ, ಉತ್ತಮ, ಅಶೋಕ ಬಿರಾದಾರ್, ಅಶೋಕ ತಾಂಬೂಳೆ ಸೇರಿದಂತೆ ಹಲವರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X