ವಿಜಯನಗರ | ತಿಮ್ಮಾಪೂರ, ಎನ್‌ ಟಿ ಶ್ರೀನಿವಾಸ್ ಅವರಿಗೆ ಸಚಿವ ಸ್ಥಾನ ನೀಡಲು ಆಗ್ರಹ

Date:

ಹಲವು ಬಾರಿ ಸಚಿವರಾಗಿ ಉತ್ತಮ ಆಡಳಿತ ನೀಡಿರುವ ಮತ್ತು ಮಾದಿಗ ಸಮುದಾಯದ ಹಿರಿಯ ರಾಜಕಾರಣಿ ಆರ್.ಬಿ ತಿಮ್ಮಾಪೂರ ಮತ್ತು ಕೂಡ್ಲಿಗಿ ಶಾಸಕ ಡಾ. ಎನ್.ಟಿ ಶ್ರೀನಿವಾಸ್ ಅವರಿಗೆ ಸಚಿವ ಸ್ಥಾನ ನೀಡಬೇಕು ಎಂದು ಕಾಂಗ್ರೆಸ್ ಎಸ್‌ಸಿ ಮಹಿಳಾ ಘಟಕದ ವಿಜಯನಗರ ಜಿಲ್ಲಾಧ್ಯಕ್ಷೆ ವಿಶಾಲಾಕ್ಷಿ ರಾಜಣ್ಣ ಗುಡೆಕೋಟೆ ಒತ್ತಾಯಿಸಿದರು.

- Advertisement -

ಹೊಸಪೇಟೆಯಲ್ಲಿ ಭಾನುವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿ ಅವರು, “ಆರ್.ಬಿ ತಿಮ್ಮಾಪೂರ ಅವರು ಈ ಹಿಂದೆ ಕಾಂಗ್ರೆಸ್ ನೇತೃತ್ವದ ಸರ್ಕಾರದಲ್ಲಿ ಸಚಿವರಾಗಿ ನಾನಾ ಖಾತೆಗಳ ಜವಾಬ್ದಾರಿ ನಿರ್ವಹಿಸಿದ್ದಾರೆ. ಪರಿಶಿಷ್ಟ ಜಾತಿಯಲ್ಲಿ ಎಡಗೈ ಸಮುದಾಯದ ಪ್ರಭಾವಿ ಮುಖಂಡರಾಗಿದ್ದಾರೆ. ಈ ಬಾರಿ ಸಚಿವ ಸ್ಥಾನ ನೀಡಬೇಕು. ಆ ಮೂಲಕ ಮಾದಿಗ ಸಮುದಾಯಕ್ಕೆ ಅವಕಾಶ ಒದಗಿಸಬೇಕು” ಎಂದು ಆಗ್ರಹಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

“ಕೂಡ್ಲಿಗಿ ವಿಧಾನಸಭಾ ಕ್ಷೇತ್ರದಿಂದ ಈ ಬಾರಿ ಅಭೂತಪೂರ್ವ ಗೆಲುವಿನೊಂದಿಗೆ ಕ್ಷೇತ್ರವನ್ನು ಕಾಂಗ್ರೆಸ್ ತೆಕ್ಕೆಗೆ ತಂದುಕೊಟ್ಟಿರುವ ಎನ್.ಟಿ ಶ್ರೀನಿವಾಸ್‌ ಅವರಿಗೆ ವಿಜಯನಗರ ಜಿಲ್ಲೆಯ ಪ್ರಾತಿನಿಧ್ಯದಲ್ಲಿ ಸಚಿವಸ್ಥಾನ ನೀಡಬೇಕು” ಎಂದು ಒತ್ತಾಯಿಸಿದರು.

ಈ ಸುದ್ದಿ ಓದಿದ್ದೀರಾ? ಚಿಕ್ಕಮಗಳೂರು | ಬಿರುಗಾಳಿ ಸಹಿತ ಭಾರೀ ಮಳೆ; ಮರ ಬಿದ್ದು ಸ್ಕೂಟಿ ಸವಾರ ಸಾವು

ಸುದ್ದಿಗೋಷ್ಠಿಯಲ್ಲಿ ಕಾಂಗ್ರೆಸ್ ಎಸ್‌ಟಿ ಘಟಕದ ವಿಜಯನಗರ ಜಿಲ್ಲಾ ಉಪಾಧ್ಯಕ್ಷ ಹಾಗೂ ವಕೀಲ ಡಿ ಎಚ್ ದುರುಗೇಶ್, ಎನ್ಎಸ್‌ಯುಐ ಬಳ್ಳಾರಿ ಜಿಲ್ಲಾ ಅಧ್ಯಕ್ಷ ಕೆ ತಿಪ್ಪೇಸ್ವಾಮಿ, ಕಾಂಗ್ರೆಸ್ ಎಸ್‌ಸಿ ಘಟಕದ ತಾಲೂಕು ಅಧ್ಯಕ್ಷ ಬಿ ನಾಗರಾಜ, ಗ್ರಾಮ ಪಂಚಾಯಿತಿ ಸದಸ್ಯ ಬಿ ಸೋಮಶೇಖರ, ಮುಖಂಡರಾದ ಮನೋಹರ ಹೆಗಡೆ, ಪ್ರಶಾಂತ್ ಜಿಲ್ಲೆಯ ಹೆಗ್ಗಾಳ್, ವೆಂಕಟೇಶ್ ಸೂಲದಹಳ್ಳಿ, ಪ್ರಕಾಶ್ ಹೆಗ್ದಾಳ್, ಜೆ ರವಿಕುಮಾರ್, ಹನುಮಂತ ಗುಡೇಕೋಟೆ, ಓಬಳಶೇಟ್ಟಿಹಳ್ಳಿ ಕೊಟ್ರೇಶ್‌ ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ತೆರಿಗೆ ವಸೂಲಾತಿಯಲ್ಲಿ ಲೋಪ: ಇಬ್ಬರು ಪಿಡಿಓ ಅಮಾನತು, ಮೂವರು ಕರವಸೂಲಿಗಾರರ ವಜಾಕ್ಕೆ ವಿಚಾರಣೆ

ತೆರಿಗೆ ವಸೂಲಾತಿಯಲ್ಲಿ ನಿರ್ಲಕ್ಷ್ಯ ಹಾಗೂ ಕರ್ತವ್ಯ ಲೋಪ ಎಸಗಿರುವುದು ಪತ್ತೆಯಾದ ಹಿನ್ನೆಲೆಯಲ್ಲಿ...

ಹಾವೇರಿ | ಪುಸ್ತಕ ಓದಿನ ಪರಂಪರೆಯನ್ನು ಮರು ಕಟ್ಟಬೇಕಾಗಿದೆ: ಶೋಭಾ ಜಾಗಟಗೇರಿ

"ಮುಷ್ಠಿಯಲ್ಲಿ ಇರುವ ಮೊಬೈಲ್ ಜೀವನ ಪಾಠವನ್ನ್ನು ಕಲಿಸುವುದಕ್ಕಿಂತ ದಾರಿ ತಪ್ಪಿಸುವ ಕೆಲಸ...

ಉತ್ತರ ಕನ್ನಡ | 3.24 ಲಕ್ಷ ಪಡಿತರ ಚೀಟಿ ಸದಸ್ಯರ ಇ-ಕೆವೈಸಿ ಬಾಕಿ; ಅಕ್ಟೋಬರ್ 20ರೊಳಗೆ ಪೂರ್ಣಗೊಳಿಸಲು ಮನವಿ

ಉತ್ತರ ಕನ್ನಡ ಜಿಲ್ಲೆಯ ಪಡಿತರ ಚೀಟಿಗಳಲ್ಲಿರುವ 5,69,044 ಸದಸ್ಯರು ಐದು ವರ್ಷಗಳ...

ಉಡುಪಿ | ಇಂದ್ರಾಳಿ ಮಂಚಿ ನೂರಾನಿ ಮಸೀದಿಗೆ ನೂತನ ಆಡಳಿತ ಸಮಿತಿ ರಚನೆ

ಉಡುಪಿ ತಾಲೂಕಿನ ಇಂದ್ರಾಳಿ ಮಂಚಿ ನೂರಾನಿ ಮಸೀದಿಯ ಆಡಳಿತ ಸಮಿತಿಗೆ ನೂತನ...