ರಾಯಚೂರು | ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣ ಮರು ತನಿಖೆಗೆ ಆಗ್ರಹ

Date:

  • ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ನಿಜವಾದ ಆರೋಪಿಗಳು ಯಾರೆಂಬುದು ಗೊತ್ತಿಲ್ಲ
  • ನೈಜ ತಪ್ಪಿತಸ್ಥರನ್ನು ರಕ್ಷಿಸಲು ತನಿಖಾ ಸಂಸ್ಥೆ ಹೊರಟಿರುವುದು ಸಂಶಯಕ್ಕೆ ಎಡೆಮಾಡಿಕೊಟ್ಟಿದೆ

ಧರ್ಮಸ್ಥಳದಲ್ಲಿ ಯುವತಿ ಸೌಜನ್ಯಳ ಮೇಲೆ ಅತ್ಯಾಚಾರ ನಡೆಸಿ ಕೊಲೆಗೈದ ಪ್ರಕರಣವನ್ನು ಮರು ತನಿಖೆಗೆ ಒಳಪಡಿಸಬೇಕು ಎಂದು ಸಿಂಧನೂರು ಪ್ರಗತಿಪರ ಒಕ್ಕೂಟ ಒತ್ತಾಯಿಸಿದೆ.

ನಗರದ ಪ್ರವಾಸಿ ಮಂದಿರದಿಂದ ಮಿನಿ ವಿಧಾನಸೌಧವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿ ಸೌಜನ್ಯಳಿಗೆ ನ್ಯಾಯ ದೊರಕಿಸಿಕೊಡುವಂತೆ ಘೋಷಣೆ ಕೂಗಿ ಸಿಂಧನೂರು ತಹಶೀಲ್ದಾರ್ ಅವರಿಗೆ ಮನವಿ ಪತ್ರ ಸಲ್ಲಿಸಿದರು.

ಈ ಸಂದರ್ಭದಲ್ಲಿ ಪ್ರತಿಭಟನೆ ಉದ್ದೇಶಿಸಿ ಮಾತನಾಡಿದ ಡಿ.ಎಚ್. ಕಾಂಬ್ಳಿ, “ಉಜಿರೆಯ ಎಸ್‌ಡಿಎಂ ಕಾಲೇಜಿನ ದ್ವಿತೀಯ ಪಿಯು ವಿದ್ಯಾರ್ಥಿನಿ ಸೌಜನ್ಯಾ 2012ರ ಅ.9 ರಂದು ನಾಪತ್ತೆಯಾಗಿ ಮರುದಿನ ಶವವಾಗಿ ಪತ್ತೆಯಾಗಿದ್ದಳು. ಈ ಪ್ರಕರಣದ ತನಿಖೆಯ ಹೊಣೆ ಹೊತ್ತಿದ್ದ ಸಿಬಿಐ, ಆರೋಪಿ ಸಂತೋಷ್‌ ರಾವ್‌ ಎಂಬಾತನನ್ನು ಬಂಧಿಸಿ 11 ವರ್ಷಗಳ ನಂತರ ಆತನನ್ನು ನಿರ್ದೋಷಿ ಎಂದು ಬಿಡುಗಡೆಗೊಳಿಸಿದೆ. ಆದರೆ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಮಾಡಿದ ನಿಜವಾದ ಆರೋಪಿಗಳು ಯಾರು ಎನ್ನುವುದು ಇಲ್ಲಿಯವರೆಗೂ ಪತ್ತೆಯಾಗಿಲ್ಲ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

“ಸೌಜನ್ಯ ಪೋಷಕರು, ಮಾವ ಸೇರಿದಂತೆ ಸಂಬಂಧಿಕರೆಲ್ಲರೂ ಪೊಲೀಸರು, ಸಿಐಡಿ ಹಾಗೂ ಸಿಬಿಐ ತನಿಖಾಧಿಕಾರಿಗಳ ಮುಂದೆ ತಮಗೆ ಸಂಶಯವಿರುವ ಆರೋಪಿಗಳನ್ನು ಹೆಸರಿಸಿದ್ದು, ಆದರೆ ಸಿಬಿಐ ಅವರ ಹೆಸರುಗಳನ್ನು ಪ್ರಸ್ತಾಪಿಸದೇ ನೆಪಮಾತ್ರಕ್ಕೆ ನಿರಪರಾಧಿ ವ್ಯಕ್ತಿಯೊಬ್ಬರನ್ನು ಪ್ರಕರಣದಲ್ಲಿ ಸಿಲುಕಿಸಿ, ಪ್ರಭಾವಿಗಳಾದ ನೈಜ ತಪ್ಪಿತಸ್ಥರನ್ನು ರಕ್ಷಿಸಲು ತನಿಖಾ ಸಂಸ್ಥೆ ಹೊರಟಿರುವುದು ಸಂಶಯಕ್ಕೆ ಎಡೆಮಾಡಿಕೊಟ್ಟಿದೆ” ಎಂದು ಅವರು ಕಾಂಬ್ಳಿ ಆರೋಪಿಸಿದರು ..

“ಸಿಬಿಐನ ಈ ಲೋಪವನ್ನು ರಾಜ್ಯ ಹೈಕೋರ್ಟ್ ಬಲವಾಗಿ ಟೀಕಿಸಿದ್ದು, ಛೀಮಾರಿ ಹಾಕಿದೆ. ಧರ್ಮಸ್ಥಳ ಸೇರಿದಂತೆ ಸುತ್ತಮುತ್ತಲಿನಲ್ಲಿ ಕಳೆದ ಹತ್ತಾರು ವರ್ಷಗಳಿಂದ 40ಕ್ಕೂ ಅಧಿಕ ಅತ್ಯಾಚಾರ, ಕೊಲೆ, ಅಪಹರಣ, ಅಸಹಜ ಸಾವು ಮುಂತಾದ ಹಲವಾರ ದುಷ್ಕೃತ್ಯಗಳು ನಿರಂತರವಾಗಿ ನಡೆಯುತ್ತಿವೆ. ಆದರೆ ಅಲ್ಲಿ ನಡೆದಿರುವ ಯಾವ ಪ್ರಕರಣದಲ್ಲೂ ಅಪರಾಧಿಗಳನ್ನು ಬಂಧಿಸಿ ಶಿಕ್ಷೆಗೊಳಪಡಿಸಿದ ಉದಾಹರಣೆಗಳಿಲ್ಲ. ಬದಲಿಗೆ ಆರೋಪಿಗಳಿಗೆ ಪೊಲೀಸರೇ ರಕ್ಷಣೆ ನೀಡಿರುವುದು ಮೇಲ್ನೋಟಕ್ಕೆ ಕಂಡು ಬರುತ್ತದೆ. ಈ ಎಲ್ಲದರ ಸುತ್ತ ಅಲ್ಲಿನ ಬಲಿಷ್ಠ ಪಟ್ಟಭದ್ರ ಶಕ್ತಿಗಳು ಇರುವ ಅನುಮಾನವನ್ನು ಬಾಧಿತರ ಕುಟುಂಬಗಳು ವ್ಯಕ್ತಪಡಿಸಿವೆ. ಈ ಹಿಂದೆ ಅಲ್ಲಿ ನಡೆದ ವೇದವಲ್ಲಿ ಟೀಚರ್ ಅತ್ಯಾಚಾರ ಕೊಲೆ ಪ್ರಕರಣ, ಪದ್ಮಲತಾಳ ಅಪಹರಣ ಮತ್ತು ಕೊಲೆಗಳಲ್ಲೂ ನಿಜವಾದ ಅಪರಾಧಿಗಳನ್ನು ಬಂಧಿಸಲಾಗಿಲ್ಲ” ಎಂದು ಅವರು ಕಾಂಬ್ಳಿ ಕಿಡಿಕಾರಿದರು.

ಕೂಡಲೇ ರಾಜ್ಯ ಸರ್ಕಾರ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಮರುತನಿಖೆಗೆ ಒಳಪಡಿಸಬೇಕು ಎಂದು ಒತ್ತಾಯಿಸಿ ಸೌಜನ್ಯಳ ಕೊಲೆಗೆ ಸಂಬಂಧಿಸಿ ಅಲ್ಲಿಯ ಪ್ರಭಾವಿ ಧಾರ್ಮಿಕ ಕುಟುಂಬದ ಮುಖಂಡರೇ ಭಾಗಿಯಾಗಿದ್ದಾರೆ ಅವರು ದೂರಿದರು.

ಈ ಸುದ್ದಿ ಓದಿದ್ದೀರಾ? ರಾಯಚೂರು | ಡಾ. ಜಯಪ್ರಕಾಶ ಬೆಟ್ಟದೂರು ಮೇಲೆ ಹಾಡಹಗಲೆ ಗುಂಡಿನ ದಾಳಿ

ಈ ಸಂದರ್ಭದಲ್ಲಿ ಕರ್ನಾಟಕ ಜನಶಕ್ತಿ ಮುಖಂಡ ಬಸವರಾಜ್ ಬಾದರ್ಲಿ, ಸಮದ ಚೌದ್ರಿ, ಜಮಾತ್ ಮುಖಂಡ ಹುಸೇನ್ ಸಾಬ್, ಮರಿಯಮ್ಮ ಪರಶುರಾಮ್ ಇನ್ನಿತರರು ಉಪಸ್ಥಿತರಿದ್ದರು.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಫ್ರಿ ಬಸ್ | ತೀರ್ಥಯಾತ್ರೆ ನೆಪದಲ್ಲಿ ಮಹಿಳೆಯರು ಎಲ್ಲೆಲ್ಲೋ ಹೋಗ್ತಿದ್ದಾರೆ; ಬಿಜೆಪಿ ಪ್ರಚಾರಕಿ, ನಟಿ ಶೃತಿ ವಿವಾದಾತ್ಮಕ ಹೇಳಿಕೆ

ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರು ಮಹಿಳೆಯರ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ...

ಚಾಮರಾಜನಗರ | ದೇಶದ ಪ್ರಜಾಪ್ರಭುತ್ವ, ಸಂವಿಧಾನ ರಕ್ಷಣೆಗೆ ಕಾಂಗ್ರೆಸ್‌ ಬೆಂಬಲಿಸಿ: ಮಾನವ ಬಂಧುತ್ವ ವೇದಿಕೆ

ದೇಶದ ಪ್ರಜಾಪ್ರಭುತ್ವ, ಸಂವಿಧಾನದ ರಕ್ಷಣೆಗಾಗಿ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷವನ್ನು ಜನರು...

ಮತದಾರರಿಗೆ ಉಚಿತ ಆಹಾರ ನೀಡಲು ಹೋಟೆಲ್‌ಗಳಿಗೆ ಹೈಕೋರ್ಟ್ ಅನುಮತಿ

ಚುನಾವಣೆಯ ದಿನ ಮತದಾನ ಮಾಡಿದವರಿಗೆ ಉಚಿತ ಆಹಾರ ವಿತರಣೆ ಮಾಡಲು ಬೃಹತ್...

ಇಲ್ಲಾ ಗೌಡ್ರೇ, ಇದು ನ್ಯಾಯ ಅಲ್ಲ, ಇನ್ನು ನಿಲ್ಲಿಸ್ಬಿಡಿ ಸಾಕು: ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ಮನವಿ

ಪ್ರಜ್ವಲ್‌ ರೇವಣ್ಣನ ವಿಡಿಯೋಗಳನ್ನ ನೋಡಿ ಹಾಸನದ ಜನ ಬೆಚ್ಚಿ ಬಿದ್ದಿದ್ದಾರೆ. ಮೊದಮೊದಲು...