ರಾಯಚೂರು | ಸರ್ಕಾರಿ ಶಾಲೆಗಳಿಗೆ ಖಾಯಂ ಶಿಕ್ಷಕರ ನೇಮಕಾತಿಗೆ ಆಗ್ರಹ

Date:

ಕಲ್ಯಾಣ ಕರ್ನಾಟಕ ಭಾಗದ ಶಾಲೆಗಳಲ್ಲಿ ಕೊರತೆ ಇರುವ 18,000 ಶಿಕ್ಷಕರ ಹುದ್ದೆಗಳಿಗೆ ಖಾಯಂ ಶಿಕ್ಷಕರನ್ನು ನೇಮಕ ಮಾಡುವಂತೆ ಆಗ್ರಹಿಸಿ ಸರ್ಕಾರಿ ಶಾಲೆ ಅಭಿವೃದ್ಧಿ ಸಮಿತಿ ಆಹೋರಾತ್ರಿ ಧರಣಿ ಸತ್ಯಾಗ್ರಹ ನಡೆಸಲಿದೆ ಎಂದು ಸಮಿತಿ ಸಂಚಾಲಕ ವಿದ್ಯಾ ಪಾಟೀಲ್ ತಿಳಿಸಿದ್ದಾರೆ.

- Advertisement -

ರಾಯಚೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, “ಕಲ್ಯಾಣ ಕರ್ನಾಟಕದಲ್ಲಿ ಒಟ್ಟು 9,247 ಕಿರಿಯ, ಹಿರಿಯ ಹಾಗೂ ಪ್ರೌಢಶಾಲೆಗಳಿವೆ. ಇದರಲ್ಲಿ 12.50 ಲಕ್ಷ ಮಕ್ಕಳು ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ಆದರೆ, ಹಿರಿಯ ಪ್ರಾಥಮಿಕ ಶಾಲೆಯಲ್ಲಿ 14,000 ಶಿಕ್ಷಕರ ಕೊರತೆ ಇದ್ದರೆ, ಹಿರಿಯ ಮತ್ತು ಪ್ರೌಢಶಾಲೆಗಳಲ್ಲಿ 3,200 ಶಿಕ್ಷಕರ ಕೊರತೆ ಇದೆ. ಒಟ್ಟು 18,000 ಶಿಕ್ಷಕರ ಕೊರತೆ ಇದ್ದು, ವಿದ್ಯಾರ್ಥಿಗಳ ಶಿಕ್ಷಣಕ್ಕೆ ಸಮಸ್ಯೆಯಾಗಿದೆ” ಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

“ನಿರಂತರವಾಗಿ ಸರ್ಕಾರದ ಮೇಲೆ ಒತ್ತಡ ಹೇರಿದರೂ ಇಲ್ಲಿವರೆಗೂ ಯಾವುದೇ ಕ್ರಮ ಕೈಗೊಂಡಿಲ್ಲ. ಅತಿಥಿ ಶಿಕ್ಷಕರಿಂದ ಈ ಶಾಲೆಗಳನ್ನು ನಿರ್ವಹಿಸಲಾಗುತ್ತಿದೆ. ದೇವದುರ್ಗ ಒಂದೇ ತಾಲೂಕಿನಲ್ಲಿ 80 ಶಾಲೆಗಳು ಶೂನ್ಯ ಶಿಕ್ಷಕರ ಅವಸ್ಥೆಯಲ್ಲಿವೆ” ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

“ಶಾಲೆಗಳಿಗೆ ಖಾಯಂ ಶಿಕ್ಷಕರ ನೇಮಕಾತಿಗಾಗಿ ಅಗ್ರಹಿಸಿದ್ದ ಜ.25ರಿಂದ ಅಹೋ ರಾತ್ರಿ ಧರಣಿ ನಡೆಸಲಾಗುತ್ತದೆ. ಕಲ್ಯಾಣ ಕರ್ನಾಟಕ ಭಾಗದಲ್ಲಿ ಶಿಕ್ಷಣದ ಮಟ್ಟ ಅತ್ಯಂತ ಕೆಳ ಹಂತದಲ್ಲಿದೆ. ಅನೇಕ ತಾಲೂಕುಗಳು ಶಿಕ್ಷಣದಲ್ಲಿ ಹಿಂದುಳಿದಿವೆ. ಎಸ್‌ಎಸ್‌ಎಲ್‌ಸಿ ಫಲಿತಾಂಶ ನಿರೀಕ್ಷಿತ ಮಟ್ಟದಲ್ಲಿಲ್ಲ. ಇದಕ್ಕೆ ಶಿಕ್ಷಕರ ಕೊರತೆಯೇ ಮೂಲ ಕಾರಣವಾಗಿದೆ” ಎಂದು ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿರಸಿ | ರಾಜೇಂದ್ರ ಸಿರ್ಸಿಕರ್‌ಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೌರವ

ಶಿರಸಿ: ಪ್ರಾಣಿ-ಪಕ್ಷಿಗಳ ರಕ್ಷಣೆ ಮತ್ತು ಪುನರ್ವಸತಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿರಸಿಯ ರಾಜೇಂದ್ರ...

ಧಾರವಾಡ | ಪೊಲೀಸ್ ಹೆಸರೇಳಿ ರೂ. 15,700 ವಂಚನೆ: ನಾಲ್ಕು ಬೈಕ್‍ಗಳು ನಗದು ವಶ

ಪೊಲೀಸ್ ಹೆಸರೇಳಿ ವ್ಯಕ್ತಿಯೊಬ್ಬರಿಂದ ₹15,700 ಹಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ...

ಗೋಕರ್ಣ | ಕುಡ್ಲೆ ಕಡಲತೀರದಲ್ಲಿ ಸಮುದ್ರ ಸುಳಿಗೆ ಸಿಲುಕಿದ್ದ ಬೆಂಗಳೂರಿನ ಇಬ್ಬರು ಪ್ರವಾಸಿಗರ ರಕ್ಷಣೆ

ಗೋಕರ್ಣ: ಸಮುದ್ರದಲ್ಲಿ ಈಜುತ್ತಿದ್ದ ವೇಳೆ ಅಪಾಯಕಾರಿ ಸುಳಿಗೆ ಸಿಲುಕಿದ ಬೆಂಗಳೂರಿನ ಇಬ್ಬರು...