ಕಲಬುರಗಿ | ಆಂದೋಲಾ ಗ್ರಾಮಕ್ಕೆ ಪಿಯುಸಿ ಕಾಲೇಜು ಮಂಜೂರಾತಿಗೆ ಒತ್ತಾಯ: ಶಿವಕುಮಾರ್ ಗೋಲಾ

Date:

ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲೂಕಿನ ಆಂದೋಲಾ ಗ್ರಾಮಕ್ಕೆ ಪಿಯುಸಿ ಕಾಲೇಜು ಮಂಜೂರು ಮಾಡಬೇಕು ಎಂದು ದಲಿತ ಸೇನೆ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶಿವಕುಮಾರ್ ಗೋಲಾ ಒತ್ತಾಯಿಸಿದ್ದಾರೆ.

- Advertisement -

ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡಿರುವ ಅವರು, “ಗ್ರಾಮಕ್ಕೆ ಪಿಯುಸಿ ಕಾಲೇಜು ಮಂಜೂರು ಮಾಡಬೇಕೆಂಬುದು ಹಲವಾರು ವರ್ಷಗಳ ಬೇಡಿಕೆಯಾಗಿದೆ. ಕಾಲೇಜು ಮಂಜೂರು ಮಾಡಿಸಲು ತಾಲೂಕಿನ ಶಾಸಕ, ಕೆಕೆಆರ್‌ಡಿಬಿ ಅಧ್ಯಕ್ಷ ಡಾ. ಅಜಯ್ ಸಿಂಗ್ ಅವರು ಹೆಚ್ಚಿನ ಮುತುವರ್ಜಿ ವಹಿಸಬೇಕು” ಎಂದು ಆಗ್ರಹಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಡಾ. ಟಿ.ಎಸ್.‌ ಚನ್ನೇಶ್‌ ಸರಣಿ | ವೈದ್ಯಕೀಯ ನೊಬೆಲ್‌...

ನಮ್ಮ ಮೆದುಳು, ಭಾವನೆಗಳನ್ನು, ವರ್ತನೆಗಳನ್ನು ಮತ್ತು ದೈಹಿಕ ಕಾರ್ಯಗಳನ್ನು ಹೇಗೆ ನಿಯಂತ್ರಿಸುತ್ತದೆ ಎಂಬುದನ್ನು ಸಂಶೋಧನೆಯಿಂದ ಬಿಡಿಸಿಟ್ಟು 2026ರ ವೈದ್ಯಕೀಯ ನೊಬೆಲ್‌ ಪ್ರಶಸ್ತಿಗೆ ಪಾತ್ರರಾದ ಮೂವರು ಸಂಶೋಧಕರು ಮತ್ತು ಸಂಶೋಧನೆಯ ಸುತ್ತಲಿನ ವಿಶ್ಲೇಷಣಾತ್ಮಕ ಬರಹ ಈ...

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

“ಆಂದೋಲಾ ಗ್ರಾಮ ಹೋಬಳಿ ಕೇಂದ್ರವಾಗಿದೆ. ಜಿಲ್ಲಾ ಪಂಚಾಯತಿ ಮತಕ್ಷೇತ್ರವಾಗಿದೆ. ಉಪ ತಹಶಿಲ್ದಾರರ ಕಚೇರಿ, ಕ್ರಷ್ಣ ಗ್ರಾಮೀಣ ಬ್ಯಾಂಕ್, ಸರ್ಕಾರಿ ಆಸ್ಪತ್ರೆ, ಪಶು ವೈದ್ಯಕೀಯ ಆಸ್ಪತ್ರೆ, ಯುನಾನಿ ಆಸ್ಪತ್ರೆ, ಸರ್ಕಾರಿ ಪ್ರೌಢಶಾಲೆ – ಹೀಗೆ ಹಲವಾರು ಸಾರ್ವಜನಿಕರಿಗೆ ಅನುಕೂಲವಾಗುವಂತ ಎಲ್ಲ ಸೌಕರ್ಯಗಳೂ ಇಲ್ಲಿವೆ. ಪಿಸಿಯು ಕಾಲೇಜು ಮಂಜೂರು ಮಾಡಿದರೆ, ಸುತ್ತಲಿನ ಸುಮಾರು 15 ಹಳ್ಳಿಗಳ ಬಡ ವಿದ್ಯಾರ್ಥಿಗಳಿಗೆ ಅನುಕೂಲವಾಗಲಿದೆ” ಎಂದು ಅವರು ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಗಲಕೋಟೆ | ಕ್ರೀಡಾಪಟುಗಳಿಗೆ ಸರ್ಕಾರಿ ನೌಕರಿಯಲ್ಲಿ ಶೇ.2 ಮೀಸಲಾತಿ ಸ್ವಾಗತಾರ್ಹ: ಮುತ್ತಣ್ಣ ಮೇತ್ರಿ

ಕ್ರೀಡಾ ಕ್ಷೇತ್ರದಲ್ಲಿ ಸಾಧನೆ ಮಾಡಿರುವ ಕ್ರೀಡಾಪಟುಗಳಿಗೆ ಸರ್ಕಾರಿ ನೌಕರಿಗಳ ನೇಮಕಾತಿಯಲ್ಲಿ ಶೇ.2ರಷ್ಟು...

ವಿಜಯಪುರ | ಉದ್ಯೋಗ ಖಾತ್ರಿ ಪೂರ್ಣ ಕೂಲಿ ಪಾವತಿಗೆ ಆಗ್ರಹಿಸಿ ಅಧಿಕಾರಿಗಳಿಗೆ ಮನವಿ

ಉದ್ಯೋಗ ಖಾತ್ರಿ ಯೋಜನೆಯಡಿ ಕೆಲಸ ಮಾಡಿರುವ ಕೂಲಿಕಾರರಿಗೆ ಅವರ ಶ್ರಮಕ್ಕೆ ತಕ್ಕಂತೆ...

ಕೊಡಗು | ಫಾರಂ-7 ದುರುಪಯೋಗ: ಬಿಜೆಪಿ ಬೂತ್ ಅಧ್ಯಕ್ಷ ಸೇರಿ ಐವರ ವಿರುದ್ಧ ಎಫ್‌ಐಆರ್!

ಕೊಡಗು ಜಿಲ್ಲೆಯ ಬ್ಯಾಡಗೊಟ್ಟ ಗ್ರಾಮದಲ್ಲಿ ಮತದಾರರ ಹೆಸರುಗಳನ್ನು ಅಳಿಸಲು ಫಾರಂ-7 ಅರ್ಜಿಗಳನ್ನು...