ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ನಗರಾಭಿವೃದ್ಧಿ ಮತ್ತು ನಗರ ಯೋಜನಾ ಪ್ರಾಧಿಕಾರಗಳ ಒಕ್ಕೂಟವನ್ನು ರಚಿಸಲಾಗಿದ್ದು, ಇದರ ಅಧ್ಯಕ್ಷರಾಗಿ ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸದಾಶಿವ ಉಳ್ಳಾಲ್ ಅವರನ್ನು ಹಾಗೂ ಸಂಚಾಲಕರಾಗಿ ಸುಳ್ಯ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಕೆ ಎಂ ಮುಸ್ತಫ ಮತ್ತು ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ದಿನಕರ್ ಹೇರೂರು ಅವರನ್ನು ಆಯ್ಕೆ ಮಾಡಲಾಗಿದೆ.
ಸಭೆಯಲ್ಲಿ ಪ್ರಸ್ತುತ ಜಾರಿಯಲ್ಲಿರುವ ವಲಯ ನಿಯಮಾವಳಿಗಳು ಕರಾವಳಿ ಭಾಗದಲ್ಲಿ ಅಡಚಣೆಗಳನ್ನು ಸೃಷ್ಟಿಸುತ್ತಿವೆ ಎಂಬ ವಿಷಯಕ್ಕೆ ಸ್ಪಷ್ಟತೆ ನೀಡಲಾಯಿತು. ತುಂಡು ಭೂಮಿ, ಅರಣ್ಯ ಬಫರ್, ಕಾನ, ಬಾಣೆ, ಅಕ್ರಮ ಹಾಗೂ ಸಕ್ರಮ ಪ್ಲಾಟಿಂಗ್ ಸಂಬಂಧಿತ ಸಮಸ್ಯೆಗಳಿಂದಾಗಿ ʼಕನ್ವರ್ಷನ್ʼ, ಏಕ ನಿವೇಶನ ವಿನ್ಯಾಸ, ಬಹು ನಿವೇಶನ ಮಾದರಿಗಳ ಲೇಔಟ್ ಅಭಿವೃದ್ಧಿಗೆ ಕಾನೂನು ತೊಡಕುಗಳಿವೆ ಎಂದು ಅಭಿಪ್ರಾಯ ವ್ಯಕ್ತವಾಯಿತು. ಹೀಗಾಗಿ, ಈ ಭಾಗದ ವಿಶೇಷ ಭೌಗೋಳಿಕ ಹಾಗೂ ಸಾಂಸ್ಕೃತಿಕ ಪರಿಸ್ಥಿತಿಗೆ ಅನುಗುಣವಾಗಿರುವ ಪ್ರತ್ಯೇಕ ವಲಯ ನಿಯಮಾವಳಿ ರೂಪಿಸುವಂತೆ ಸರ್ಕಾರದ ಗಮನ ಸೆಳೆಯುವ ನಿರ್ಧಾರ ತೆಗೆದುಕೊಳ್ಳಲಾಯಿತು.
ಇದನ್ನೂ ಓದಿ: ಮಂಗಳೂರು | ಮುನೀರ್ ಕಾಟಿಪಳ್ಳ ಮೇಲೆ ಮತ್ತೊಂದು FIR ಹಾಕಿದ ಮಂಗಳೂರು ನಗರ ಪೊಲೀಸ್ ಕಮಿಷನರ್
ಮಂಗಳೂರಿನ ಡಿಸಿಸಿ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಗಿದೆ. ಸಭೆಯಲ್ಲಿ ಮೂಡಬಿದ್ರಿಯ ಯೋಜನಾ ಪ್ರಾಧಿಕಾರ ಅಧ್ಯಕ್ಷ ಹರ್ಷವರ್ಧನ್ ಪಡಿವಾಳ್, ಪುತ್ತೂರಿನ ಅಮಳ ರಾಮಚಂದ್ರ, ಬಂಟ್ವಾಳದ ಬೇಬಿ ಕುಂದರ್ ಸೇರಿದಂತೆ ಉಭಯ ಜಿಲ್ಲೆಗಳ ಎಲ್ಲ ನಗರಾಭಿವೃದ್ಧಿ ಮತ್ತು ಯೋಜನಾ ಪ್ರಾಧಿಕಾರಗಳ ಅಧ್ಯಕ್ಷರು ಹಾಗೂ ಸದಸ್ಯರು ಉಪಸ್ಥಿತರಿದ್ದರು.