ಬೀದರ | ಭ್ರಷ್ಟಾಚಾರ ಆರೋಪ; ಬಿಸಿಎಂ ಜಿಲ್ಲಾ ಕಲ್ಯಾಣಾಧಿಕಾರಿ ಅಮಾನತಿಗೆ ಆಗ್ರಹ

Date:

  • ಬಯೋಮೆಟ್ರಿಕ್ ಹಾಜರಾತಿ ಅನ್ವಯ ಆಹಾರ ಸಾಮಾಗ್ರಿ ಒದಗಿಸದೆ ಅಕ್ರಮ ಆರೋಪ
  • ಹಿಂದೆ ಸೇವೆ ಸಲ್ಲಿಸಿದ ಎಲ್ಲ ಕಡೆಯೂ ಅಧಿಕಾರಿ ಮೇಲೆ ಭ್ರಷ್ಟಚಾರದ ಆರೋಪವಿದೆ

ಬೀದರ್ ಜಿಲ್ಲಾ ಹಿಂದುಳಿದ ವರ್ಗಗಳ ಇಲಾಖೆ ಕಲ್ಯಾಣಾಧಿಕಾರಿ ಸದಾಶಿವ ಎಸ್ ಬಡಗೇರ್ ಅವರು ಇಲಾಖೆಯ ಆದೇಶಗಳನ್ನು ಗಾಳಿಗೆ ತೂರಿ ಅಕ್ರಮ ವ್ಯವಹಾರ ಎಸಗಿ ಸರ್ಕಾರದ ಹಣ ಲಪಟಾಯಿಸಿರುವುದು ಮೇಲ್ನೋಟಕ್ಕೆ ಕಂಡು ಬಂದಿದ್ದು, ಈ ಅಧಿಕಾರಿಯನ್ನು ಕೂಡಲೇ ಅಮಾನತುಗೊಳಿಸಿ ಅವರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು ಎಂದು ಪ್ರಜಾಪ್ರಭುತ್ವ ಸಮಿತಿ ಆಗ್ರಹಿಸಿದೆ.

ಪ್ರಜಾಪ್ರಭುತ್ವ ಸಮಿತಿಯ ಸಂಸ್ಥಾಪಕ ಅಧ್ಯಕ್ಷ ಗಗನ್ ಫುಲೆ ನೇತೃತ್ವದಲ್ಲಿ ಬೀದರ್‌ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಂ ಶಿಲ್ಪಾ ಅವರಿಗೆ ಹಕ್ಕೊತ್ತಾಯ ಪತ್ರವನ್ನು ಸಲ್ಲಿಸಿದ್ದಾರೆ.

ಹಿಂದುಳಿದ ವರ್ಗಗಳ ಇಲಾಖೆಯ ಮೆಟ್ರಿಕ್ ಪೂರ್ವ ಮತ್ತು ನಂತರ ಬಾಲಕರ ವಸತಿ ನಿಲಯದ ಎಲ್ಲ ಮಕ್ಕಳಿಗೆ ಬಯೋಮೆಟ್ರಿಕ್ ಹಾಜರಾತಿ ಅನ್ವಯ ಆಹಾರ ಸಾಮಾಗ್ರಿ ಒದಗಿಸುವಂತೆ ಇಲಾಖೆ ಆಯುಕ್ತರ ಆದೇಶವಿದೆ. ಆದರೆ, ಬೀದರ್‌ ಜಿಲ್ಲೆಯ ಬಿಸಿಎಂ ಜಿಲ್ಲಾ ಕಲ್ಯಾಣಾಧಿಕಾರಿ ಸದಾಶಿವ ಬಡಗೇರ್ ಅವರು ಸರ್ಕಾರದ ಆದೇಶ ಪಾಲಿಸದೆ ಹಿಂದಿನಂತೆ ಮ್ಯಾನ್ಯುವಲ್ ಹಾಜರಾತಿ ಮೂಲಕ ವಿದ್ಯಾರ್ಥಿಗಳಿಗೆ ಆಹಾರ ಸಾಮಾಗ್ರಿ ವಿತರಿಸಿ ಸುಳ್ಳು ಬಿಲ್ ಸೃಷ್ಟಿಸಿದ್ದಾರೆ ಎಂದು ಆರೋಪಿಸಿದ್ದಾರೆ.

ಗಡಿ ಜಿಲ್ಲೆ ಬೀದರ್‌ ಮೊದಲೇ ಶೈಕ್ಷಣಿಕವಾಗಿ ಹಿಂದುಳಿದಿದೆ. ಗ್ರಾಮೀಣ ಭಾಗದ ವಿದ್ಯಾರ್ಥಿಗಳ ಶೈಕ್ಷಣಿಕ ಗುಣಮಟ್ಟ ಹೆಚ್ಚಳಕ್ಕೆ ಸರ್ಕಾರ ಹಲವು ಯೋಜನೆ ಜಾರಿಗೊಳಿಸಿ ವಿದ್ಯಾರ್ಥಿಗಳಿಗೆ ಸೌಲಭ್ಯಗಳನ್ನು ಒದಗಿಸುತ್ತಿದೆ. ಆದರೆ, ಸರ್ಕಾರದ ನಿಯಮಗಳನ್ನು ಗಾಳಿಗೆ ತೂರಿ ಬಡ ವಿದ್ಯಾರ್ಥಿಗಳಿಗೆ ಸೌಕರ್ಯದಿಂದ ವಂಚಿಸಿ ಹಣ ಲೂಟಿ ಹೊಡೆಯುತ್ತಿರುವ ಕಾರಣ ವಸತಿ ನಿಲಯದ ವಿದ್ಯಾರ್ಥಿಗಳಿಗೆ ಮೌಲ್ಯ ಶಿಕ್ಷಣದಿಂದ ವಂಚಿತರಾಗಿ ಮಾಡುತ್ತಿದ್ದಾರೆ ಎಂದು ದೂರಿದ್ದಾರೆ.

ಈ ಸುದ್ದಿ ಓದಿದ್ದೀರಾ? ಕೊಪ್ಪಳ | ಉದ್ಯೋಗ ಖಾತ್ರಿ ಯೋಜನೆ ಸಮರ್ಪಕ ಜಾರಿಗೆ ಕೂಲಿ ಕಾರ್ಮಿಕರ ಆಗ್ರಹ

ಜಿಲ್ಲಾ ಬಿಸಿಎಂ ಕಲ್ಯಾಣಧಿಕಾರಿ ಸದಾಶಿವ ಬಡಗೇರ್ ಅವರು ಈ ಹಿಂದೆ ಸೇವೆ ಸಲ್ಲಿಸಿದ ಎಲ್ಲ ಕಡೆಯೂ ಭ್ರಷ್ಟಚಾರ ನಡೆಸಿದ ಆರೋಪವಿದೆ. ಮಕ್ಕಳ ಕಲಿಕೆಗೆ ಸೇರಬೇಕಾದ ಸರ್ಕಾರದ ಹಣ ಇಲಾಖೆ ಅಧಿಕಾರಿಗಳ ಮನೆ ಸೇರಿದರೆ ಜಿಲ್ಲೆಯ ಶೈಕ್ಷಣಿಕ ಅಭಿವೃದ್ಧಿಯಾಗಲು ಸಾಧ್ಯವೇ ಎಂದು ಪ್ರಶ್ನಿಸಿದ್ದಾರೆ.

ಇಂಥ ಭ್ರಷ್ಟ ಅಧಿಕಾರಿಗಳಿಂದ ಜಿಲ್ಲೆಯ ಶಿಕ್ಷಣ ಕುಂಠಿತವಾಗುತ್ತಿದ್ದು ಅಲ್ಲದೆ ಜಿಲ್ಲೆಗೆ ಕಪ್ಪು ಚುಕ್ಕೆ ಬರುತ್ತಿದೆ. ಕೂಡಲೇ ಬಿಸಿಎಂ ಇಲಾಖೆಯ ಜಿಲ್ಲಾ ಕಲ್ಯಾಣಾಧಿಕಾರಿ ನಡೆಸಿದ ಅಕ್ರಮ ಅವ್ಯವಹಾರದ ಬಗ್ಗೆ ಕೂಲಂಕುಷವಾಗಿ ತನಿಖೆ ನಡೆಸಿ ಅಮಾನತುಗೊಳಿಸಿ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ.

ಈ ಸಂದರ್ಭದಲ್ಲಿ ಪ್ರಜಾ ಪ್ರಭುತ್ವ ಸಮಿತಿಯ ಪದಾಧಿಕಾರಿಗಳಾದ ಶಿವಕುಮಾರ್, ಜೈಪ್ರಕಾಶ, ಅನ್ವರ್ ಹಾಗೂ ನಾಗಾರ್ಜುನ ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೈಸೂರು | ಕಾಡಂಚಿನ ಗ್ರಾಮದಲ್ಲಿ ಶಾಸಕ ದರ್ಶನ್ ಗ್ರಾಮ ವಾಸ್ತವ್ಯ

ನಂಜನಗೂಡು ತಾಲೂಕಿನ ಕಾಡಂಚಿನ ಗ್ರಾಮದಲ್ಲಿ ಶಾಸಕ ದರ್ಶನ್ ಧ್ರುವನಾರಾಯಣ್‌ ಗ್ರಾಮ ವಾಸ್ತವ್ಯ...

ಕಲಬುರಗಿ | ಹೈ-ಕ ಭಾಗದ ಸಾಹಿತಿಗಳೆಂಬ ಹಣೆಪಟ್ಟಿ ಏಕೆ: ಡಾ. ಚಿದಾನಂದ ಸಾಲಿ

ದಲಿತ ಸಾಹಿತಿಗಳು ಅಂತ ಇರುವ ಹಾಗೆ, ಬ್ರಾಹ್ಮಣ ಕತೆಗಾರರು ಎಂಬ ಹೆಸರು...

ಮದ್ಯದಂಗಡಿ ಬೇಡ – ನೀರು, ಆರೋಗ್ಯ, ಆಹಾರ ಕೊಡಿ; ಸ್ಲಂ ಜನಾಂದೋಲನ ಒತ್ತಾಯ

ನಾಗರೀಕ ಸಮಾಜಕ್ಕೆ ಬೇಕಿರುವುದು ನೀರು, ನೈರ್ಮಲ್ಯ, ಆರೋಗ್ಯ ಮತ್ತು ಆಹಾರವೇ ಹೊರತು,...

ರಾಯಚೂರು | 9 ವರ್ಷಗಳಿಂದ ಅಂಗನವಾಡಿ ಕಟ್ಟಡಕ್ಕಿಲ್ಲ ಉದ್ಘಾಟನೆ ಭಾಗ್ಯ

ರಾಯಚೂರು ಜಿಲ್ಲೆ ಲಿಂಗಸಗೂರು ತಾಲೂಕಿನ ರೋಡಲ ಬಂಡಾ ಗ್ರಾಮದಲ್ಲಿ ಅಂಗನವಾಡಿ ಕಟ್ಟಡ...