ಕೋಲಾರ ಲೋಕಸಭಾ ಕ್ಷೇತ್ರಕ್ಕೆ ಮಾದಿಗ ಸಮುದಾಯದ ಅಭ್ಯರ್ಥಿ ಘೋಷಣೆಗೆ ಆಗ್ರಹ

Date:

Advertisements

2024ನೇ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವು ಕೋಲಾರ ಲೋಕಸಭಾ ಕ್ಷೇತ್ರಕ್ಕೆ ಮಾದಿಗ ಸಮುದಾಯದ ಅಭ್ಯರ್ಥಿಯನ್ನು ಘೋಷಣೆ ಮಾಡಬೇಕೆಂದು ಕರ್ನಾಟಕ ರಾಜ್ಯ ಮಾದಿಗ ಸಮಾಜದ ಪ್ರಚಾರ ಸಮಿತಿ ರಾಜಾಧ್ಯಕ್ಷ ಉಡಚಪ್ಪ ಮಾಳಗಿ ಒತ್ತಾಯಿಸಿದರು.

ಈ ಕುರಿತು ಹಾವೇರಿಯಲ್ಲಿ ಪತ್ರಿಕಾ ಹೇಳಿಕೆ ನೀಡಿದ ಅವರು, “ನಮ್ಮ ಮಾದಿಗ ಸಮುದಾಯ ಕಳೆದ 2023ರ ವಿಧಾನಸಭಾ ಚುನಾವಣೆಯಲ್ಲಿ ಸದಾಶಿವ ಆಯೋಗದ ವರದಿ ತಿರಸ್ಕರಿಸಿ ಸಂವಿಧಾನ ಬಾಹಿರವಾಗಿ ಮೀಸಲಾತಿಯನ್ನು ಜಾರಿ ಮಾಡಿದ್ದೇವೆಂದು ನಂಬಿಸಿದ ಬಿಜೆಪಿಯನ್ನು ತಿರಸ್ಕರಿಸಿ ಇಡೀ ಮಾದಿಗ ಜನಾಂಗ ರಾಜ್ಯದ ಎಲ್ಲ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಿದ ಪರಿಣಾಮ 136 ಸ್ಥಾನಗಳಲ್ಲಿ ಕಾಂಗ್ರೆಸ್ ಬಂದಿರುವುದು ತಮ್ಮ ಗಮನಕ್ಕಿದೆ” ಎಂದು ಹೇಳಿದರು.

“ಪ್ರಸ್ತುತ 2024ನೇ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಸಾಮಾಜಿಕ ನ್ಯಾಯವನ್ನು ಎತ್ತಿಹಿಡಿಯಲು ಈಗಾಗಲೇ 03 ಸ್ಥಾನಗಳನ್ನು ಹೊಲೆಯ ಸಮುದಾಯಕ್ಕೆ ಘೋಷಣೆ ಮಾಡಿ 01 ಸ್ಥಾನ ಮಾದಿಗ ಸಮುದಾಯಕ್ಕೆ ಘೋಷಣೆ ಮಾಡಿರುತ್ತಾರೆ. ಕೋಲಾರದಲ್ಲಿ ಎರಡು ಅಸ್ಪೃಶ್ಯ ಜಾತಿಗಳ ಸಹೋದರರ ಮಧ್ಯೆ ತಿಕ್ಕಾಟ ನಡೆಯುವಂತೆ ಮಾಡಲು ಷಡ್ಯಂತರ ಮಾಡುತ್ತಾ ಮಾದಿಗ ಸಮುದಾಯಕ್ಕೆ ಟಿಕೆಟ್ ತಪ್ಪಿಸಿ ಮಾದಿಗರನ್ನು ಕಾಂಗ್ರೆಸ್ ಪಕ್ಷದಿಂದ ದೂರ ಮಾಡಲು ಹುನ್ನಾರ ನಡೆಸುತ್ತಿದ್ದಾರೆ” ಎಂದು ಆರೋಪಿಸಿದರು.

Advertisements

ಈ ಸುದ್ದಿ ಓದಿದ್ದೀರಾ? ಬೀದರ್‌ | ಇದು ಸಂಸದ ಭಗವಂತ ಖೂಬಾಗೆ ಕೊನೆ ಚುನಾವಣೆ: ಸಚಿವ ಈಶ್ವರ ಖಂಡ್ರೆ

“ನಾವು ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಎಐಸಿಸಿ ಮುಖಂಡೆ ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರಿಗೆ ವಿನಂತಿಸಿಕೊಳ್ಳುವುದೇನೆಂದರೆ ಮಾದಿಗ ಸಮುದಾಯದ ಅಭ್ಯರ್ಥಿಗೆ ಕೋಲಾರ ಕ್ಷೇತ್ರದ ಟಿಕೆಟ್ ಘೋಷಣೆ ಮಾಡಬೇಕು‌. ಒಂದು ವೇಳೆ ಮಾದಿಗರಿಗೆ ಟಿಕೆಟ್ ನೀಡದಿದ್ದರೆ ಇದರ ಪರಿಣಾಮವನ್ನು ರಾಜ್ಯದ ಎಲ್ಲ ಕ್ಷೇತ್ರಗಳಲ್ಲಿ ಮಾದಿಗ ಜನಾಂಗದ ಮತದಾರರ ಆಕ್ರೋಶ ಎದುರಿಸಬೇಕಾಗುತ್ತದೆ” ಎಂದು ಉಡಚಪ್ಪ ಮಾಳಗಿ ಕಾಂಗ್ರೆಸ್‌ಗೆ ಎಚ್ಚರಿಕೆ ನೀಡಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | SBUDA ದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ : ಸುಂದರೇಶ್

ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ...

ಮಾಲೂರು | ‘ಕೆಲಸ ನೀಡದಿದ್ದರೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಳ್ಳುತ್ತೇವೆ’!

ಮಾಲೂರಿನ ವರ್ಗಾ ಕಂಪನಿ ಮುಚ್ಚುವುದನ್ನು ವಿರೋಧಿಸಿ ಇಂದು ಮಾಲೂರಿನಲ್ಲಿ ಕಾರ್ಮಿಕರು ಬೃಹತ್...

ಗಣೇಶ ಚತುರ್ಥಿಗೆ ಬೆಂಗಳೂರು-ಮಂಗಳೂರು ನಡುವೆ ವಿಶೇಷ ರೈಲು

ಗಣೇಶ ಚತುರ್ಥಿ ಹಬ್ಬದ ಹಿನ್ನೆಲೆ ಪ್ರಯಾಣಿಕರ ಅನುಕೂಲಕ್ಕಾಗಿ ರೈಲ್ವೆ ಇಲಾಖೆಯು ಬೆಂಗಳೂರು-ಮಂಗಳೂರು...

ಬೆಳ್ತಂಗಡಿ | ಸೌಜನ್ಯ ಪ್ರಕರಣ ಮರು ತನಿಖೆಗೆ ವಿವಿಧ ಸಂಘಟನೆಗಳ ಮುಖಂಡರ ಒತ್ತಾಯ

ಬೆಂಗಳೂರಿನಿಂದ ಅಂಬೇಡ್ಕರ್ ಸೇನೆ ರಾಜ್ಯಾಧ್ಯಕ್ಷ ತ್ರಿಮೂರ್ತಿ ಅವರ ನೇತೃತ್ವದಲ್ಲಿ ವಿವಿಧ ಸಂಘಟನೆಗಳ...

Download Eedina App Android / iOS

X