ಮೈಸೂರು | ಆದಿವಾಸಿಗಳಿಗೆ ಸಮಯಕ್ಕೆ ಸರಿಯಾಗಿ ಪೌಷ್ಠಿಕ ಆಹಾರ ವಿತರಣೆಗೆ ಆಗ್ರಹ

Date:

Advertisements

ಆದಿವಾಸಿಗಳಿಗೆ ನೀಡುತ್ತಿದ್ದ ಪೌಷ್ಟಿಕ ಆಹಾರ ಸಾಮಗ್ರಿಗಳನ್ನು ಪ್ರತಿ ತಿಂಗಳು ಸರಿಯಾದ ಸಮಯಕ್ಕೆ ವಿತರಿಸುವಂತೆ ಜನ ಅಧಿಕಾರ ಸುರಕ್ಷಾ ಸಮಿತಿ ಆಗ್ರಹಿಸಿದೆ.

ಮೈಸೂರು ಜಿಲ್ಲೆಯ ಎಚ್‌.ಡಿ ಕೋಟೆಯಲ್ಲಿ ಪ್ರತಿಭಟನೆ ನಡೆಸಿರುವ ಸಂಘಟನೆಯ ಕಾರ್ಯಕರ್ತರು ತಹಶೀಲ್ದಾರ್‌ಗೆ ಹಕ್ಕೊತ್ತಾಯ ಪತ್ರ ಸಲ್ಲಿಸಿದ್ದಾರೆ. “ರಾಜ್ಯದ 8 ಜಿಲ್ಲೆಗಳಲ್ಲಿ ವಾಸಿಸುತ್ತಿರುವ 11 ಬುಡಕಟ್ಟು ಪಂಗಡಗಳಾದ ಕೊರಗ, ಜೇನುಕುರುಬ, ಸೋಲಿಗ, ಎರವ, ಕಾಡುಕುರುಬ, ಮಲೆಕುಡಿಯ, ಸಿದ್ದಿ, ಹಸಲರು, ಗೌಡಲು, ಗೊಂಡ ಮತ್ತು ಬೆಟ್ಟಕುರುಬ ಜನಾಂಗದ ಕುಟುಂಬಗಳಿಗೆ ಈ ಹಿಂದೆ ಪೌಷ್ಟಿಕ ಆಹಾರ ಯೋಜನೆಯನ್ನು ವಾರ್ಷಿಕ ಆರು ತಿಂಗಳುಗಳಿಗೆ ನೀಡಲಾಗುತ್ತಿತ್ತು. ನಾಲ್ಕೈದು ವರ್ಷಗಳ ನಿರಂತರ ಹೋರಾಟದ ನಂತರ ಇದನ್ನು 12 ತಿಂಗಳಿಗೆ ವಿಸ್ತರಿಸಲಾಗಿದೆ” ಎಂದು ತಿಳಿಸಿದ್ದಾರೆ.

“ಕಳೆದ ರಾಜ್ಯ ಬಜೆಟ್‌ನಲ್ಲಿ ಬುಡಕಟ್ಟು ಸಮುದಾಯಗಳಿಗೆ ಪೌಷ್ಠಿಕ ಆಹಾರ ಒದಗಿಸಲು ವಾರ್ಷಿಕವಾಗಿ 50 ಕೋಟಿ ರೂ.ಗಳನ್ನು ಒದಗಿಸಲಾಗುವುದು ಎಂದು ಸರ್ಕಾರ ಹೇಳಿತ್ತು. ಆದರೆ, ಬಜೆಟ್‌ ಅಧಿವೇಶನ ಮುಗಿದು ಆರು ತಿಂಗಳಾಗಿವೆ. ಕೇವಲ ಒಂದು ಬಾರಿ ಮಾತ್ರ ಪೌಷ್ಟಿಕ ಆಹಾರ ಸಾಮಗ್ರಿ ವಿತರಿಸಲಾಗಿದೆ” ಎಂದು ಆರೋಪಿಸಿದ್ದಾರೆ.

Advertisements

“ರಾಜ್ಯದ ಬಹುತೇಕ ಆದಿವಾಸಿ ಜನರು ಆರ್ಥಿಕವಾಗಿ, ಶೈಕ್ಷಣಿಕವಾಗಿ ಹಿಂದುಳಿದಿದ್ದಾರೆ. ತೀವ್ರ ಬಡತನದಲ್ಲಿ ಭೂಮಿಯು ಇಲ್ಲದೆ ಕೆಲವೊಮ್ಮೆ ಕೂಲಿಯೂ ಸಿಗದೇ ಬಹಳ ಸಂಕಷ್ಟದಲ್ಲಿ ಜೀವನ ನಡೆಸುತ್ತಿದ್ದಾರೆ. ಈ ಸಮುದಾಯದ ಜನರ ಅಪೌಷ್ಟಿಕತೆಯನ್ನು ಹೋಗಲಾಡಿಸುವುದಕ್ಕಾಗಿ ಅವರಿಗೆ ನೀಡುತ್ತಿದ್ದ ಪೌಷ್ಟಿಕ ಆಹಾರ ಸಾಮಗ್ರಿಗಳನ್ನು ವರ್ಷವಿಡೀ ಪ್ರತಿ ತಿಂಗಳು ಸರಿಯಾದ ಸಮಯಕ್ಕೆ ವಿತರಿಸಬೇಕು” ಎಂದು ಆಗ್ರಹಿಸಿದ್ದಾರೆ.

“ಪೌಷ್ಠಿಕ ಆಹಾರದ ಜೊತೆಗೆ ಇವರಿಗೆ ಶಿಕ್ಷಣ, ಆರೋಗ್ಯ, ಉದ್ಯೋಗ ಹಾಗೂ ಇನ್ನಿತರ ಮೂಲಭೂತ ಸೌಕರ್ಯಗಳನ್ನು ಒದಗಿಸಲು ಕ್ರಮ ಕೈಗೊಳ್ಳಲು ಸೂಕ್ತ ನೀತಿಗಳನ್ನು ರೂಪಿಸಬೇಕು” ಎಂದು ಒತ್ತಾಯಿಸಿದ್ದಾರೆ.

ಪ್ರತಿಭಟನೆಯಲ್ಲಿ ಮಹಿಳಾ ಸಂಘಟನೆಯ ಮುಖಂಡೆ ಸೀಮಾ ಜಿ.ಎಸ್, ಪುಷ್ಪ ಹಾಗೂ ಆದಿವಾಸಿ ಮುಖಂಡರುಗಳಾದ ದೇವಮ್ಮ, ಶಿರಮ್ಮ ,ಮಾರಮ್ಮ,ಸುಬ್ರಹ್ಮಣ್ಯಿ,ಮಾಚಮ್ಮ,ಮಲ್ಲಮ್ಮ ಭಾಗವಹಿದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ತೆಂಗಿನಕಾಯಿ ಕಳ್ಳತನ ಆರೋಪ: ವ್ಯಕ್ತಿಯ ಹತ್ಯೆ; ಆರೋಪಿಗಳ ಬಂಧನ

ತೆಂಗಿನಕಾಯಿ ಕಳ್ಳತನ ಮಾಡಿದ್ದಾನೆ ಎಂಬ ಕಾರಣಕ್ಕೆ ವ್ಯಕ್ತಿಯನ್ನು ಹತ್ಯೆ ಮಾಡಿರುವ ಘಟನೆ...

ಗದಗ | ಒಳಮೀಸಲಾತಿ ಅಂಗೀಕಾರ ಸ್ವಾಗತಾರ್ಹ: ಬಸವರಾಜ ಕಡೇಮನಿ

"ಒಳಮೀಸಲಾತಿ ಜಾರಿಗಾಗಿ ಒತ್ತಾಯಿಸಿ ಮೂವತ್ತೈದು ವರ್ಷಗಳ ನಿರಂತರ ಹೋರಾಟದ ಫಲದಿಂದ ರಾಜ್ಯ...

ಸಕಲೇಶಪುರ | ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣ ಬೆಂಬಲ ನೀಡಬೇಕು: ಬಿ ಆರ್‌ ಪಾಟೀಲ್

ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣವಾಗಿ ಬೆಂಬಲ ನೀಡಿದಾಗ ಮಾತ್ರ ವ್ಯಸನವನ್ನು...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

Download Eedina App Android / iOS

X