ಯಾದಗಿರಿ | ಅಕ್ರಮ ಮರಳು ಗಣಿಗಾರಿಕೆ ವಿರುದ್ಧ ಕಾನೂನು ಕ್ರಮಕ್ಕೆ ಆಗ್ರಹ

Date:

  • ಅಂಬೇಡ್ಕರ್ ಸ್ವಾಭಿಮಾನಿ ಸೇನೆಯಿಂದ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಕೆ
  • ಅಕ್ರಮಕ್ಕೆ ಕಂದಾಯ, ಪೊಲೀಸ್‌ ಇಲಾಖೆ ಅಧಿಕಾರಿಗಳ ಸಹಕಾರ ಆರೋಪ

ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಚೆನ್ನೂರು (ಜೆ) ಗ್ರಾಮದಲ್ಲಿ ನಡೆಯುತ್ತಿರುವ ಅಕ್ರಮ ಮರುಳು ಗಣಿಗಾರಿಕೆ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಅಂಬೇಡ್ಕರ್ ಸ್ವಾಭಿಮಾನಿ ಸೇನೆಯ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದು, ಯಾದಗಿರಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದ್ದಾರೆ.

“ಮರಳು ಗಣಿಗಾರಿಕೆಯಿಂದ ಹೊಳೆಯಾ ಅಂತರ್ಜಲ ಮಟ್ಟ ಕುಸಿಯುತ್ತಿದು, ನೈಸರ್ಗಿಕ ಸಂಪನ್ಮೂಲ ಲೂಟಿ ಆಗುತ್ತಿದೆ. ಟಿಪ್ಪರ್‌ ಲಾರಿಗಳ ಮೂಲಕ ಅಕ್ರಮವಾಗಿ ಮರಳು ಸಾಗಾಣಿಕೆ ಮಾಡುತ್ತಿದ್ದು, ಈ ಬಗ್ಗೆ ಪೊಲೀಸ್ ಇಲಾಖೆ ಮತ್ತು ಕಂದಾಯ ಇಲಾಖೆಗೆ ಮಾಹಿತಿ ಇದ್ದರೂ ಯಾವುದೇ ಕ್ರಮ ಕೈಗೊಳ್ಳದೆ ಕಣ್ಮುಚ್ಚಿ ಕುಳಿತಿದ್ದಾರೆ” ಎಂದು ಪ್ರತಿಭಟನಾಕಾರರು ಆರೋಪಿಸಿದರು.

“ಅಕ್ರಮವಾಗಿ ಮರಳು ದಂಧೆಕೋರರ ಜೊತೆಗೆ ಅಧಿಕಾರಿಗಳು ಕೂಡ ಶಾಮೀಲಾಗಿ ಅಕ್ರಮಕ್ಕೆ ಬೆಂಬಲ ನೀಡುತ್ತಿದ್ದಾರೆ. ಇದರಿಂದ ನದಿಯಲ್ಲಿ ದೊಡ್ಡ–ದೊಡ್ಡ ಹೊಂಡಗಳು ಬಿದ್ದು, ಅಂತರ್ಜಲ ಮಟ್ಟ ಕುಸಿಯುತ್ತಿದೆ. ನೈಸರ್ಗಿಕ ಸಂಪತ್ತು ಲೂಟಿ ಮಾಡಿ ನಿತ್ಯ ಆಕ್ರಮವಾಗಿ ಹಣ ಸಂಪಾದನೆ ಮಾಡುತ್ತಿದ್ದಾರೆ” ಎಂದು ದೂರಿದರು.

“ಜಿಲ್ಲಾಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಅಕ್ರಮ ಮರಳು ಗಣಿಗಾರಿಕೆ ನಡೆಸುತ್ತಿರುವವರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಬೇಕು” ಎಂದು ಒತ್ತಾಯಿಸಿದರು.

ಈ ಸುದ್ದಿ ಓದಿದ್ದೀರಾ? ಎಸ್‌ಸಿ/ಎಸ್‌ಟಿ ಗುತ್ತಿಗೆ ಮೀಸಲು ಮೊತ್ತ ₹50 ಲಕ್ಷ ದಿಂದ ₹1 ಕೋಟಿಗೆ ಹೆಚ್ಚಿಸಿ ರಾಜ್ಯ ಸರ್ಕಾರ ಆದೇಶ

ಪ್ರತಿಭಟನೆಯಲ್ಲಿ ಅಂಬೇಡ್ಕರ್ ಸ್ವಾಭಿಮಾನಿ ಸೇನೆ ಜಿಲ್ಲಾಧ್ಯಕ್ಷ ಕಾಶೀನಾಥ್ ನಾಟೇಕಾರ್, ಜಿಲ್ಲಾ ಸಂಘಟನಾ ಕಾರ್ಯದರ್ಶಿ ರಾಹುಲ್ ಕೊಲ್ಲೂರ್, ಗೌರವಧ್ಯಕ್ಷ ಮಲ್ಲಿಕಾರ್ಜುನ್ ಕುಮನೂರ್, ಯಾಡ್ಡಳ್ಳಿ ಹೋಬಳಿ ಘಟಕ ಅಧ್ಯಕ್ಷ ಮೌನೇಶ್, ಸದಸ್ಯರಾದ ಭೀಮರಾಯ, ಬಾಲು, ರಾಹುಲ್ ಕೊಲ್ಲೂರ್ ಹಾಗೂ ಇತರರು ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೊಪ್ಪಳ | ವಿಜಯನಗರ ಸಾಮ್ರಾಜ್ಯದ ಮೂಲ ನೆಲೆ ಕುಮ್ಮಟದುರ್ಗ; ಶಾಸಕ ಗಾಲಿ ಜನಾರ್ದನರೆಡ್ಡಿ

ವಿಶ್ವದ ಶ್ರೀಮಂತ ರಾಜ ಮನೆತನಗಳಲ್ಲಿ ಒಂದಾದ ಐತಿಹಾಸಿಕ ವಿಜಯನಗರ ಸಾಮ್ರಾಜ್ಯದ ಮೂಲ...

ವಿಜಯಪುರ | ಅಂಬೇಡ್ಕರ 67ನೇ ಮಹಾ ಪರಿನಿರ್ವಾಣ ಶೋಕ ಆಚರಿಸಿದ ದಲಿತ ವಿದ್ಯಾರ್ಥಿ ಪರಿಷತ್

ವಿಜಯಪುರ ನಗರದ ದಲಿತ ವಿದ್ಯಾರ್ಥಿ ಪರಿಷತ್ ಜಿಲ್ಲಾ ಕಚೇರಿಯಲ್ಲಿ ಡಾ. ಬಾಬಾ...

ರಾಷ್ಟ್ರದ ಭವಿಷ್ಯ ಯುವ ಸಮೂಹದ ಕೈಯಲ್ಲಿದೆ : ಮುಖ್ಯ ಆಯುಕ್ತ ತುಷಾರ್ ಗಿರಿನಾಥ್

"ರಾಷ್ಟ್ರದ ಭವಿಷ್ಯ ಯುವ ಸಮೂಹದ ಕೈಯಲ್ಲಿದ್ದು, ಎಲ್ಲರೂ ಮತದಾರರ ಪಟ್ಟಿಯಲ್ಲಿ ಸೇರ್ಪಡೆಯಾಗಿ...