ಬೀದರ್‌ | ಕೌಡಗಾಂವ್‌ನಲ್ಲಿ ಅಂಬೇಡ್ಕರ್‌-ಬಸವಣ್ಣ ಎರಡೂ ವೃತ್ತಗಳಿಗೆ ಅವಕಾಶ ಕಲ್ಪಿಸಲು ಆಗ್ರಹ

Date:

‌ಔರಾದ ತಾಲೂಕಿನ ಕೌಡಗಾಂವ್‌ ಗ್ರಾಮದಲ್ಲಿ ಡಾ.ಬಿ.ಆರ್.‌ಅಂಬೇಡ್ಕರ್ ಹಾಗೂ ಬಸವಣ್ಣನವರ ವೃತ್ತ ಮರು ಪ್ರತಿಷ್ಠಾಪನೆ ವಿಚಾರದಲ್ಲಿ ಪೊಲೀಸರನ್ನು ಬಲಿಪಶು ಮಾಡುವುದು ನಿಲ್ಲಿಸಬೇಕೆಂದು ಲಿಂಗಾಯತ ಸಮಾಜ ಯುವ ಸಂಘ ಒತ್ತಾಯಿಸಿದೆ.

- Advertisement -

ಈ ಕುರಿತು ಗ್ರಾಮಸ್ಥರಾದ ಮಹಾದೇವ ತರನಾಳೆ, ಶಿವಕುಮಾರ ತರನಾಳೆ, ಸುಭಾಷ ಮಲ್ಲಪನೋರ, ರಮೇಶ ಗಾಜಲ್ಲೆ ಮನವಿ ಪತ್ರಕ್ಕೆ ಸಹಿ ಹಾಕಿದ ಹಕ್ಕೊತ್ತಾಯ ಪತ್ರವನ್ನು ಲಿಂಗಾಯತ ಸಮಾಜ ಯುವ ಸಂಘದ ತಾಲೂಕಾಧ್ಯಕ್ಷ ವಿರೇಶ ಅಲಮಾಜೆ ನೇತ್ರತ್ವದಲ್ಲಿ ಔರಾದ ತಹಸೀಲ್ದಾರ್‌ ನಾಗಯ್ಯ ಹಿರೇಮಠ ಅವರಿಗೆ ಸಲ್ಲಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಸೆ.23 ‘ಭೀಮ ಸಂಕಲ್ಪ ದಿನ’: ಡಾ ಬಿ ಆರ್...

1917ರ ಸೆಪ್ಟೆಂಬರ್ 23ರಂದು ವಡೋದರದ ಆಲದ ಮರದ ಕೆಳಗೆ ಕುಳಿತಿದ್ದ ಯುವ ಅಂಬೇಡ್ಕರ್ ಅವರ ಬಳಿ ಅಧಿಕಾರವಿರಲಿಲ್ಲ, ದೊಡ್ಡ ಸಂಘಟನೆಯಿರಲಿಲ್ಲ. ಆದರೆ ಅನ್ಯಾಯವನ್ನು ಒಪ್ಪಿಕೊಳ್ಳದ ಮನಸ್ಸು ಮತ್ತು ಸಮಾಜವನ್ನು ಬದಲಿಸಬೇಕೆಂಬ ದೃಢ ಸಂಕಲ್ಪವಿತ್ತು....

ಸೌಜನ್ಯ ಪ್ರಕರಣ: ಪ್ರಭಾವಿಗಳ ಜೊತೆ ಲಜ್ಜೆ ಬಿಟ್ಟು ಹೆಜ್ಜೆ...

ತನಿಖಾಧಿಕಾರಿಗಳು ಹಣದ ಆಮಿಷಕ್ಕೆ ಒಳಗಾಗಿದ್ದರೇ ಅಥವಾ ಬಲಾಢ್ಯರ ಒತ್ತಡಕ್ಕೆ ಮಣಿದು ಸಾಕ್ಷ್ಯ ನಾಶ ಮಾಡಿ ಅಪರಾಧಿಗಳ ರಕ್ಷಣೆಗೆ ನಿಂತರೇ ಎಂಬ ಅನುಮಾನ ಸಾಮಾನ್ಯ ಜನರಿಗೂ ಬರುತ್ತಿರುವಾಗ ಕರ್ನಾಟಕದ ಬಹುತೇಕ ಸುದ್ದಿ ಮಾಧ್ಯಮಗಳು ಈ...

ಉತ್ತರ ಪ್ರದೇಶ | ಅಖಿಲೇಶ್ ‘ಧರ್ಮ ರಕ್ಷಣೆ’ಯ ಯುದ್ಧ...

ಉತ್ತರ ಪ್ರದೇಶದ ಯುವಜನತೆಯ (Gen Z) ಅಸಮಾಧಾನ, ನಿರುದ್ಯೋಗ ಸಮಸ್ಯೆ ಮತ್ತು ಬದಲಾಗುತ್ತಿರುವ ಜಾತಿ ಸಮೀಕರಣಗಳು ತಮಗೆ ಪೂರಕವಾಗಿವೆ ಎಂಬುದನ್ನು ಅಖಿಲೇಶ್ ಯಾದವ್ ಅರಿತಿದ್ದಾರೆ. ತಮ್ಮ ಪಕ್ಷ ಕೇವಲ "ಮುಸ್ಲಿಂ ಮತ್ತು ಯಾದವರ...

ಬೀದರ್ -ನಾಂದೇಡ್ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಹಿನ್ನಲೆ ರಸ್ತೆ ಬದಿಯಲ್ಲಿ ಅಂಬೇಡ್ಕರ್ ಹಾಗೂ ಬಸವೇಶ್ವರವರ ವೃತ್ತಗಳು ತೆರವುಗೊಳಿಸಿದ್ದರು. ಕಾಮಗಾರಿ ಬಳಿಕ ಗ್ರಾಮಸ್ಥರು ಡಾ. ಬಿ.ಆರ್ ಅಂಬೇಡ್ಕರ್ ಹಾಗೂ ಬಸವೇಶ್ವರ ವೃತ್ತಗಳು ಪುನಃ ಅದೇ ಸ್ಥಳದಲ್ಲಿ ನಿರ್ಮಿಸಿದ್ದಾರೆ. ಗ್ರಾಮಸ್ಥರು ಆ ಎರಡು ವೃತ್ತಗಳು ಕೂಡಿಸಿದ ಹಿನ್ನೆಲೆ ಪೊಲೀಸ್ ಸಿಬ್ಬಂದಿಯವರನ್ನು ಬಲಿಪಶು ಮಾಡುವ ಪ್ರಯತ್ನ ಖಂಡನೀಯ ಎಂದಿದ್ದಾರೆ.

“ಈ ಹಿಂದಿನಂತೆ ಕೌಡಗಾಂವ ಬಸ್ ನಿಲ್ದಾಣದ ಹತ್ತಿರ ಎರಡು ವೃತ್ತಗಳಿದ್ದು, ಗ್ರಾಮಸ್ಥರು ಪುನಃ ಅದೇ ರೀತಿಯಲ್ಲಿ ವೃತ್ತಗಳು ನಿರ್ಮಿಸಿರುತ್ತಾರೆ. ಪ್ರಯುಕ್ತ ಆ ಎರಡು ವೃತ್ತಗಳಿಗೆ ಅವಕಾಶ ಕಲ್ಪಿಸಿ ಕೋಮುಗಲಭೆ ಆಗದಂತೆ ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆ ಸೂಕ್ತ ಕ್ರಮ ಕೈಗೊಳ್ಳಬೇಕು. ಈ ವಿಚಾರದಲ್ಲಿ ಕೆಲವರು ಕೋಮುಗಲಭೆಗೆ ಪುಷ್ಠಿ ನೀಡುವಂತಹ ಕೆಲ ಪ್ರಯತ್ನಗಳು ನಡೆಸುತ್ತಿರುವುದು ದುರದೃಷ್ಟಕರ” ಎಂದರು.

“ಈ ವಿಚಾರದಲ್ಲಿ ತಾಲೂಕು ಆಡಳಿತ ಮುತುವರ್ಜಿ ವಹಿಸಿ ಯಾವುದೇ ರೀತಿಯ ಸಮಸ್ಯೆಗಳಾಗದಂತೆ ಅಗತ್ಯ ಕ್ರಮ ವಹಿಸಿ ಪೊಲೀಸ್ ಸಿಬ್ಬಂದಿಯವರನ್ನು ಬಲಿಪಶು ಮಾಡುತ್ತಿರುವುದು ನಿಲ್ಲಿಸಬೇಕು. ಇಲ್ಲವಾದಲ್ಲಿ ಜಿಲ್ಲೆಯಾದ್ಯಂತ ಉಗ್ರ ಹೋರಾಟ ಮಾಡಲಾಗುವುದು” ಎಂದು ಆಗ್ರಹಿಸಿದರು.

ಈ ಸುದ್ದಿ ಓದಿದ್ದೀರಾ? ಬೀದರ್‌ | ಗಡಿ ತಾಲೂಕಿನಲ್ಲೊಂದು ಕಣ್ಮನ ಸೆಳೆಯುವ ಮಾದರಿ ಅಂಗನವಾಡಿ ಕೇಂದ್ರ

ಈ ಸಂದರ್ಭದಲ್ಲಿ ಲಿಂಗಾಯತ ಸಮಾಜ ಯುವ ಸಂಘದ ತಾಲೂಕಾಧ್ಯಕ್ಷ ವಿರೇಶ ಅಲ್ಮಾಜೆ ಸೇರಿದಂತೆ ಪ್ರಮುಖರಾದ ಬಾಲಾಜಿ ದಾಮಾ, ಆಕಾಶ ಯಡವೆ, ಪ್ರಶಾಂತ ಚಿದ್ರೆ, ದಿಲೀಪ ಲದ್ದೆ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಾರವಾರ | ಪೌರಕಾರ್ಮಿಕರ ಸೇವೆ ಶ್ಲಾಘನೀಯ: ಪೌರಾಯುಕ್ತ ಜಗದೀಶ್ ಹುಲಗಜ್ಜೆ

ಕಾರವಾರ: ನಗರದ ಸ್ವಚ್ಛತೆ ಹಾಗೂ ಸಾರ್ವಜನಿಕರ ಆರೋಗ್ಯ ಕಾಪಾಡುವಲ್ಲಿ ಪೌರಕಾರ್ಮಿಕರ ಸೇವೆ...

ಗದಗ |  ಹೊಳೆಆಲೂರ-ಇಟಗಿ ಗ್ರಾಮಕ್ಕೆ ಬಸ್ ಚಾಲನೆ

ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ರೋಣ ವಿಭಾಗದ ಘಟಕದಿಂದ ಹೊಳೆಆಲೂರ-ಇಟಗಿ...

ಕಲಬುರಗಿಯಲ್ಲಿ ಸೆ.27ರಂದು ಬಸವಾದಿ ಶರಣರ ಹಿಂದೂ ಸಮಾವೇಶ : ಕನೇರಿ ಸ್ವಾಮೀಜಿಗೆ ಅನುಮತಿ ಬೇಡ

ಕಲಬುರಗಿಯಲ್ಲಿ ಸೆ. 27ರಂದು ಹಮ್ಮಿಕೊಳ್ಳಲಾಗಿರುವ ಕನೇರಿ ಮಠದ ಅದೃಶ್ಯ ಕಾಡಸಿದ್ಧೇಶ್ವರ ಸ್ವಾಮೀಜಿ...

ಗದಗ | ಸಹಕಾರಿ ಸಂಘದ ವಾರ್ಷಿಕ ಸಭೆ

ಗದಗ ಪಟ್ಟಣದಲ್ಲಿ ಕಳೆದ ೨೦ ವರ್ಷಗಳಿಂದ ಕಾರ್ಯನಿರ್ವಹಿಸುತ್ತಿರುವ ಸರಕಾರಿ ಪ್ರೌಢ ಶಾಲಾ...