ಬೀದರ್‌ | ನಗರ ಸಾರಿಗೆ ಬಸ್‌ ಮಾರ್ಗ ಬದಲಾಯಿಸಲು ಆಗ್ರಹ

Date:

ಬೀದರ ನಗರದಲ್ಲಿ ಸಂಚರಿಸುವ ನಗರ ಸಾರಿಗೆಯ ಎಲ್ಲ ಬಸ್‌ಗಳು ಡಾ.ಬಿ.ಆರ್.ಅಂಬೇಡ್ಕರ್ ಮುಖ್ಯ ವೃತ್ತದ ಮೂಲಕ ಹಾದು ಹೋಗುವಂತೆ ಕ್ರಮ ಕೈಗೊಳ್ಳಬೇಕೆಂದು ಎಂದು ಕರ್ನಾಟಕ ಯುವ ರಕ್ಷಣಾ ವೇದಿಕೆ ಕಾರ್ಯಕರ್ತರು ಆಗ್ರಹಿಸಿದರು.

- Advertisement -

ಈ ಕುರಿತು ವೇದಿಕೆಯ ಜಿಲ್ಲಾಧ್ಯಕ್ಷ ಗುರುದಾಸ ಅಮದಲಪಾಡ ನೇತ್ರತ್ವದಲ್ಲಿ ಕಲ್ಯಾಣ ಕರ್ನಾಟಕ ಸಾರಿಗೆ ಸಂಸ್ಥೆಯ ವಿಭಾಗೀಯ ನಿಯಂತ್ರಣಾಧಿಕಾರಿಗಳಿಗೆ ಹಕ್ಕೊತ್ತಾಯ ಪತ್ರ ಸಲ್ಲಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

“ನಗರ ಸಾರಿಗೆಯ ಎಲ್ಲ ಬಸ್‌ಗಳು ತಹಸೀಲ್ದಾರ್‌ ಕಛೇರಿ, ಜಿಲ್ಲಾ ನ್ಯಾಯಾಲಯ ಕಚೇರಿ, ಭಗತ್‌ ಸಿಂಗ್‌ ವೃತ್ತದ ಎದುರುಗಡೆ ಮಾರ್ಗವಾಗಿ ಬಸವೇಶ್ವರ ವೃತ್ತಕ್ಕೆ ತೆರಳುತ್ತಿವೆ. ಆದರೆ, ನಗರದ ಹೃದಯ ಭಾಗವಾಗಿರುವ ಡಾ.ಬಿ.ಆರ್.ಅಂಬೇಡ್ಕ‌ರ್ ವೃತ್ತದ ಸುತ್ತಲಿನ ಸಾರ್ವಜನಿಕರಿಗೆ ಬಸ್‌ ಇಲ್ಲದೆ ತೊಂದರೆಯಾಗುತ್ತಿದೆ. ಹೀಗಾಗಿ ಇಲಾಖೆಯ ಮೇಲಾಧಿಕಾರಿಗಳು ಕೂಡಲೇ ಬಸ್ ಮಾರ್ಗ ಬದಲಾಯಿಸಬೇಕು” ಎಂದು ಒತ್ತಾಯಿಸಿದರು.

“ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಸಿಬ್ಬಂದಿಗಳು ತಮ್ಮ ಸಂಸ್ಥೆಯ ನೀತಿ ನಿಯಮಗಳು ಪಾಲನೆ ಮಾಡದೆ ಮನ ಬಂದಂತೆ ಬಸ್ ಚಲಾವಣೆ ಮಾಡುತ್ತಿದ್ದಾರೆ. ವಡಗಾಂವ -ಚಿಂತಾಕಿ ಬೀದರ್ ಹಾಗೂ ಕರಂಜಿ-ಬೀದರ್ ಮಾರ್ಗಮಧ್ಯೆ ಸಂಚರಿಸುವ ಬಸ್‌ಗಳು ಜನವಾಡ ರಸ್ತೆಯಲ್ಲಿರುವ ಬಸ್‌ ನಿಲ್ದಾಣಕ್ಕೆ ವಾಪಸ್‌ ಬರುವಾಗ ಅಡ್ಡದಾರಿಯಿಂದ ಬರುತ್ತಿವೆ. ಈ ʼರಾಂಗ್‌ ರೂಟ್ʼ ಬಸ್ ಚಾಲನೆಯಿಂದ ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ” ಎಂದು ದೂರಿದರು.

ಈ ಬಗ್ಗೆ ಸಾರಿಗೆ ಸಂಸ್ಥೆಯ ಮೇಲಾಧಿಕಾರಿಗೂ ಕೂಡಲೇ ಈ ವಿಷಯದ ಬಗ್ಗೆ ಗಮನ ಹರಿಸಿ ಇಲಾಖೆಯ ನಿಯಮದಂತೆ ಬಸ್‌ ಓಡಿಸಲು ಸಿಬ್ಬಂದಿಗಳಿಗೆ ಸೂಕ್ತ ನಿರ್ದೇಶನ ನೀಡಬೇಕು. ಹಾಗೂ ನಗರ ಬಸ್ ಸಾರಿಗೆ ಸಂಚಾರ ಮಾರ್ಗ ಬದಲಾವಣೆಗೆ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಈ ಸುದ್ದಿ ಓದಿದ್ದೀರಾ? ಬೀದರ್‌ | ಜನವಾಡ ಗ್ರಾಪಂ ಪಿಡಿಒ ವರ್ಗಾವಣೆಗೆ ಸದಸ್ಯರ ಆಗ್ರಹ

ಈ ಸಂದರ್ಭದಲ್ಲಿ ಕರ್ನಾಟಕ ಯುವ ರಕ್ಷಣಾ ವೇದಿಕೆ ಜಿಲಾಧ್ಯಕ್ಷ ಗುರುದಾಸ ಅಮದಲಪಾಡ, ಕರ್ನಾಟಕ ದಲಿತ ಸೇನೆ ಜಿಲ್ಲಾಧ್ಯಕ್ಷ ಧನರಾಜ ಕೋಳಾರ, ಕ.ಸ.ಸೇ ಜಿಲ್ಲಾಧ್ಯಕ್ಷ ಸಂಜು ಲಕ್ಷ್ಮೀದೊಡ್ಡಿ ಹಾಗೂ ಮಹೇಂದ್ರ ಹೊಸಮನಿ, ಬಸವರಾಜ ಬಾವಿದೂಡ್ಡಿ ಇನ್ನಿತರ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು | ಬೆಳೆ ನಷ್ಟ: ಇಬ್ಬರ ರೈತರ ಸಾವು 

ಸಕಾಲಕ್ಕೆ ಮಳೆಯಾಗದೆ ಬೆಳೆ ನಷ್ಟ ಉಂಟಾಗಿದ್ದು, ಸಾಲ ತೀರಿಸಲಾಗದೆ ಮನನೊಂದ ಇಬ್ಬರು...

ಆಡಳಿತದಲ್ಲಿ ಪಾರದರ್ಶಕತೆಗೆ ಮಾಹಿತಿ ಹಕ್ಕು ಕಾಯ್ದೆ ಪ್ರಮುಖ ಅಸ್ತ್ರ: ಹಣಮಂತ ಶಿಂದೆ

ಮಾಹಿತಿ ಹಕ್ಕು ಕಾಯ್ದೆಯ ಪರಿಣಾಮಕಾರಿ ಬಳಕೆ, ಆಡಳಿತದಲ್ಲಿ ಪಾರದರ್ಶಕತೆ ಹಾಗೂ ಸಾಮಾಜಿಕ...

ಯತ್ನಾಳ್ ವಿರುದ್ಧ ಹೊರ್ತಿ ವಾಗ್ದಾಳಿ; ಅರ್ಜಿ ವಾಪಸ್ ಪಡೆದ ಹಿಂದಿನ ಸತ್ಯ ಬಹಿರಂಗಪಡಿಸಲು ಸವಾಲು

ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕುವಂತೆ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಬರೆದಿರುವ...

ಆರೋಗ್ಯ ಸುರಕ್ಷತೆಗೆ ಆದ್ಯತೆ ನೀಡಿ: ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ

ಕೊಡಗು ಜಿಲ್ಲೆಯಲ್ಲಿ ಡೆಂಗ್ಯೂ, ಮಲೇರಿಯಾ ಸೇರಿದಂತೆ ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಅಗತ್ಯ...