ದಾವಣಗೆರೆ ಬರಪೀಡಿತ ಜಿಲ್ಲೆಯನ್ನಾಗಿ ಘೋಷಿಸುವಂತೆ ರೈತ ಸಂಘ ಆಗ್ರಹ

Date:

Advertisements
  • ಮೆಕ್ಕೆಜೋಳ ಸೇರಿದಂತೆ ಇತರೆ ಬೆಳೆಹಾನಿಗೆ ಪರಿಹಾರ ನೀಡುವಂತೆ ಒತ್ತಾಯ
  • ಆರ್ಥಿಕ ಸಂಕಷ್ಟದಿಂದ ರೈತರು ಬ್ಯಾಂಕುಗಳಲ್ಲಿ ಪಡೆದ ಸಾಲ ತೀರಿಸಲು ಸಾಧ್ಯವಾಗುತ್ತಿಲ್ಲ.

ಮೆಕ್ಕೆಜೋಳ ಸೇರಿದಂತೆ ಇತರೆ ಬೆಳೆಹಾನಿಗೆ ಪರಿಹಾರ ನೀಡುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ಕೇಂದ್ರ ಹಾಗೂ ರಾಜ್ಯ ಸರ್ಕಾರಕ್ಕೆ ಒತ್ತಾಯಿಸಿ ರಾಜ್ಯ ರೈತ ಸಂಘದ ಕಚೇರಿಯಿಂದ ಪ್ರತಿಭಟನಾ ಮೆರವಣಿಗೆ ಮೂಲಕ ತೆರಳಿ ಉಪವಿಭಾಗಾಧಿಕಾರಿಗೆ ಹಕ್ಕೊತ್ತಾಯ ಪತ್ರವನ್ನು ಸಲ್ಲಿಸಿದರು.

ರೈತ ಸಂಘದ ಜಿಲ್ಲಾ ಗೌರವಾಧ್ಯಕ್ಷ ಬುಳ್ಳಾಪುರದ ಹನುಮಂತಪ್ಪ ಮಾತನಾಡಿ, “ದಾವಣಗೆರೆ ಜಿಲ್ಲೆಯಲ್ಲಿ ರೈತರು ಬೆಳೆದ ಮೆಕ್ಕೆಜೋಳ ಮತ್ತು ಇತರೆ ಬೆಳೆಗಳು ಬಹುತೇಕ ಮಳೆ ಬಾರದೆ ಒಣಗುತ್ತಿವೆ. ರೈತರು ಕೃಷಿ ಮಾಡಲು ದುಬಾರಿ ಬಿತ್ತನೆ ಬೀಜ ರಸಗೊಬ್ಬರ, ಕೂಲಿಗೆ ಹಣ ಖರ್ಚು ಮಾಡಿ ಆರ್ಥಿಕ ಸಂಕಷ್ಟದಲ್ಲಿದ್ದಾರೆ’ ಎಂದು ಆಕ್ರೋಶ ವ್ಯಕ್ತಪಡಿಸಿದರು.

Advertisements

“ವಿದ್ಯುತ್ ಸರಬರಾಜಿನಲ್ಲಿಯೂ ವ್ಯತ್ಯಯ ಉಂಟಾಗಿದ್ದು, ರೈತರು ತೊಂದರೆ ಅನುಭವಿಸುತ್ತಿದ್ದಾರೆ. ಇದಲ್ಲದೇ ಪಂಪ್ ಸೆಟ್ ಗಳಿಗೆ ವಿದ್ಯುತ್‌ ನೀಡುವಲ್ಲಿ ಅಧಿಕಾರಿಗಳು ಮನಬಂದಂತೆ ವರ್ತಿಸುತ್ತಿದ್ದಾರೆ. ಈ ಎಲ್ಲಾ ಕಾರಣದಿಂದ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ದಾವಣಗೆರೆ ಜಿಲ್ಲೆಯನ್ನು ಬರಪೀಡಿತ ಎಂದು ಘೋಷಿಸಬೇಕು ಎಂದು ಒತ್ತಾಯಿಸಿದರು.

ಆರ್ಥಿಕ ಸಂಕಷ್ಟದಿಂದ ರೈತರು ಬ್ಯಾಂಕುಗಳಲ್ಲಿ ಪಡೆದ ಸಾಲ ತೀರಿಸಲು ಸಾಧ್ಯವಾಗುತ್ತಿಲ್ಲ. ಆದರೆ ಬ್ಯಾಂಕುಗಳು ರೈತರು ಸಾಲ ಪಾವತಿಸಬೇಕೆಂದು ಮೇಲಿಂದ ಮೇಲೆ ನೋಟೀಸ್ ನೀಡುತ್ತಿವೆ. ಕೂಡಲೇ ಸರ್ಕಾರ ರೈತರ ನೆರವಿಗೆ ಧಾವಿಸಬೇಕು. ಕೇಂದ್ರ ಹಾಗೂ ರಾಜ್ಯ ಸರ್ಕಾರದ ಸಚಿವರು, ಸಂಬಂಧಿಸಿದಂತೆ ಅಧಿಕಾರಿಗಳು ರೈತರು ಬೆಳೆದ ಬೆಳೆಗಳಿಗೆ ವೈಜ್ಞಾನಿಕ ಬೆಲೆ ನಿಗದಿ ಮಾಡಬೇಕು. ಇದಲ್ಲದೇ ರೈತರು ಎದುರಿಸುತ್ತಿರುವ ಸಮಸ್ಯೆಗಳನ್ನು ಬಗೆಹರಿಸಲು ಮುಂದಾಗಬೇಕು” ಎಂದು ಆಗ್ರಹಿಸಿದರು.

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ಸ್ಲಂ ನಿವಾಸಿಗಳಿಗೆ ನಿವೇಶನಕ್ಕೆ ಆಗ್ರಹಿಸಿ ಪ್ರತಿಭಟನೆ

ಈ ಸಂದರ್ಭದಲ್ಲಿ ರೈತ ಸಂಘದ ಪ್ರಮುಖರಾದ ಎಸ್ ಟಿ ಪರಮೇಶ್ವರಪ್ಪ, ಇ.ಶ್ರೀನಿವಾಸ್, ಕರಿಲಕ್ಕೇನಹಳ್ಳಿ ರೇವಣಸಿದ್ದಪ್ಪ, ಬಲ್ಲೂರು ನಾಗರಾಜ್ ರೆಡ್ಡಿ, ವಿಜಯಕುಮಾರ್, ಚಟ್ಟೋಬನಹಳ್ಳಿ ಕಮಲೇಶ್‌, ಈಚಘಟ್ಟದ
ವಿಜಯ್ ಕುಮಾರ್, ಕಿತ್ತೂರು ರುದ್ರೇಶ್, ಕುಮಾರ್, ಮಾಳಿಗೇರ ತಿಪ್ಪಣ್ಣ, ಬುಳ್ಳಾಪುರದ ಶರಣಪ್ಪ, ರುದ್ರೇಶ್, ಮಾಳಿಗೇರ ತಿಪ್ಪಣ್ಣ, ಬುಳ್ಳಾಪುರದ ಶರಣಪ್ಪ ಸೇರಿದಂತೆ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X